ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ಅಧಿಕಾರಿಗಳಿಂದ ನೋಟಿಸ್
ಸ್ಯಾಂಡಲ್ ವುಡ್ ಗೆ ಡ್ರಗ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ಅಧಿಕಾರಿಗಳಿಂದ ನೋಟಿಸ್ ಜಾರಿಯಾಗಿದೆ. ಸ್ಯಾಂಡಲ್ ವುಡ್ ನ ಕೆಲವು ನಟ-ನಟಿಯರು ಮಾದಕ ದ್ರವ್ಯ ವ್ಯಸನಿಗಳಾಗಿದ್ದಾರೆ. ಈ ಬಗ್ಗೆ ಮಾಹಿತಿ ಗೊತ್ತಿದೆ, ಸಂಬಂಧ ಪಟ್ಟ ಅಧಿಕಾರಿಗಳಿಗೆ ದಾಖಲೆ ನೀಡಲು ಸಿದ್ಧ ಎಂದು ಇಂದ್ರಜಿತ್ ಹೇಳಿದ್ದರು.
Recommended Video
ಈ ಸಂಬಂಧ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದಿಂದ ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಲಾಗಿದೆ. ಸೋಮವಾರ ಅಧಿಕಾರಿಗಳನ್ನು ಭೇಟಿಯಾಗಿ ಡ್ರಗ್ಸ್ ಮಾಫಿಯಾದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಜೊತೆಗೆ ಮಾದಕ ವಸ್ತುಗಳ ವಿರುದ್ಧ ಹೋರಾಟಕ್ಕೆ ಸಹಕರಿಸಲು ಮನವಿ ಮಾಡಿಕೊಂಡಿದ್ದು, ಇಂದ್ರಜಿತ್ ಲಂಕೇಶ್ ನೀಡಿರುವ ಮಾಹಿತಿ ಆಧರಿಸಿ ಸಿಸಿಬಿ ತನಿಖೆ ನಡೆಸಲಿದೆ
ನಿರ್ದೇಶಕ ಇಂದ್ರಜಿತ್ ಲಂಕೇಶ್, ಸ್ಯಾಂಡಲ್ ವುಡ್ ನಲ್ಲಿ ಹಲವು ನಟ-ನಟಿಯರು ಡ್ರಗ್ ವ್ಯಸನಕ್ಕೆ ಒಳಗಾಗಿದ್ದಾರೆ. ಅನೇಕ ನಟರ ಮನೆಯ ಎಸ್ಟೇಟ್ ಗಳಿಗೆ ಡ್ರಗ್ ಹೋಗುತ್ತಿದೆ. ಕೊರೊನಾ ಲಾಕ್ ಡೌನ್ ಸಮಯದಲ್ಲಿಯೂ ಇಷ್ಟು ದೊಡ್ಡ ಮಟ್ಟದ ದಂಧೆ ನಡೆಯಲು ಹೇಗೆ ಸಾಧ್ಯ? ಎಂದು ಇಂದ್ರಜಿತ್ ಪ್ರಶ್ನಿಸಿದ್ದಾರೆ.

ಈ ಹಿಂದೆಯೂ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ದಂಧೆಯ ಬಗ್ಗೆ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ತನಿಖೆ ಯಾಕೆ ನಡೆಸಲಿಲ್ಲ? ಒಂದು ವೇಳೆ ತನಿಖೆ ನಡೆಸಿದ್ದರೆ ಎಲ್ಲಾ ಮಾಹಿತಿ ಹೊರಬರುತ್ತಿತ್ತು. ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದು ಗೊತ್ತಾಗುತಿತ್ತು. ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ನನ್ನ ಬಳಿ ಸಂಪೂರ್ಣ ಮಾಹಿತಿ ಇದೆ, ಸಂಬಂಧ ಪಟ್ಟ ಇಲಾಖೆಯವರು, ಪೊಲೀಸರು ಕೇಳಿದರೆ ಕೊಡುತ್ತೇನೆ. ಎಂದು ಹೇಳಿದ್ದರು.


Click it and Unblock the Notifications











