ದರ್ಶನ್ ಬಂಧಿಸದಂತೆ ರಾಜಕಾರಣಿಗಳು, ಸ್ಯಾಂಡಲ್‌ವುಡ್ ತಾರೆಯರು ಒತ್ತಡ ಹಾಕಿದ್ರಾ?

By ಫಿಲ್ಮಿಬೀಟ್ ಡೆಸ್ಕ್

ಇಂದು (ಜೂನ್ 11) ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ರನ್ನು ವಶಕ್ಕೆ ಪಡೆದ ಬಳಿಕ ಪೊಲೀಸರು ತೀವ್ರವಾಗಿ ವಿಚಾರಣೆ ಮಾಡುತ್ತಿದ್ದಾರೆ. ಬೆಳಗ್ಗೆಯಿಂದಲ್ಲೂ ದರ್ಶನ್ ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ದರ್ಶನ್‌ರನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗುತ್ತೆ.

ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಂಕಷ್ಟಕ್ಕೆ ಸಿಲುಕಿರೋದು ನಿಜ. ಕಳೆದ ಎರಡು ದಿನಗಳಿಂದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಬಗ್ಗೆ ಸುಳಿವು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ಮುಂದಾಗಿದ್ದರು. ಅದಕ್ಕೂ ಮುನ್ನ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದರು ಎನ್ನಲಾಗಿದೆ.

Buzz is that politicians and Sandalwood celebrities are forcing police not to arrest Darshan

ದರ್ಶನ್ ಕನ್ನಡ ಚಿತ್ರರಂಗದ ಪ್ರಮುಖ ವ್ಯಕ್ತಿ. ಅವರದ್ದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ಪ್ರಮುಖ ವ್ಯಕ್ತಿಯನ್ನು ಬಂಧಿಸುವಾಗ ಹಲವು ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತೆ. ಅಲ್ಲದೆ, ಲಾ ಅಂಡ್ ಆರ್ಡರ್ ಅನ್ನೂ ನೋಡಿಕೊಳ್ಳಬೇಕಾಗುತ್ತೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ದರ್ಶನ್ ಅಂತಹ ಪ್ರಮುಖ ವ್ಯಕ್ತಿಯನ್ನು ಬಂಧಿಸುವಾಗ ಸಾಕಷ್ಟು ತಮ್ಮ ಮೇಲಾಧಿಕಾರಿಗಳ ಜೊತೆ ಚರ್ಚೆ ಆಗುತ್ತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲೂ ಪೊಲೀಸರು ಹೀಗೆ ಚರ್ಚೆ ಮಾಡಿದ್ದರು. ಈ ವೇಳೆ ಪೊಲೀಸ್ ಕಮಿಷನರ್ ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಒತ್ತಡ ಬಂದಿತ್ತು ಅನ್ನೋ ವಿಷಯ ಓಡಾಡುತ್ತಿದೆ. ರಾಜಕೀಯ ಮುಖಂಡರು ಹಾಗೂ ಸ್ಯಾಂಡಲ್‌ವುಡ್‌ನ ತಾರೆಯರು ದರ್ಶನ್ ಅವರನ್ನು ಬಂಧಿಸದೆ ಒತ್ತಡ ಹಾಕಿದ್ದರು ಅನ್ನೋ ಮಾತು ಕೂಡ ಕೇಳಿಬರುತ್ತಿದೆ.

Buzz is that politicians and Sandalwood celebrities are forcing police not to arrest Darshan

ದರ್ಶನ್ ಅವರನ್ನು ಬಂಧಿಸಬೇಡಿ, ಬದಲಾಗಿ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಕೆಲವು ರಾಜಕೀಯ ಮುಖಂಡರು ಹೇಳಿದ್ದರು. ಈ ಎಲ್ಲಾ ಒತ್ತಡಕ್ಕೆ ಮಣಿಯದೆ ಪೊಲೀಸರು ದರ್ಶನ್ ಅವರನ್ನು ಬಂಧಿಸಲು ಮುಂದಾಗಿದ್ದರು ಅಂತ ವರದಿಗಳಾಗಿವೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿದೆ.

ವಿಚಾರಣೆ ಬಳಿಕ ದರ್ಶನ್ ಅವರನ್ನು ವೈದ್ಯಕೀಯರ ಪರೀಕ್ಷೆಗೆ ಕರೆದುಕೊಂಡು ಹೋಗುತ್ತಾರೆ ಎನ್ನಲಾಗಿದೆ. ಆ ಬಳಿಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಇನ್ನೂ ದರ್ಶನ್ ಮೇಲಿನ ವಿಚಾರಣೆ ಇನ್ನೂ ಮುಗಿಯದೇ ಇರುವುದರಿಂದ ಇನ್ನೂ ಹೆಚ್ಚು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಇನ್ನೂ ತೀವ್ರವಾಗಿ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

More from Filmibeat

English summary
Politicians and Sandalwood celebrities pressurized Police not to arrest Darshan:
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X