ಸಿಸಿಎಲ್ 2023: ಸರಣಿ ಶ್ರೇಷ್ಠ, ಬೆಸ್ಟ್‌ ಬೌಲರ್, ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ ಗೆದ್ದವರಾರು?

ಕಳೆದ ಫೆಬ್ರವರಿ ತಿಂಗಳಿನಲ್ಲಿ ಶುರುವಾಗಿದ್ದ ಸಿನಿ ರಸಿಕರು ಹಾಗೂ ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಕ್ರಿಕೆಟ್ ಟೂರ್ನಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಒಂಬತ್ತನೇ ಆವೃತ್ತಿ ಕಳೆದ ಶನಿವಾರ ( ಮಾರ್ಚ್ 25 ) ವಿಶಾಖಪಟ್ಟಣದ ವೈ ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಂಡಿದೆ.

ಈ ಫೈನಲ್ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ಹಾಗೂ ಭೋಜ್‌ಪುರಿ ದಬಾಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಆಸೆಯೊಂದಿಗೆ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಭೋಜ್‌ಪುರಿ ದಬಾಂಗ್ಸ್ ತಂಡದ ಕನಸಿಗೆ ಮೂರು ಬಾರಿ ಚಾಂಪಿಯನ್ ಆಗಿದ್ದ ಬಲಿಷ್ಠ ತೆಲುಗು ವಾರಿಯರ್ಸ್ ತಣ್ಣೀರನ್ನು ಎರಚಿದೆ.

CCL 2023: Man of the series, best bowler and batsman award winners details

ಹೌದು, ಪಂದ್ಯದಲ್ಲಿ ಟಾಸ್ ಗೆದ್ದ ತೆಲುಗು ವಾರಿಯರ್ಸ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಭೋಜ್‌ಪುರಿ ದಬಾಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭೋಜ್‌ಪುರಿ ದಬಾಂಗ್ಸ್ 10 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 72 ರನ್ ಕಲೆಹಾಕಿತು. ತೆಲುಗು ವಾರಿಯರ್ಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 104 ರನ್‌ಗಳನ್ನು ತೆಲುಗು ವಾರಿಯರ್ಸ್ ಕಲೆಹಾಕಿತು. ಹಾಗೂ 32 ರನ್ ಮುನ್ನಡೆ ಸಾಧಿಸಿತು. ತೆಲುಗು ವಾರಿಯರ್ಸ್ ತಂಡದ ಪರ ನಾಯಕ ಅಖಿಲ್ ಅಕ್ಕಿನೇನಿ 32 ಎಸೆತಗಳಲ್ಲಿ 67 ರನ್ ಗಳಿಸಿ ಅಬ್ಬರಿಸಿದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಭೋಜ್‌ಪುರಿ ದಬಾಂಗ್ಸ್ 10 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತು‌. ಎದುರಾಳಿ ತೆಲುಗು ವಾರಿಯರ್ಸ್‌ ತಂಡಕ್ಕೆ 57 ರನ್ ಗುರಿಯನ್ನು ನೀಡಿತು. ಮೊದಲೇ ಲೀಡ್‌ನಲ್ಲಿದ್ದ ತೆಲುಗು ವಾರಿಯರ್ಸ್ ಕೇವಲ‌ 6.2 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 58 ರನ್ ಕಲೆಹಾಕಿ 9 ವಿಕೆಟ್ ಭರ್ಜರಿ ಜಯ ಸಾಧಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ತೆಲುಗು ವಾರಿಯರ್ಸ್ ಪರ ಎಸ್ ಎಸ್ ಥಮನ್ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದರು.

ಹೀಗೆ ತೆಲುಗು ವಾರಿಯರ್ಸ್ ತಂಡ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇನ್ನು ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿ ತಂಡದ ಗೆಲುವಿಗೆ ಪ್ರಮುಖ ಕಾರಣನಾದ ತೆಲುಗು ವಾರಿಯರ್ಸ್ ತಂಡದ ನಾಯಕ ಅಖಿಲ್ ಅಕ್ಕಿನೇನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಹಾಗಿದ್ದರೆ ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿ ಬೆಸ್ಟ್ ಬೌಲರ್ ಹಾಗೂ ಬೆಸ್ಟ್ ಬ್ಯಾಟ್ಸ್‌ಮನ್ ಎಂಬ ಪ್ರಶಸ್ತಿಯನ್ನು ಯಾರು ಪಡೆದರು ಮತ್ತು ಎಂಟರ್‌ಟೈನರ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿಯನ್ನು ಯಾರು ಪಡೆದರು ಎಂಬ ಮಾಹಿತಿ ಈ ಕೆಳಕಂಡಂತಿದೆ.

CCL 2023: Man of the series, best bowler and batsman award winners details

ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಂತಹ ತೆಲುಗು ವಾರಿಯರ್ಸ್ ತಂಡದ ನಾಯಕ ಅಖಿಲ್ ಅಕ್ಕಿನೇನಿಯೇ ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಸಹ ಪಡೆದುಕೊಂಡರು. ಅತ್ತ ಇದೇ ತಂಡದ ಪ್ರಿನ್ಸ್ ಎಂಬ ಆಟಗಾರ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಮಾಡಿ ಒಳ್ಳೆಯ ವಿಕೆಟ್‌ಗಳನ್ನು ಪಡೆದ ಕಾರಣ ಬೆಸ್ಟ್ ಬೌಲರ್ ಆಫ್ ದ ಟೂರ್ನಮೆಂಟ್ ಎಂಬ ಪ್ರಶಸ್ತಿಯನ್ನು ಪಡೆದರು.

ಇನ್ನುಳಿದಂತೆ ಭೋಜ್‌ಪುರಿ ದಬಾಂಗ್ಸ್ ತಂಡದ ಆಟಗಾರ ಆದಿತ್ಯ ಓಜಾ ಟೂರ್ನಿಯುದ್ದಕ್ಕೂ ದೊಡ್ಡ ಸಿಕ್ಸರ್ ಹಾಗೂ ಬೌಂಡರಿಗಳನ್ನು ಚಚ್ಚಿ ನೀಡಿದ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕೆ ಬೆಸ್ಟ್ ಬ್ಯಾಟ್ಸ್‌ಮನ್ ಆಫ್ ದ ಟೂರ್ನಿ ಎಂಬ ಪ್ರಶಸ್ತಿ ಪಡೆದರು. ತೆಲುಗು ವಾರಿಯರ್ಸ್ ತಂಡದ ಆಟಗಾರ ಎಸ್ ಎಸ್ ಥಮನ್ ಎಂಟರ್‌ಟೈನರ್ ಆಫ್ ದ ಟೂರ್ನಮೆಂಟ್ ಎಂಬ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡರು.

More from Filmibeat

English summary
CCL 2023: Man of the series, best bowler and batsman award winners details. Take a look
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X