CCL 2023: ಲೀಗ್ ಹಂತ ಮುಕ್ತಾಯ; ಎಲ್ಲಾ ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬಿದ್ದ ತಂಡಗಳಿವು!

ಕಳೆದ ಕೆಲ ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಜನಪ್ರಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಮೆಂಟ್ ಈ ಬಾರಿ ಯಶಸ್ವಿಯಾಗಿ ನಡೆಯುತ್ತಿದೆ. ಈ ಬಾರಿ ಹತ್ತನೇ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿ ನಡೆಯುತ್ತಿದ್ದು, ಕರ್ನಾಟಕ ಬುಲ್ಡೋಜರ್ಸ್, ತೆಲುಗು ಟೈಟಾನ್ಸ್, ಬೆಂಗಾಲ್ ಟೈಗರ್ಸ್, ಭೋಜ್‌ಪುರಿ ದಬಾಂಗ್ಸ್, ಚೆನ್ನೈ ರೈನೋಸ್, ಕೇರಳ ಸ್ಟ್ರೈಕರ್ಸ್, ಮುಂಬೈ ಹೀರೊಸ್ ಹಾಗೂ ಪಂಜಾಬ್ ದೆ ಶೇರ್ ಸೇರಿದಂತೆ ಒಟ್ಟು ಎಂಟು ತಂಡಗಳು ಕಣಕ್ಕಿಳಿದಿವೆ.

ಇನ್ನು ಈ ಬಾರಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ 16 ಪಂದ್ಯಗಳು ಜರುಗಿದ್ದು, ತಂಡವೊಂದಕ್ಕೆ ತಲಾ ನಾಲ್ಕು ಪಂದ್ಯಗಳನ್ನು ಏರ್ಪಡಿಸಲಾಗಿದೆ. ಸದ್ಯ ಲೀಗ್ ಹಂತ ಕಳೆದ ಭಾನುವಾರ ( ಮಾರ್ಚ್ 12 ) ನಡೆದ ಪಂದ್ಯಗಳ ಮೂಲಕ ಮುಕ್ತಾಯಗೊಂಡಿದ್ದು, ಮುಂದಿನ ವಾರದ ವಾರಾಂತ್ಯದಲ್ಲಿ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಗಳು ಜರುಗಲಿವೆ. ಇನ್ನು ಈ ಲೀಗ್ ಹಂತದ ತಮ್ಮ ಪಾಲಿನ ನಾಲ್ಕು ಪಂದ್ಯಗಳಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿವೆ.

CCL 2023: Kerala strikers and Bengal tigers failed to win a single match in league stage

ನಾಲ್ಕು ಪಂದ್ಯಗಳನ್ನಾಡಿ ಎಲ್ಲಾ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿರುವ ಕರ್ನಾಟಕ ಬುಲ್ಡೋಜರ್ಸ್, ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಎರಡನೇ ಸ್ಥಾನವನ್ನು ಪಡೆದುಕೊಂಡಿರುವ ಭೋಜ್‌ಪುರಿ ದಬಾಂಗ್ಸ್, ನಾಲ್ಕು ಪಂದ್ಯಗಳನ್ನಾಡಿ ಮೂರು ಪಂದ್ಯಗಳನ್ನು ಗೆದ್ದು ಉಳಿದೊಂದು ಪಂದ್ಯದಲ್ಲಿ ಸೋತು ಮೂರನೇ ಸ್ಥಾನದಲ್ಲಿರುವ ಮುಂಬೈ ಹೀರೊಸ್ ಹಾಗೂ ನಾಲ್ಕು ಪಂದ್ಯಗಳನ್ನಾಡಿ ಎರಡು ಪಂದ್ಯಗಳನ್ನು ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತು ನಾಲ್ಕನೇ ಸ್ಥಾನದಲ್ಲಿರುವ ತೆಲುಗು ವಾರಿಯರ್ಸ್ ಸೆಮಿ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿವೆ.

ಹೀಗೆ ಈ ನಾಲ್ಕು ತಂಡಗಳು ಸೆಮಿ ಫೈನಲ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಉಳಿದ ತಂಡಗಳು ಲೀಗ್ ಹಂತಕ್ಕೆ ಟೂರ್ನಿಯಲ್ಲಿನ ತಮ್ಮ ಪಯಣವನ್ನು ಮುಕ್ತಾಯಗೊಳಿಸಿವೆ. ಅದರಲ್ಲಿಯೂ ಎರಡು ತಂಡಗಳು ಲೀಗ್ ಹಂತದಲ್ಲಿ ತಾವು ಆಡಿದ ನಾಲ್ಕು ಪಂದ್ಯಗಳಲ್ಲಿ ಯಾವುದೇ ಪಂದ್ಯವನ್ನೂ ಸಹ ಗೆಲ್ಲಲಾಗದೇ ಅಂಕಪಟ್ಟಿಯಲ್ಲಿ ಗೆಲುವಿನ ಖಾತೆಯನ್ನೇ ತೆರೆಯದೇ ಕೊನೆಯ ಎರಡು ಸ್ಥಾನಗಳನ್ನು ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿವೆ.

ಹೌದು, ಮಲಯಾಳಂ ಚಿತ್ರರಂಗದ ತಂಡ ಕೇರಳ ಸ್ಟ್ರೈಕರ್ಸ್ ಲೀಗ್ ಹಂತದಲ್ಲಿನ ತನ್ನ ಎಲ್ಲಾ ಪಂದ್ಯಗಳನ್ನೂ ಸಹ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡು ಹೀನಾಯವಾಗಿ ಟೂರ್ನಿಯಿಂದ ಹೊರಬಿದ್ದಿದೆ. ಜತೆಗೆ ಬೆಂಗಾಲ್ ಟೈಗರ್ಸ್ ತಂಡ ಸಹ ಲೀಗ್ ಹಂತದಲ್ಲಿನ ತನ್ನ ಎಲ್ಲಾ ಪಂದ್ಯಗಳನ್ನೂ ಸಹ ಸೋತು ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿದೆ.

CCL 2023: Kerala strikers and Bengal tigers failed to win a single match in league stage

ಇವುಗಳ ಜತೆಗೆ ನಾಲ್ಕು ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು, ಉಳಿದೆರಡು ಪಂದ್ಯಗಳಲ್ಲಿ ಸೋತು ನಾಲ್ಕು ಅಂಕಗಳನ್ನ ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಚೆನ್ನೈ ರೈನೊಸ್ ಹೆಚ್ಚಿನ ನೆಟ್ ರನ್ ರೇಟ್ ಕೊರತೆಯಿಂದ ಸೆಮಿ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಾಗದೇ ಎಡವಿದೆ. ಪಂಜಾಬ್ ದೆ ಶೇರ್ ತಂಡ ನಾಲ್ಕು ಪಂದ್ಯಗಳನ್ನಾಡಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆದ್ದು, ಉಳಿದ ಮೂರು ಪಂದ್ಯಗಳಲ್ಲಿ ಸೋತು ಎರಡು ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಲಾಗದೇ ಟೂರ್ನಿಯಿಂದ ಹೊರಬಿದ್ದಿದೆ.

ಇನ್ನು ಈ ಬಾರಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಮಾರ್ಚ್ 18ರಂದು ಜರುಗಲಿದೆ. ಮಧ್ಯಾಹ್ನ 2.30ಕ್ಕೆ ಮೊದಲ ಸೆಮಿಫೈನಲ್ ಪಂದ್ಯ ಜರುಗಿದರೆ, ಸಂಜೆ 7 ಗಂಟೆಗೆ ಎರಡನೇ ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯ ಮಾರ್ಚ್ 19ರಂದು ಸಂಜೆ ಏಳು ಗಂಟೆಗೆ ಜರುಗಲಿದೆ.

More from Filmibeat

English summary
CCL 2023: Kerala strikers and Bengal tigers failed to win a single match in league stage. Read on
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X