'ಟಾಕ್ಸಿಕ್' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಮುಂಬೈ ಬೆಡಗಿ ಎಂಟ್ರಿ!
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹರಿದಾಡ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಯಶ್ ಕೂಡ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ನಿರ್ಮಾಣವಾಗ್ತಿದೆ. ಶೀಘ್ರದಲ್ಲೇ ಅಲ್ಲಿ ಶೂಟಿಂಗ್ ಶುರುವಾಗಲಿದೆ.
ಗೀತು ಮೋಹನ್ ದಾಸ್ ನಿರ್ದೇಶನದ ಈ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ರಾಕಿ ಭಾಯ್ ಮೀರಿಸುವಂತಹ ಪಾತ್ರದಲ್ಲಿ ಯಶ್ ನಟಿಸಲು ಮುಂದಾಗಿದ್ದಾರೆ. ಅಂದಾಜು 180 ಕೋಟಿ ರೂ. ವೆಚ್ಚದಲ್ಲಿ 'ಟಾಕ್ಸಿಕ್' ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೀತಿದೆ. ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುವ ಸಾಧ್ಯತೆಯಿದೆ. ಇನ್ನು ಅಕ್ಕಪಕ್ಕದ ಇಂಡಸ್ಟ್ರಿ ಕಲಾವಿದರು ನಟಿಸಲಿದ್ದಾರೆ.

'KGF-2' ಬಳಿಕ ಯಶ್ ನಟಿಸುತ್ತಿರುವ ಸಿನಿಮಾ ಆಗಿರುವುದರಿಂದ ಸಹಜವಾಗಿಯೇ ಹೈಪ್ ಕ್ರಿಯೇಟ್ ಆಗಿದೆ. ಪರಭಾಷಿಕರು ಕೂಡ ಬೆರಗುಗಣ್ಣಿನಿಂದ 'ಟಾಕ್ಸಿಕ್' ಕಡೆ ನೋಡುವಂತಾಗಿದೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ಬಿಡುಗಡೆ ಮಾಡುವುದಾಗಿಯೂ ಚಿತ್ರತಂಡ ಘೋಷಿಸಿದೆ. ಚಿತ್ರದ ಕಥೆ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಸುತ್ತಾ ಸುತ್ತುವ ಸಿನಿಮಾ ಎನ್ನುವ ಲೆಕ್ಕಾಚಾರ ಕೆಲವರದ್ದು.
'ಟಾಕ್ಸಿಕ್' ಚಿತ್ರದ ನಾಯಕಿ ಯಾರು ಎನ್ನುವ ಚರ್ಚೆ ನಡೆಯುತ್ತಲೇ ಇದೆ. ಮೊದಲಿಗೆ ಕರೀನಾ ಕಪೂರ್ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಯಿತು. ಬಳಿಕ ಆಕೆ ನಾಯಕಿ ಅಲ್ಲ, ಯಶ್ ಸಹೋದರಿ ಪಾತ್ರ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಯಿತು. ಸಾಯಿ ಪಲ್ಲವಿ ಸೇರಿದಂತೆ ಸಾಕಷ್ಟು ನಟಿಯರ ಹೆಸರುಗಳು ಚಿತ್ರದ ನಾಯಕಿ ಪಾತ್ರಕ್ಕೆ ಕೇಳಿಬಂತು. ಅದರಲ್ಲಿ ಕಿಯಾರಾ ಅದ್ವಾನಿ ಹೆಸರು ಇದೆ.
ಯಶ್ ಜೊತೆ 'ಟಾಕ್ಸಿಕ್' ಚಿತ್ರದಲ್ಲಿ ಕಿಯಾರಾ ಅದ್ವಾನಿ ನಟಿಸೋದು ಬಹುತೇಕ ಖಚಿತ ಎನ್ನಲಾಗ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಲಿದೆ. ಬಾಲಿವುಡ್ ಬಿಟ್ಟು ಈಗಾಗಲೇ ಕಿಯಾರಾ ಸೌತ್ ಸಿನಿಮಾಗಳ ಕಡೆ ಮುಖ ಮಾಡಿದ್ದಾರೆ. ತೆಲುಗಿನಲ್ಲಿ ರಾಮ್‌ಚರಣ್ ಜೊತೆ 'ಗೇಮ್ ಚೇಂಜರ್' ಚಿತ್ರದಲ್ಲಿ ನಟಿಸಿದ್ದಾರೆ. ಇದೀಗ 'ಟಾಕ್ಸಿಕ್' ಚಿತ್ರಕ್ಕೆ ಸ್ಯಾಂಡಲ್‌ವುಡ್ ಎಂಟ್ರಿ ಆಗುತ್ತಿದೆ.

ಮುಂಬೈ ಬೆಡಗಿ ಕಿಯಾರಾ ಅದ್ವಾನಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಆಕೆಗೆ ದೊಡ್ಡ ಬ್ರೇಕ್ ಮಾತ್ರ ಸಿಕ್ಕಿಲ್ಲ. ಬಿಂದಾಸ್ ಬೆಡಗಿಯಾಗಿ ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಕಿಯಾರಾ ಇದೀಗ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕಳೆದ ವರ್ಷವಷ್ಟೆ ನಟ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಕಿಯಾರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಹೃತಿಕ್ ರೋಷನ್ ಹಾಗೂ ಜ್ಯೂ. ಎನ್‌ಟಿಆರ್ ನಟನೆಯ 'ವಾರ್- 2' ಚಿತ್ರದಲ್ಲಿ ಕೂಡ ಆಕೆ ಬಣ್ಣ ಹಚ್ಚಿದ್ದಾರೆ.
ಕಿಯಾರಾ ಅದ್ವಾನಿ ಮಾತ್ರವಲ್ಲದೇ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ, ಮಲಯಾಳಂ ನಟ ಶೈನ್ ಟಾಮ್ ಚಾಕೋ ಕೂಡ 'ಟಾಕ್ಸಿಕ್' ತಂಡ ಸೇರುತ್ತಾರೆ ಎನ್ನಲಾಗ್ತಿದೆ. ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ಸೌತ್ ಸಿನಿಮಾಗಳಲ್ಲಿ ಬಾಲಿವುಡ್ ಕಲಾವಿದರು ನಟಿಸೋದು ಕಾಮನ್ ಆಗಿಬಿಟ್ಟಿದೆ. ಸಂಜಯ್ ದತ್, ಆಲಿಯಾ ಭಟ್, ಸಲ್ಮಾನ್ ಖಾನ್ ಸೇರಿದಂತೆ ಹಲವರು ಪ್ರಾದೇಶಿಕ ಭಾಷೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಜೆರೆಮಿ ಸ್ಟಾಕ್ ಸಂಗೀತ ಹಾಗೂ ರಾಜೀವ್ ರವಿ ಛಾಯಾಗ್ರಹಣ 'ಟಾಕ್ಸಿಕ್' ಚಿತ್ರಕ್ಕೆ ಬಹುತೇಕ ಖಚಿತ ಎನ್ನಲಾಗ್ತಿದೆ. ಇನ್ನು ಚಿತ್ರದಲ್ಲಿ ಕರೀನಾ ಕಪೂರ್ ನಟಿಸುವ ಬಗ್ಗೆಯೂ ಶೀಘ್ರದಲ್ಲೇ ಮಾಹಿತಿ ಲಭ್ಯವಾಗಲಿದೆ. 'ಟಾಕ್ಸಿಕ್' ಜೊತೆ ಜೊತೆಗೆ ಬಾಲಿವುಡ್‌ನಲ್ಲಿ 'ರಾಮಾಯಣ' ಚಿತ್ರವನ್ನು ಯಶ್ ನಿರ್ಮಾಣ ಮಾಡಲಿದ್ದಾರೆ.


Click it and Unblock the Notifications











