twitter
    For Quick Alerts
    ALLOW NOTIFICATIONS  
    For Daily Alerts

    ಅಪ್ಪುಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಾಧ್ಯವಿಲ್ಲ: ಸಚಿವ ಸುನೀಲ್ ಕುಮಾರ್

    By ಮಂಗಳೂರು ಪ್ರತಿನಿಧಿ
    |

    ಕನ್ನಡದ ಕೋಟಿಹೃದಯಾಧಿಪತಿ ಪುನೀತ್ ರಾಜ್ ಕುಮಾರ್ ನಿಧನವಾಗಿರುವ ಸುದ್ದಿ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ನಡುವೆ ಪುನೀತ್ ರಾಜ್ ಕುಮಾರ್‌ಗೆ ರಾಜ್ಯ ಸರ್ಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ‌. ಇದರ ನಡುವೆ ಹಲವು ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಆದರೆ ಅಪ್ಪು ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಾಧ್ಯವಿಲ್ಲ ಎಂದು ಇಂಧನ ಮತ್ತು ಕನ್ನಡ, ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕುಮಾರ್, ಪುನೀತ್ ಗೆ ಮರಣೋತ್ತರ ರಾಜ್ಯ ಪ್ರಶಸ್ತಿ ನೀಡಲು ಸಾಧ್ಯವಿಲ್ಲ ಅಂತಾ ಸ್ಪಷ್ಟನೆ ನೀಡಿದ್ದಾರೆ.

    ಪುನೀತ್ ರಾಜಕುಮಾರ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಸರಕಾರ ಎಚ್ಚರಿಕೆಗಳ ತೆಗೆದುಕೊಂಡು ಪುನೀತ್ ರಾಜ್ ಕುಮಾರ್ ಶ್ರದ್ಧಾಂಜಲಿ ಅರ್ಪಿಸಿದೆ. ರಾಜ್ ಕುಟುಂಬದ ಅಭಿಪ್ರಾಯ, ಅಭಿಮಾನಿಗಳ ಆಸೆಯಂತೆಯೇ ಪುನೀತ್ ಅಂತಿಮ ವಿಧಿವಿಧಾನವನ್ನು ಯಾವುದೇ ವಿಘ್ನವಿಲ್ಲದೇ ಸರ್ಕಾರ ನೆರವೇರಿಸಿದೆ.

    Can Not Give Posthumous Rajyothsava Award To Puneeth Rajkumar: Minister Sunil Kumar

    ಈ ನಡುವೆ ಪುನೀತ್ ಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂದಿದೆ. ಆದರೆ ರಾಜ್ಯೋತ್ಸವ ಪ್ರಶಸ್ತಿಯ ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ. ಹಾಗಾಗಿ ಈ ಬೇಡಿಕೆ ಪರಿಗಣಿಸಲು ಸಾಧ್ಯವಾಗಿಲ್ಲ ಎಂದು ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಆದರೆ ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನು ಪರಿಗಣಿಸುತ್ತೇವೆ. ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಅಂತಾ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಪುನೀತ್ ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಎಲ್ಲವನ್ನೂ ಏಕಾಏಕಿ ನಿರ್ಧಾರ ಮಾಡೋಕೆ ಸಾಧ್ಯವಿಲ್ಲ. ಸಭೆ ಕರೆದು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಅಂತಾ ಸುನೀಲ್ ಕುಮಾರ್ ಹೇಳಿದ್ದಾರೆ.

    ಇನ್ನು ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಒತ್ತಾಯ ಕೂಡಾ ಜೋರಾಗಿದೆ. ಸ್ವತಃ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಟ್ವೀಟ್ಟರ್ ನಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಚಿತ್ರರಂಗಕ್ಕೆ, ಸಾಮಾಜಿಕವಾಗಿ ನೀಡಿರುವ ಸೇವೆ ಅನನ್ಯವಾಗಿದೆ. ಹೀಗಾಗಿ ಅಭಿಮಾನಿಗಳೆಲ್ಲಾ ಸರ್ಕಾರವನ್ನು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದ್ದಾರೆ.

    English summary
    Minister Sunil Kumar said due to some rules and court order can not give posthumous Kannada Rajyothsava to Puneeth Rajkumar.
    Monday, November 1, 2021, 18:37
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X