CCL 2025; ಚೆನ್ನೈ ರೈನೋಸ್ ವಿರುದ್ಧವೂ ಕೃಷ್ಣನ ಕಾರುಬಾರು; ಸಿಕ್ಸ್ ಮೇಲೆ ಸಿಕ್ಸ್

ಕಳೆದ ವಾರ ತೆಲುಗು ವಾರಿಯರ್ಸ್ ವಿರುದ್ಧ ಅಬ್ಬರಿಸಿದ್ದ ಡಾರ್ಲಿಂಗ್ ಕೃಷ್ಣ 2ನೇ ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರಿದರು. ಚೆನ್ನೈ ರೈನೋಸ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಗೆದ್ದಿದೆ. 4 ಇನ್ನಿಂಗ್ಸ್‌ಗಳ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೃಷ್ಣ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ಕೃಷ್ಣ ಕೇವಲ 23 ಎಸೆತಗಳಲ್ಲಿ 50 ರನ್ ಸಿಡಿಸಿದರು. ಅಂತಿಮ ಎಸೆತದಲ್ಲಿ ಸಿಕ್ಸರ್ ಸಿಡಿಸಿ ನೋಡುಗರನ್ನು ರಂಜಿಸಿದರು. ಬೌಂಡರಿ ಸಿಕ್ಸರ್‌ಗಳ ಮೂಲಕ ಚೆನ್ನೈ ಬೌಲರ್‌ಗಳನ್ನು ಕಾಡಿದರು. ಬಳಿಕ 2ನೇ ಇನ್ನಿಂಗ್ಸ್‌ನಲ್ಲಿ ಕೂಡ ಕೃಷ್ಣನ ಕಾರುಬಾರು ಜೋರಾಗಿತ್ತು. 2ನೇ ಇನ್ನಿಂಗ್ಸ್‌ನಲ್ಲಿ 22 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ತಮ್ಮ ಕೊಡುಗೆ ನೀಡಿದರು.

CCL 2025 karnataka bulldozers vs Chennai rhinos Darling Krishna s tremendous batting

ವೃತ್ತಿಪರ ಕ್ರಿಕೆಟರ್ ರೀತಿ ಕೃಷ್ಣ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಕಳೆದ ಪಂದ್ಯದಲ್ಲಿ 38 ಎಸೆತಗಳಲ್ಲಿ 80 ರನ್ ಕಲೆ ಹಾಕಿ ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾಗಿದ್ದರು. 2ನೇ ಪಂದ್ಯದಲ್ಲಿ ಕೂಡ ಆ ಗೌರವ ಲಭಿಸಿದೆ. ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್‌ನಲ್ಲಿ ಕೂಡ ಕೃಷ್ಣನ ಕಮಾಲ್ ನಡೆಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಸಿಕ್ಸರ್ ಸಿಡಿಸಿ ಅರ್ಧ ಶತಕ ಪೂರೈಸಿದ್ದ ಕೃಷ್ಣ 2ನೇ ಇನ್ನಿಂಗ್ಸ್‌ನಲ್ಲಿ ಸಿಕ್ಸರ್ ಸಿಡಿಸಿ ವಿನ್ನಿಂಗ್ ಶಾಟ್ ಮೂಲಕ ತಂಡವನ್ನು ಗೆಲ್ಲಿಸಿದ್ದು ವಿಶೇಷ.

More from Filmibeat

English summary
Karnataka bulldozers vs Chennai rhinos; sudeep team won by 7 wickets, Darling Krishna brilliant batting shines
Read more about: ccl 2025 sandalwood kollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X