ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ: ಬಾಲ್ಯದ ದಿನಗಳಿಗೆ ಜಾರಿದ ಅಣ್ಣ- ತಂಗಿ!

ಇತ್ತೀಚೆಗೆ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಹೊಸ ಬಾಳಿಗೆ ಕಾಲಿಟ್ಟರು. ವಿವಿಧ ಕ್ಷೇತ್ರಗಳ ಗಣ್ಯರು ಮದುವೆ ಹಾಗೂ ಆರತಕ್ಷತೆ ಸಮಾರಂಭಕ್ಕೆ ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದರು. ಸೋಮವಾರ ಧಾರೆ, ಬುಧವಾರ ಆರತಕ್ಷತೆ ಕಾರ್ಯಕ್ರಮ ಬಹಳ ಅದ್ಧೂರಿಯಾಗಿ ನಡೆಯಿತು. ಆರತಕ್ಷತೆ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್- ಸೌಂದರ್ಯ ಜಯಮಾಲಾ ಭೇಟಿ ಆಗಿದ್ದು ವಿಶೇಷ.

ಸ್ಯಾಂಡಲ್‌ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ. ಆದರೆ ಇಲ್ಲಿವರೆಯೂ ವಿನೋದ್ ಆಗಲಿ ಸೌಂದರ್ಯ ಆಗಲಿ ಯಾವುದೇ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಟೈಗರ್ ಪ್ರಭಾಕರ್ ಮೊದಲನೆ ಹೆಂಡತಿ ಮೇರೀ ಆಲ್ಫಾನ್ಸೋ ಪುತ್ರ ವಿನೋದ್. ಇನ್ನು ಜಯಮಾಲಾ 1985ರಲ್ಲಿ ಟೈಗರ್ ಪ್ರಭಾಕರ್ ಕೈ ಹಿಡಿದ್ದರು. 1986ರಲ್ಲಿ ಸೌಂದರ್ಯ ಹುಟ್ಟಿದ್ದರು. 1988ರಲ್ಲಿ ಪ್ರಭಾಕರ್- ಜಯಮಾಲಾ ದಂಪತಿ ಡಿವೋರ್ಸ್ ಪಡೆದು ದೂರಾಗಿದ್ದರು. (ವಿಕಿಪಿಡಿಯ ಮಾಹಿತಿ)

Brother Vinod Prabhakar and sister Soundarya Jayamala reunite after many Years

ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ. ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ ಗಾಂಧಿನಗರ ಮಾತಾಡಿಕೊಳ್ಳುವ ರೀತಿ ಸಂಬಂಧವೇನು ಅಳಸಿಲ್ಲವಂತೆ.

ಅಣ್ಣ- ತಂಗಿ ಮುಖಾಮುಖಿ

ವಿನೋದ್ ಹಾಗೂ ಸೌಂದರ್ಯ ಇಂದಿಗೂ ಎಂದೆಂದಿಗೂ ಅಣ್ಣ ತಂಗಿಯೇ. ಆದ್ರೆ ಅವರಿಬ್ಬರನ್ನು ಅವರ ಅಕ್ಕ-ಪಕ್ಕದವರು ಭೇಟಿ ಮಾಡಲಾಗದಂತೆ ನೋಡಿಕೊಂಡಿದ್ದರು ಎನ್ನಲಾಗ್ತಿದೆ. ಆದ್ರೆ ಸಮಯ, ಸಂದರ್ಭ ಸಂಬಂಧಗಳನ್ನು ಮತ್ತೆ ಬೆಸೆಯುವಂತೆ ಮಾಡಿದೆ. ಮೊನ್ನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಆರತಕ್ಷತೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ.

Brother Vinod Prabhakar and sister Soundarya Jayamala reunite after many Years

ಬಾಲ್ಯದ ದಿನಗಳಿಗೆ ಜಾರಿದ ವಿನೋದ್- ಸೌಂದರ್ಯ

ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯ ಅವರದ್ದಾಗಿತ್ತು. ಈ ಭೇಟಿ ಸಮಯದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ. ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಚರ್ಚೆ ನಡೆಸಿದ್ದಾರೆ. ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಸಿನಿಮಾಗಳಲ್ಲಿ ಸೌಂದರ್ಯ ನಟನೆ

ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ. ಅದು ಬಿಟ್ರೆ ಅವ್ರು ದೂರವಾಗಿದ್ದರೆ ,ಅವ್ರ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋ ಮಾತುಗಳು ಸತ್ಯಕ್ಕೆ ದೂರವಾದುದ್ದು ಅನ್ನೋದು ಈಗ ಬಹಿರಂಗವಾಗಿದೆ. ಸೌಂದರ್ಯ ಜಯಮಾಲಾ ಕೂಡ ತಾಯಿಯ ಹಾದಿಯಲ್ಲಿ ಚಿತ್ರರಂಗಕ್ಕೆ ಬಂದಿದ್ದರು. ಒಂದೆರಡು ಸಿನಿಮಾಗಳಲ್ಲಿ ನಟಿಸಿದರು. ಆದರೆ ಯಾಕೋ ನಂತರ ಸೈಲೆಂಟ್ ಆಗಿದ್ದರು.

ನಿರ್ಮಾಪಕರಾದ ವಿನೋದ್

20 ವರ್ಷಗಳ ಹಿಂದೆ 'ದಿಲ್' ಸಿನಿಮಾ ಮೂಲಕ ವಿನೋದ್ ಪ್ರಭಾಕರ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ 'ಲಂಕಾಸುರ' ಚಿತ್ರದ ಮೂಲಕ ನಿರ್ಮಾಪಕರು ಆಗಿದ್ದಾರೆ. ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. 'ಮಾದೇವ' ಎನ್ನುವ ಮತ್ತೊಂದು ಚಿತ್ರದಲ್ಲೂ ಮರಿ ಟೈಗರ್ ಬಣ್ಣ ಹಚ್ಚಿದ್ದಾರೆ. ಎರಡು ಸಿನಿಮಾಗಳು ರಿಲೀಸ್ ಆಗಬೇಕಿದೆ.

More from Filmibeat

English summary
Brother Vinod Prabhakar and sister Soundarya Jayamala reunite after many Years. The Both met at Abhishek Ambareesh and Aviva Bidapa Marriage reception Party. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X