ರಾಕಿಂಗ್ 'ಟಾಕ್ಸಿಕ್' ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಯ್ತಾ?

ವರ್ಷದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್'. ಗೀತು ಮೋಹನ್ ದಾಸ್ ನಿರ್ದೇಶನದ ಚಿತ್ರದಲ್ಲಿ ಯಶ್ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗ್ತಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ. ಹಾಲಿವುಡ್‌ ದೊಡ್ಡ ಸಂಸ್ಥೆ ಜೊತೆ ಯಶ್ ಚರ್ಚಿಸುತ್ತಿದ್ದಾರೆ ಎನ್ನಲಾಗ್ತಿದೆ.

'KGF' ಸರಣಿ ಬಳಿಕ ವಾಟ್ ನೆಕ್ಸ್ಟ್ ಎನ್ನುವ ಪ್ರಶ್ನೆಗೆ ವರ್ಷದ ಹಿಂದೆ 'ಟಾಕ್ಸಿಕ್' ಎನ್ನುವ ಉತ್ತರ ಕೊಟ್ಟಿದ್ದರು ಯಶ್. ಆದರೆ ಸಿನಿಮಾ ಶುರುವಾಗುವುದು ತಡವಾಗಿತ್ತು. ಆಗಸ್ಟ್‌ನಲ್ಲಿ ಸಿನಿಮಾ ಸೆಟ್ಟೇರಿತ್ತು. ಈ ವರ್ಷ ಏಪ್ರಿಲ್‌ 10ಕ್ಕೆ ಸಿನಿಮಾ ರಿಲೀಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಸಿನಿಮಾ ಪ್ರಾರಂಭ ತಡವಾಗಿದ್ದರಿಂದ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗಿದೆ.

Buzz Rocking Star Yash s Toxic Teaser or first look poster To Release On His Birthday

ಅಭಿಮಾನಿಗಳಂತೂ 'ಟಾಕ್ಸಿಕ್' ಅಪ್‌ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ಸಣ್ಣ ಮೋಷನ್ ಪೋಸ್ಟರ್ ಬಿಟ್ಟು ಚಿತ್ರವನ್ನು ಘೋಷಿಸಲಾಗಿತ್ತು. ಬಳಿಕ ಪೂಜೆ ನೆರವೇರಿಸಿ ಚಿತ್ರೀಕರಣ ಆರಂಭಿಸಲಾಗಿತ್ತು. ಇನ್ನುಳಿದಂತೆ ಯಾವುದೇ ಮಾಹಿತಿ ಸಿಗಲಿಲ್ಲ. 300 ರಿಂದ 400 ಕೋಟಿ ರೂ. ಬಜೆಟ್‌ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ ಎನ್ನುವ ಚರ್ಚೆ ನಡೀತಿದೆ. ಇತ್ತೀಚೆಗೆ ತಿಂಗಳ ಕಾಲ ಮುಂಬೈನಲ್ಲಿ ಚಿತ್ರೀಕರಣ ನಡೆಸಲಾಗಿತ್ತು.

ನಯನತಾರ, ಕಿಯಾರಾ ಅದ್ವಾನಿ, ಹುಮಾ ಖುರೇಶಿ ಸೇರಿದಂತೆ ಜನಪ್ರಿಯ ಕಲಾವಿದರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಯೂರೋಪ್ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 60, 70ರ ದಶಕದ ಕಥೆ ಇದು, ಡ್ರಗ್ಸ್ ಮಾಫಿಯಾ ಸುತ್ತಾ ಸಿನಿಮಾ ಸುತ್ತುತ್ತದೆ ಎಂದು ಹೇಳಲಾಗುತ್ತಿದೆ. ಹಾಲಿವುಡ್ ತಂತ್ರಜ್ಞರು 'ಟಾಕ್ಸಿಕ್' ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ.

ಜನವರಿ 8ರಂದು ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅದೇ ಸಂಭ್ರಮದಲ್ಲಿ 'ಟಾಕ್ಸಿಕ್' ಟೀಸರ್ ರಿಲೀಸ್ ಆಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹುಟ್ಟುಹಬ್ಬದ ದಿನ ಊರಿನಲ್ಲಿ ಇರಲ್ಲ. ಯಾರು ಕೂಡ ಮನೆ ಬಳಿ ಬರಬೇಡಿ, ಎಚ್ಚರದಿಂದ ಇರಿ. ಬ್ಯಾನರ್, ಫ್ಲೆಕ್ಸ್ ಕಟ್ಟಲು ಹೋಗಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಪತ್ರ ಬರೆದು ಮನವಿ ಮಾಡಿದ್ದರು.

ಅಭಿಮಾನಿಗಳು ಕಾಮನ್ ಸಿಡಿಪಿ ರಿಲೀಸ್ ಮಾಡಿ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದಾರೆ. ಇನ್ನು ಯಶ್ ಬರೆದ ಪತ್ರದಲ್ಲಿದ್ದ ಒಂದು ಲೋಗೊ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೀತಿದೆ. ಗಂಡಭೇರುಂಡ ಪಕ್ಷಿಯ ಚಿಹ್ನೆ ಇರುವ ಚಿತ್ರದ ಮೂಲಕ 'ಟಾಕ್ಸಿಕ್' ಬಗ್ಗೆ ಯಶ್ ಸುಳಿವು ಕೊಟ್ಟಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕೈಗೆ ಸಿಗದೇ ಇದ್ದರೂ 'ಟಾಕ್ಸಿಕ್' ಟೀಸರ್ ಗಿಫ್ಟ್ ಸಿಗುತ್ತದೆ ಎಂದು ಕಾಯುತ್ತಿದ್ದಾರೆ. ಕೊನೆ ಪಕ್ಷ ಫಸ್ಟ್ ಲುಕ್ ಪೋಸ್ಟರ್ ಆದರೂ ಹೊರಬೀಳುತ್ತದೆ ಎನ್ನುವ ನಿರೀಕ್ಷೆಯಿದೆ. ಡಿಸೆಂಬರ್‌ನಲ್ಲಿ ಸಿನಿಮಾ ರಿಲೀಸ್ ಆಗಬಹುದು. ಪೋಸ್ಟರ್‌ನಲ್ಲೇ ಆ ಬಗ್ಗೆ ಅಪ್‌ಡೇಟ್ ಸಿಗುತ್ತದೆ ಎಂದು ಅಂದಾಜಿಸಲಾಗುತ್ತಿದೆ. ಬಹಳ ಹಿಂದೆಯೇ ಯಶ್ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪ್ರಶ್ನೆ ಕೇಳಿದ್ದರು. 'ಟಾಕ್ಸಿಕ್' ಚಿತ್ರದ ಅಪ್‌ಡೇಟ್ ಹಂಚಿಕೊಳ್ಳಬೇಕಾ? ಬೇಡ್ವಾ? ಎಂದು ಕುತೂಹಲಕಾರಿ ಪೋಸ್ಟ್ ಹಾಕಿದ್ದರು.

'ಟಾಕ್ಸಿಕ್' ಮಾತ್ರವಲ್ಲದೇ ಯಶ್ 'ರಾಮಾಯಣ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎರಡೂ ಚಿತ್ರಗಳಿಗೆ ನಿರ್ಮಾಪಕರಾಗಿಯೂ ಕೈ ಜೋಡಿಸಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ 'ರಾಮಾಯಣ' ಚಿತ್ರದಿಂದ ಏನಾದರೂ ಮಾಹಿತಿ ಸಿಗುತ್ತಾ ಎಂದು ಅಭಿಮಾನಿಗಳು ಬೆರಗುಗಣ್ಣಿನಿಂದ ಕಾಯುತ್ತಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಪದೇ ಪದೆ ಕೆಜಿಎಫ್-3 ಬಗ್ಗೆ ಪ್ರಸ್ತಾಪಿಸುತ್ತಿದೆ. ಆ ಬಗ್ಗೆ ಏನಾದರೂ ಅಪ್‌ಡೇಟ್ ಬರುತ್ತಾ ಕಾದು ನೋಡಬೇಕಿದೆ. ಇನ್ನು ಸದ್ಯ ಯಶ್ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವ ವೀಡಿಯೋ ವೈರಲ್ ಆಗುತ್ತಿದೆ. ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ ಎನ್ನಲಾಗುತ್ತಿದೆ.

More from Filmibeat

English summary
Makers planning to release Toxic Teaser on Yash's birthday?;
Read more about: yash toxic sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X