Just In
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Automobiles
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
ಕೊರೊನಾ ಅನ್‌ಲಾಕ್ ನಂತರ ಚಿತ್ರಮಂದಿರಗಳು ಶೇ 50 ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ವೀಕ್ಷಿಸಲು ಅವಕಾಶ ನೀಡಬೇಕು ಎಂಬ ನಿಯಮವನ್ನು ಕೇಂದ್ರ ಸರ್ಕಾರ ವಿಧಿಸಿತ್ತು. ಈಗ ಈ ನಿಯಮವನ್ನು ಕೇಂದ್ರ ಹಿಂಪಡೆಯುತ್ತಿದೆ.
ಕೇಂದ್ರ ಗೃಹ ಸಚಿವಾಲಯ ನೀಡಿರುವ ಸೂಚನೆಯಂತೆ, ಚಿತ್ರಮಂದಿರಗಳು ತಮ್ಮ ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಒಮ್ಮೆಲೆ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಬಹುದಾಗಿದೆ.
ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಸಿನಿಮಾ ನೀಡಲು ಅವಕಾಶ ನೀಡುವ ಬಗ್ಗೆ ಪ್ರತ್ಯೇಕ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಅನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬಿಡುಗಡೆ ಮಾಡಲಾಗುವುದು ಎಲ್ಲ ಚಿತ್ರಮಂದಿರಗಳು ಅದನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದಿದೆ ಕೇಂದ್ರ ಗೃಹ ಸಚಿವಾಲಯ.

ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ
ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಅವಕಾಶ ಕೊಟ್ಟಮೇಲೂ ಮಾಸ್ಕ್ ಬಳಕೆ, ಚಿತ್ರಮಂದಿರಗಳ ಒಳಹೋಗುವ ಮುನ್ನಾ ಸ್ಯಾನಿಟೈಸರ್ ಬಳಕೆ, ಚಿತ್ರಮಂದಿರಗಳ ಸ್ವಚ್ಛತೆ ಇನ್ನುಳಿದ ಸ್ವಚ್ಛತಾ ಸಂಬಂಧಿ ವಿಷಯಗಳ ಬಗ್ಗೆ ಹೊಸ ಸೂಚನೆಗಳನ್ನು ಗೃಹ ಸಚಿವಾಲಯ ನೀಡುವ ಸಂಭವ ಇದೆ.

ಅಕ್ಟೋಬರ್ 15 ರಂದು ಚಿತ್ರಮಂದಿರಗಳು ತೆರೆದಿದ್ದವು
ಕೊರೊನಾ ಲಾಕ್‌ಡೌನ್‌ನಿಂದಾಗಿ ಸುಮಾರು ಎಂಟು ತಿಂಗಳ ಕಾಲ ಚಿತ್ರಮಂದಿರಗಳು ಬಂದ್ ಆಗಿದ್ದವು. 2020, ಅಕ್ಟೋಬರ್ 15 ರಿಂದ ಚಿತ್ರಮಂದಿರಗಳು ಪುನಃ ಪ್ರಾರಂಭಗೊಂಡವಾದರೂ ಕೇವಲ 50% ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ನೋಡಲು ಅವಕಾಶ ನೀಡಲಾಗಿತ್ತು.

ತಮಿಳುನಾಡು ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು
ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡುವಂತೆ ಆಂಧ್ರ-ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಕೆಲವು ವಾರಗಳ ಹಿಂದೆ ಮನವಿ ಮಾಡಿದ್ದವು. ತಮಿಳುನಾಡು ಸರ್ಕಾರವು ನ್ಯಾಯಾಲಯದ ಮೆಟ್ಟಿಲು ಸಹ ಏರಿತ್ತು. ಆದರೆ ಈಗ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.

ಹಲವು ಸ್ಟಾರ್ ನಟರ ಸಿನಿಮಾಗಳು ಸರತಿಯಲ್ಲಿವೆ
ಫೆಬ್ರವರಿ ತಿಂಗಳಿನಿಂದಲೇ ಹಲವು ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ. ಕನ್ನಡದಲ್ಲಿಯೂ ಹಲವು ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಹೀಗಿದ್ದಾಗಲೇ ಚಿತ್ರಮಂದಿರಗಳ ಮೇಲೆ ವಿಧಿಸಲಾಗಿದ್ದ 50% ಸೀಟು ಬಳಕೆ ನಿಯಮ ಹಿಂದೆ ಪಡೆದಿರುವುದು ಸಿಹಿ ಸುದ್ದಿಯಾಗಿ ಒದಗಿ ಬಂದಿದೆ.