CCL 2023: ಲೀಗ್ ಹಂತದ 12 ಪಂದ್ಯದ ನಂತರ ಅಂಕಪಟ್ಟಿ ಹೇಗಿದೆ? ಕರ್ನಾಟಕ ಬುಲ್ಡೋಜರ್ಸ್‌ಗೆ ಎಷ್ಟನೇ ಸ್ಥಾನ?

ಕಳೆದೆರಡು ಮೂರು ವರ್ಷಗಳ ಕಾಲ ಕೊರೊನಾ ಭೀತಿಯಿಂದ ನಡೆದಯದೇ ಇದ್ದ ಸಿನಿ ರಸಿಕರ ಫೇವರಿಟ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿ ಈ ಬಾರಿ ಮರಳಿ ಬಂದಿದೆ. ಪ್ರಸ್ತುತ ಈ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಜರುಗುತ್ತಿದ್ದು, ಇದು ಹತ್ತನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯಾಗಿದೆ. ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್, ತೆಲುಗು ಟೈಟಾನ್ಸ್, ಬೆಂಗಾಲ್ ಟೈಗರ್ಸ್, ಭೋಜ್‌ಪುರಿ ದಬಾಂಗ್ಸ್, ಚೆನ್ನೈ ರೈನೋಸ್, ಕೇರಳ ಸ್ಟ್ರೈಕರ್ಸ್, ಮುಂಬೈ ಹೀರೊಸ್ ಹಾಗೂ ಪಂಜಾಬ್ ದೆ ಶೇರ್ ಹೀಗೆ ಒಟ್ಟು ಎಂಟು ತಂಡಗಳು ಕಣಕ್ಕಿಳಿದಿವೆ.

ಇನ್ನು ವಾರಾಂತ್ಯಗಳಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರಗಳಂದು ದಿನಕ್ಕೆ ಎರಡು ಪಂದ್ಯಗಳನ್ನು ಈ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿಯಲ್ಲಿ ಆಯೋಜನೆ ಮಾಡಲಾಗಿದ್ದು, ನಿನ್ನೆ ( ಮಾರ್ಚ್ 5 ) ನಡೆದ ಎರಡು ಪಂದ್ಯಗಳ ಮೂಲಕ ಲೀಗ್ ಹಂತದ 12 ಪಂದ್ಯಗಳು ಮುಕ್ತಾಯಗೊಂಡಿವೆ. ಲೀಗ್ ಹಂತದಲ್ಲಿ ಒಟ್ಟು 16 ಪಂದ್ಯಗಳು ಆಯೋಜನೆಗೊಂಡಿದ್ದು, ಮುಕ್ತಾಯದ ಸಮೀಪಕ್ಕೆ ತಲುಪಿದೆ. ಹೀಗಾಗಿ ಯಾವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಗಳನ್ನು ಪಡೆದುಕೊಂಡು ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡಬಹುದು ಎಂಬ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ.

CCL 2023: Karnataka Bulldozers tops the Points table after 12 league matches

ನಿನ್ನೆ ( ಮಾರ್ಚ್ 5 ) ನಡೆದ ಮಧ್ಯಾಹ್ನದ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವು ಕಂಡ ಭೋಜ್‌ಪುರಿ ದಬಾಂಗ್ಸ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಬಳಿಕ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದೆ. ನಂತರ ರಾತ್ರಿ ನಡೆದ ಮುಂಬೈ ಹಿರೋಸ್ ಹಾಗೂ ಕೇರಳ ಸ್ಟ್ರೈಕರ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಹೀರೊಸ್ ತಂಡ 7 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಈ ಎರಡು ಪಂದ್ಯಗಳ ಫಲಿತಾಂಶದಿಂದಾಗಿ ಅಂಕಪಟ್ಟಿಯಲ್ಲಿ ತುಸು ದೊಡ್ಡ ಬದಲಾವಣೆಗಳೇ ಜರುಗಿದ್ದು, ಯಾವ ತಂಡಗಳು ಎಷ್ಟು ಪಂದ್ಯಗಳನ್ನಾಡಿ ಎಷ್ಟು ಗೆಲುವನ್ನು ಸಾಧಿಸಿ, ಎಷ್ಟು ಪಂದ್ಯಗಳಲ್ಲಿ ಸೋತು, ಎಷ್ಟನೇ ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

CCL 2023: Karnataka Bulldozers tops the Points table after 12 league matches

1. ಇಲ್ಲಿಯವರೆಗೂ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದು ಸೋಲಿಲ್ಲದ ಸರದಾರನಾಗಿ ಮಿಂಚಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂದನೇ ಸ್ಥಾನದಲ್ಲಿದೆ.

2. ಭೋಜ್‌ಪುರಿ ದಬಾಂಗ್ಸ್ ತಂಡ ಸಹ ಮೂರು ಪಂದ್ಯಗಳನ್ನಾಡಿ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದು ಆರು ಅಂಕಗಳನ್ನು ಪಡೆದುಕೊಂಡಿದ್ದು, ಕರ್ನಾಟಕ ಬುಲ್ಡೋಜರ್ಸ್‌ಗಿಂತ ಕಡಿಮೆ ನೆಟ್ ರನ್ ರೇಟ್ ಇರುವ ಕಾರಣ ಎರಡನೇ ಸ್ಥಾನದಲ್ಲಿದೆ.

3. ಮೂರು ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಉಳಿದೊಂದು ಪಂದ್ಯದಲ್ಲಿ ಸೋತಿರುವ ತೆಲುಗು ವಾರಿಯರ್ಸ್ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

4. ಹಾಲಿ ಚಾಂಪಿಯನ್ಸ್ ಮುಂಬೈ ಹೀರೊಸ್ ತಂಡ ಸಹ ಮೂರು ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಉಳಿದೊಂದು ಪಂದ್ಯದಲ್ಲಿ ಸೋತು ನಾಲ್ಕು ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದೆ.

5. ಮೂರು ಪಂದ್ಯಗಳನ್ನಾಡಿ ಕೇವಲ ಒಂದು ಪಂದ್ಯದಲ್ಲಿ ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತಿರುವ ಚೆನ್ನೈ ರೈನೊಸ್ ಎರಡು ಅಂಕಗಳನ್ನು ಪಡೆದುಕೊಂಡು ಐದನೇ ಸ್ಥಾನದಲ್ಲಿದೆ.

6. ಪಂಜಾಬ್ ದೆ ಶೇರ್ ತಂಡ ಸಹ ಚೆನ್ನೈ ರೈನೊಸ್ ತಂಡದ ಹಾಗೆ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಎರಡರಲ್ಲಿ ಸೋತು ಎರಡು ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆರನೇ ಸ್ಥಾನದಲ್ಲಿದೆ.

7. ಬೆಂಗಾಲ್ ಟೈಗರ್ಸ್ ತಂಡ ಮೂರು ಪಂದ್ಯಗಳನ್ನಾಡಿದ್ದು, ಯಾವುದೇ ಪಂದ್ಯದಲ್ಲಿಯೂ ಗೆಲ್ಲದೇ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. ಕೇರಳ ಸ್ಟ್ರೈಕರ್ಸ್ ತಂಡವೂ ಸಹ ಮೂರು ಪಂದ್ಯಗಳನ್ನಾಡಿ ಯಾವ ಪಂದ್ಯದಲ್ಲಿಯೂ ಗೆಲುವು ಕಾಣದೇ ಅಂತಿಮ ಸ್ಥಾನದಲ್ಲಿದೆ.

ಲೀಗ್ ಹಂತದ ಉಳಿದ ನಾಲ್ಕು ಪಂದ್ಯಗಳು ಮಾರ್ಚ್ 11 ಹಾಗೂ 12ರಂದು ನಡೆಯಲಿದ್ದು, ಮಾರ್ಚ್ 11ಕ್ಕೆ ಕೇರಳ ಸ್ಟ್ರೈಕರ್ಸ್ ಹಾಗೂ ಭೋಜ್‌ಪುರಿ ದಬಾಂಗ್ಸ್ ತಂಡಗಳು ಸೆಣಸಾಡಲಿವೆ ಮತ್ತು ಪಂಜಾಬ್ ದೆ ಶೇರ್ ಹಾಗೂ ಕರ್ನಾಟಕ ಬುಲ್ಡೋಜರ್ಸ್ ತಂಡಗಳು ಕಣಕ್ಕೆ ಇಳಿಯಲಿವೆ. ಇನ್ನುಳಿದಂತೆ ಮಾರ್ಚ್ 12ರಂದು ಚೆನ್ನೈ ರೈನೊಸ್ ಹಾಗೂ ತೆಲುಗು ವಾರಿಯರ್ಸ್ ತಂಡಗಳು ಕಣಕ್ಕಿಳಿಯಲಿದ್ದು, ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಮುಂಬೈ ಹೀರೊಸ್ ಹಾಗೂ ಬೆಂಗಾಲ್ ಟೈಗರ್ಸ್ ಸೆಣಸಾಡಲಿವೆ.

More from Filmibeat

English summary
CCL 2023: Karnataka Bulldozers tops the Points table after 12 league matches. Take a look
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X