CCL 2023: ಕರ್ನಾಟಕ ಬುಲ್ಡೋಜರ್ಸ್ vs ಚೆನ್ನೈ ರೈನೋಸ್ ಟಾಸ್, ಪ್ಲೇಯಿಂಗ್ 11 ಹಾಗೂ ನೇರಪ್ರಸಾರ

ಸದ್ಯ ಹತ್ತನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಜರುಗುತ್ತಿದೆ. ಈ ಬಾರಿಯ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್, ತೆಲುಗು ಟೈಟಾನ್ಸ್, ಬೆಂಗಾಲ್ ಟೈಗರ್ಸ್, ಭೋಜ್‌ಪುರಿ ದಬಾಂಗ್ಸ್, ಚೆನ್ನೈ ರೈನೋಸ್, ಕೇರಳ ಸ್ಟ್ರೈಕರ್ಸ್, ಮುಂಬೈ ಹೀರೊಸ್ ಹಾಗೂ ಪಂಜಾಬ್ ದೆ ಶೇರ್ ಹೀಗೆ ಒಟ್ಟು ಎಂಟು ತಂಡಗಳು ಕಣಕ್ಕಿಳಿದಿವೆ.

ಪ್ರಸ್ತುತ ಲೀಗ್ ಹಂತದ ಪಂದ್ಯಗಳು ಜರುಗುತ್ತಿದ್ದು, ಒಟ್ಟು 16 ಲೀಗ್ ಪಂದ್ಯಗಳ ಪೈಕಿ 9 ಪಂದ್ಯಗಳು ಮುಗಿದಿವೆ. ಇಂದು ( ಮಾರ್ಚ್ 4 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 9ನೇ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ವಿರುದ್ಧ ಪಂಜಾಬ್ ದೆ ಶೇರ್ ತಂಡ 6 ವಿಕೆಟ್‌ಗಳ ಜಯ ಸಾಧಿಸಿದ್ದು, ಟೂರ್ನಿಯಲ್ಲಿನ ತನ್ನ ಮೂರನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದಿದೆ. ಇತ್ತ ತೆಲುಗು ವಾರಿಯರ್ಸ್ ಟೂರ್ನಿಯಲ್ಲಿ ಮೊದಲ ಬಾರಿಗೆ ಸೋಲನ್ನು ಅನುಭವಿಸಿದೆ.

CCL 2023: Karnataka Buldozers vs Chennai Rhinos toss, playing 11 and live streaming

ಇನ್ನು ಈ ದಿನದ ಎರಡನೇ ಪಂದ್ಯ ಇದೀಗ ಆರಂಭವಾಗಿದ್ದು, ಟೂರ್ನಿಯ ಈ ಹತ್ತನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಚೆನ್ನೈ ರೈನೊಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಪ್ರದೀಪ್ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಚೆನ್ನೈ ರೈನೊಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಚೆನ್ನೈ ರೈನೋಸ್ ಆಡುವ 11ರ ಬಳಗ: ಆರ್ಯ (ನಾಯಕ), ವಿಕ್ರಾಂತ್, ಅಶೋಕ್ ಸೆಲ್ವನ್, ಶಾಂತನು, ಪೃಥ್ವಿ, ವಿಷ್ಣು ವಿಶಾಲ್, ರಮಣ, ಶಿವ, ಭರತ್, ದಸರಾತಿ ಮತ್ತು ಆಧವ್ ಕಣ್ಣದಾಸನ್.

ಕರ್ನಾಟಕ ಬುಲ್ಡೋಜರ್ಸ್ ಆಡುವ ಬಳಗ: ಪ್ರದೀಪ್ ಬೋಗಾದಿ ( ನಾಯಕ ), ಜಯರಾಮ್ ಕಾರ್ತಿಕ್, ಕಿಚ್ಚ ಸುದೀಪ್ ( ವಿಕೆಟ್ ಕೀಪರ್ ), ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ಗಣೇಶ್, ರಾಜೀವ್ ಹನು, ಅರುಣ್, ಚಂದನ್ ಕುಮಾರ್ ಹಾಗೂ ಕರಣ್

ಈ ಪಂದ್ಯದ ನೇರ ಪ್ರಸಾರ ಜೀ ಫೈವ್ ಓಟಿಟಿಯಲ್ಲಿ ಲಭ್ಯವಿದೆ ಹಾಗೂ ಜೀ ಪಿಚ್ಚರ್‌ನಲ್ಲಿ ಕನ್ನಡ, ಜೀ ದಿರೈನಲ್ಲಿ ತಮಿಳು, ಪಿಟಿಸಿ ಚಾನೆಲ್‌ನಲ್ಲಿ ಪಂಜಾಬಿ, ಜೀ ಸಿನಿಮಾಲು ಚಾನೆಲ್‌ನಲ್ಲಿ ತೆಲುಗು, ಆಂಡ್ ಪಿಕ್ಚರ್ಸ್ ಚಾನೆಲ್‌ನಲ್ಲಿ ಇಂಗ್ಲಿಷ್ ಕಾಮೆಂಟರಿಗಳಲ್ಲಿ ಈ ಪಂದ್ಯದ ನೇರಪ್ರಸಾರ ಲಭ್ಯವಿರಲಿದೆ.

More from Filmibeat

English summary
CCL 2023: Karnataka Buldozers vs Chennai Rhinos toss, playing 11 and live streaming. Take a look
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X