Exclusive: ವದಂತಿ ನಿಜವಾಯ್ತು 'ಟಾಕ್ಸಿಕ್' ಸೆಟ್‌ಗೆ ಮತ್ತಿಬ್ಬರು ಎಂಟ್ರಿ; 15 ದಿನಗಳ ಶೂಟಿಂಗ್ ಹೇಗಿತ್ತು?
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ದೇಶ-ವಿದೇಶದ ಕಲಾವಿದರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಇಲ್ಲದಿದ್ದರೂ ಪರೋಕ್ಷವಾಗಿ ಸಾಕಷ್ಟು ಇಂಟ್ರೆಸ್ಟಿಂಗ್ ಸಂಗತಿಗಳು ಬಹಿರಂಗವಾಗುತ್ತಿದೆ. ರಾಕಿಂಗ್ ಸ್ಟಾರ್ ಅಂಡ್ ಟೀಂ ದೊಡ್ಡದಾಗಿ ಏನೋ ಹೊತ್ತು ತರುತ್ತಿದ್ದಾರೆ.
ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿ ಆವರಣದಲ್ಲಿ ಅದ್ಧೂರಿ ಸೆಟ್ ನಿರ್ಮಿಸಿ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿದೆ. ಬಹುಕೋಟಿ ವೆಚ್ಚದಲ್ಲಿ ಯಶ್ ಹಾಗೂ ವೆಂಕಟ್ ಕೋನಂಕಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹಾಲಿವುಡ್ ತಂತ್ರಜ್ಞರು, ಕಲಾವಿದರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ 15 ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ.

ಯೂರೋಪ್ ಭಾಷೆಗಳಿಗೂ 'ಟಾಕ್ಸಿಕ್' ಸಿನಿಮಾ ಡಬ್ ಮಾಡಿ ರಿಲೀಸ್ ಮಾಡುವ ಪ್ರಯತ್ನ ನಡೆಯುತ್ತಿದೆ. ಹಾಗಾಗಿ ಬ್ರಿಟೀಷ್ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ. ಸದ್ಯ ಒಬ್ಬೊಬ್ಬರಾಗಿ ಬೆಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನು ಯಶ್ ಲುಕ್ ಕೂಡ ಅಭಿಮಾನಿಗಳ ಮನಗೆದ್ದಿದೆ. ಸ್ಟೈಲಿಶ್ ಅವತಾರದಲ್ಲಿ ರಾಕಿಂಗ್ ಸ್ಟಾರ್ ಫೋಟೊ, ವೀಡಿಯೋ ವೈರಲ್ ಆಗ್ತಿದೆ.
ಅಮೆರಿಕಾ ಮೂಲದ ಬಾಲಿವುಡ್ ನಟ ಅಕ್ಷಯ್ ಒಬೆರಾಯ್ 'ಟಾಕ್ಸಿಕ್' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರತಂಡ ತಮ್ಮನ್ನು ಸ್ವಾಗತಿಸಿದ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ ಈ ವಿಚಾರ ಖಚಿತಪಡಿಸಿದ್ದರು. ಇನ್ನು ತಮಿಳು ನಟಿ ನಯನತಾರ ಕೂಡ ಈಗಾಗಲೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್ ಮುಗಿಸಿ ಚೆನ್ನೈಗೆ ಹೋಗಿದ್ದ ಚೆಲುವೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಿ ಸೆಕೆಂಡ್ ಶೆಡ್ಯೂಲ್‌ನಲ್ಲಿ ಭಾಗಿ ಆಗಿದ್ದಾರೆ.
ಇದೀಗ ಬಾಲಿವುಡ್ ನಟಿ ತಾರ ಸುತಾರಿಯಾ ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿ ಆಗುತ್ತಿರುವ ಬಗ್ಗೆ ಪರೋಕ್ಷವಾಗಿ ಆಕೆ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಆಕೆ 'ಟಾಕ್ಸಿಕ್' ಚಿತ್ರದಲ್ಲಿ ನಟಿಸುವ ಬಗ್ಗೆ ಹಿಂದೆಯೇ ಗುಸುಗುಸು ಕೇಳಿಬಂದಿತ್ತು. ಅದು ಈಗ ನಿಜವಾದಂತೆ ಆಗಿದೆ.

ಇನ್ನು ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ 'ಟಾಕ್ಸಿಕ್' ಎಂದು ಬರೆದಿರುವ ಟೀಶರ್ಟ್ ಧರಿಸಿ ಕಾಣಿಸಿಕೊಂಡಿರುವ ಫೋಟೊಗಳು ವೈರಲ್ ಆಗುತ್ತಿದೆ. ಇನ್ನು ಇಂಗ್ಲೆಂಡ್ ಮೂಲದ ಬ್ರಿಟೀಷ್ ನಟ ಡ್ಯಾರೆಲ್ ಡಿಸಿಲ್ವಾ ಕೂಡ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿತ್ತು. ಅದು ಈಗ ಖಚಿತವಾಗಿದೆ. ಬೆಂಗಳೂರಿನಲ್ಲಿರುವ ಬಗ್ಗೆ ಅವರು ಸುಳಿವು ನೀಡಿದ್ದಾರೆ. ಯಶ್ ಎದುರು ಚಿತ್ರದಲ್ಲಿ ವಿಲನ್ ಆಗಿ ಡ್ಯಾರೆಲ್ ಡಿಸಿಲ್ವಾ ಅಬ್ಬರಿಸಲಿದ್ದಾರೆ.
ಅಂದಾಜು 200 ಕೋಟಿ ರೂ. ಬಜೆಟ್‌ನಲ್ಲಿ 'ಟಾಕ್ಸಿಕ್' ಸಿನಿಮಾ ಮೂಡಿ ಬರಲಿದೆ. ಹಾಲಿವುಡ್ ತಂತ್ರಜ್ಞರಾದ ಜೆಜೆ ಪೆರ್ರಿ ಹಾಗೂ ಸ್ಟೀವ್ ಗ್ರಿಫಿನ್ ಕೂಡ ತಂಡದಲ್ಲಿದ್ದಾರೆ. ಇನ್ನು ನಿರ್ದೇಶಕಿ ಗೀತು ಮೋಹನ್ ದಾಸ್ ಪತಿ ಛಾಯಾಗ್ರಾಹಕ ರಾಜೀವ್ ರವಿ ಚಿತ್ರವನ್ನು ಸೆರೆ ಹಿಡಿಯುತ್ತಿದ್ದಾರೆ. ಈಗಾಗಲೇ ಚಿತ್ರದ ಒಂದಷ್ಟು ಮೇಕಿಂಗ್ ಫೋಟೊಗಳು ಲೀಕ್ ಆಗಿ ವೈರಲ್ ಆಗಿತ್ತು.
60-70ರ ದಶಕದ ಡ್ರಗ್ಸ್ ಮಾಫಿಯಾ ಕಥೆ 'ಟಾಕ್ಸಿಕ್' ಚಿತ್ರದಲ್ಲಿದೆ. ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಆಗಿ ಅಬ್ಬರಿಸಲಿದ್ದಾರೆ. ಅವತ್ತಿನ ಕಾಲಘಟ್ಟ ಕಟ್ಟಿಕೊಡಲು ಚಿತ್ರತಂಡ ಸಾಕಷ್ಟು ಶ್ರಮವಹಿಸಿದೆ. ಭಾರೀ ಗ್ರಾಫಿಕ್ಸ್ ಕೂಡ ಚಿತ್ರದಲ್ಲಿ ಇರಲಿದೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೀತಿದೆ.


Click it and Unblock the Notifications











