Gurukiran: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ!

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಡಿಸೆಂಬರ್ 31ರಂದು ಘಟನೆ ನಡೆದಿದ್ದು, ಕಳ್ಳತನ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗುರುಕಿರಣ್ ಮನೆಯವರು ಪೊಲೀಸ್ ದೂರು ದಾಖಲಿಸಿದ್ದಾರೆ.

ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರಿನ ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ 2.50 ಲಕ್ಷ ರೂಪಾಯಿ ಹಣ ಒಡಲಾಗಿತ್ತು. ಆದರೆ, ಅದು ಕಳ್ಳತನವಾಗಿದೆ ಎಂದು ದೂರು ದಾಖಲಾಗಿದೆ. ಮನೆಯ ಬೀರುವಿನಲ್ಲಿ 2.50 ಲಕ್ಷ ರೂಪಾಯಿಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು ಎಂದು ಹೇಳಲಾಗಿದೆ.

Cash Theft At Kannada Music Director Gurukiran House

ಡಿಸೆಂಬರ್ 31ರಂದು ಮನೆಯಲ್ಲಿಟ್ಟಿದ್ದ ಹಣ ಜನವರಿ 5 ರಂದು ಕಳ್ಳತನವಾಗಿದೆ. ಕಳೆದ ಎರಡು ದಿನಗಳ ಕಾಲ ಗುರುಕಿರಣ್ ಕುಟುಂಬಸ್ಥರು ಹಣಕ್ಕಾಗಿ ಮನೆಯೆಲ್ಲ ಹುಡುಕಾಡಿದ್ದಾರೆ. ಆದರೆ, ಎಲ್ಲೂ ಕಂಡಿಲ್ಲ. ಕೊನೆಗೆ ಪೊಳಿಸರ ಮೊರೆ ಹೋಗಿದ್ದಾರೆ. ಗುರುಕಿರಣ್ ಅವರ ಅತ್ತೆ ಕಸ್ತೂರಿ ಶೆಟ್ಟಿ ದೂರು ದಾಖಲಿಸಿದ್ದಾರೆ.

ಘಟನೆ ಸಂಬಂಧ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಮ್ಮ ಅವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮನೆ ಕೆಲಸದಾಕೆಯನ್ನು ವಿಚಾರಣೆ ನಡೆಸಿ, ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

More from Filmibeat

English summary
Cash theft at music director Gurukiran home.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X