Buddhivantha 2 Release Date: ಉಪೇಂದ್ರ 'ಬುದ್ಧಿವಂತ 2' ಚಿತ್ರದ ರಿಲೀಸ್ ಡೇಟ್ ಪ್ರಕಟ

ಈ ವರ್ಷ ಕಬ್ಜ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಲು ಮುಂದಾಗಿ ಹೆಚ್ಚೇನೂ ಯಶಸ್ಸು ಸಾಧಿಸದೇ ಇರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮುಂದಿನ ಚಿತ್ರಗಳ ಮೇಲೆ ಸದ್ಯಕ್ಕೆ ಎಲ್ಲರ ಚಿತ್ತ ನೆಟ್ಟಿದೆ. ಉಪ್ಪಿ ಸದ್ಯ ತಮ್ಮದೇ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ 'ಯುಐ'ನಲ್ಲಿ ನಿರತರಾಗಿದ್ದಾರೆ. ಇನ್ನು ಈಗಾಗಲೇ ಚಿತ್ರೀಕರಣವನ್ನು ಮುಗಿಸಿರುವ ಉಪ್ಪಿ ನಟನೆಯ ಸಿನಿಮಾ 'ಬುದ್ಧಿವಂತ 2' ಸಹ ಬಿಡುಗಡೆಗೆ ಸಿದ್ಧವಾಗಿದೆ.

ಇನ್ನು 'ಬುದ್ದಿವಂತ 2' ರಿಲೀಸ್‌ಗೆ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಸಿನಿಮಾ ಟೀಸರ್ ರಿವೀಲ್ ಆಗಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೇ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಯಾಕೋ ಅದು ಸಾಧ್ಯವಾಗಲೇ ಇಲ್ಲ. ಟೈಟಲ್ ಹಾಗೂ ಪೋಸ್ಟರ್‌ಗಳಿಂದ ಸದ್ದು ಮಾಡುತ್ತಿರುವ ಸಿನಿಮಾ ಸೆಪ್ಟೆಂಬರ್‌ನಲ್ಲಿ ಥಿಯೇಟರ್‌ ಅಂಗಳಕ್ಕೆ ಬರಲಿದೆ.

Buddhivantha 2 Release Date

ನಿರ್ದೇಶಕ ಆರ್‌. ಚಂದ್ರು ಗರಡಿಯಲ್ಲಿ ಪಳಗಿದ ಜಯರಾಮ್ ಮಾಧವನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಜರುಗುತ್ತಿವೆ. ಕೋವಿಡ್‌ಗೂ ಮುನ್ನವೇ ಈ ಸಿನಿಮಾ ಚಿತ್ರೀಕರಣವಾಗಿತ್ತು. ಆದರೆ ಸಿನಿಮಾ ಯಾಕೋ ಥಿಯೇಟರ್ ಕಡೆ ಮುಖ ಮಾಡಲಿಲ್ಲ. 'ಚಮಕ್, 'ಅಯೋಗ್ಯ' ಸಿನಿಮಾಗಳ ನಿರ್ಮಾಪಕ ಡಾ.ಟಿ.ಆರ್ ಚಂದ್ರಶೇಖರ್ 'ಬುದ್ದಿವಂತ- 2' ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೀಗೆ ಕೊವಿಡ್‌ಗೂ ಮುನ್ನವೇ ಚಿತ್ರೀಕರಣಗೊಂಡಿರುವ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಯಾವಾಗ ಎಂಬ ಪ್ರಶ್ನೆ ಉಪ್ಪಿ ಅಭಿಮಾನಿಗಳಲ್ಲಿ ಹಾಗೂ ಸಿನಿ ರಸಿರಲ್ಲಿ ಕಾಡಿತ್ತು. ಈ ಪ್ರಶ್ನೆಗೆ ಇದೀಗ ಚಿತ್ರತಂಡ ಉತ್ತರಿಸಿದ್ದು, ಸೆಪ್ಟೆಂಬರ್ 15ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಪ್ರಕಟಿಸಿದೆ.

ಈ ಹಿಂದೆ ಉಪೇಂದ್ರ ನಟನೆಯ ಬುದ್ಧಿವಂತ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ತಮಿಳಿನ ಸೂಪರ್ ಹಿಟ್ ಸಿನಿಮಾ 'ನಾನ್ ಅವನ್ ಇಲ್ಲೈ'ನ ರಿಮೇಕ್ ಆಗಿದ್ದ ಬುದ್ಧಿವಂತ ಸಿನಿಮಾವನ್ನು ಸಿನಿ ರಸಿಕರು ಮೆಚ್ಚಿ ಒಪ್ಪಿಕೊಂಡಿದ್ದರು.

ಹೀಗೆ ಅಂದು ನಾವು ವೀಕ್ಷಿಸಿದ್ದ ಬುದ್ಧಿವಂತ ಸಿನಿಮಾಗೂ ಈ ಚಿತ್ರಕ್ಕೂ ನಂಟಿದೆಯಾ, ಇದು ಆ ಚಿತ್ರದ ಸೀಕ್ವೆಲ್ಲಾ, ಚಿತ್ರದ ಕತೆ ಯಾವ ರೀತಿ ಇರಲಿದೆ ಎಂಬ ಕುತೂಹಲ ಹಾಗೂ ಪ್ರಶ್ನೆಗಳು ಸಿನಿ ರಸಿಕರನ್ನು ಕಾಡುತ್ತಿದ್ದು, ಈ ಪ್ರಶ್ನೆಗಳಿಗೆಲ್ಲಾ ಶೀಘ್ರದಲ್ಲಿಯೇ ಉತ್ತರ ಸಿಗಲಿದೆ. ಹೀಗೆ ತಕ್ಕಮಟ್ಟಿಗೆ ಹೈಪ್ ಹೊಂದಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್. ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಮಾಡಿದ್ದಾರೆ.

More from Filmibeat

English summary
Buddhivantha 2: Upendra starrer Buddhivantha 2 releasing on September 15
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X