twitter
    For Quick Alerts
    ALLOW NOTIFICATIONS  
    For Daily Alerts

    ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು

    |

    ಕೊರೊನಾ ಅನ್‌ಲಾಕ್ ನಂತರ ಚಿತ್ರಮಂದಿರಗಳು ಶೇ 50 ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ವೀಕ್ಷಿಸಲು ಅವಕಾಶ ನೀಡಬೇಕು ಎಂಬ ನಿಯಮವನ್ನು ಕೇಂದ್ರ ಸರ್ಕಾರ ವಿಧಿಸಿತ್ತು. ಈಗ ಈ ನಿಯಮವನ್ನು ಕೇಂದ್ರ ಹಿಂಪಡೆಯುತ್ತಿದೆ.

    ಕೇಂದ್ರ ಗೃಹ ಸಚಿವಾಲಯ ನೀಡಿರುವ ಸೂಚನೆಯಂತೆ, ಚಿತ್ರಮಂದಿರಗಳು ತಮ್ಮ ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಒಮ್ಮೆಲೆ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಬಹುದಾಗಿದೆ.

    ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಸಿನಿಮಾ ನೀಡಲು ಅವಕಾಶ ನೀಡುವ ಬಗ್ಗೆ ಪ್ರತ್ಯೇಕ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಅನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬಿಡುಗಡೆ ಮಾಡಲಾಗುವುದು ಎಲ್ಲ ಚಿತ್ರಮಂದಿರಗಳು ಅದನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದಿದೆ ಕೇಂದ್ರ ಗೃಹ ಸಚಿವಾಲಯ.

    ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ

    ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ

    ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಅವಕಾಶ ಕೊಟ್ಟಮೇಲೂ ಮಾಸ್ಕ್ ಬಳಕೆ, ಚಿತ್ರಮಂದಿರಗಳ ಒಳಹೋಗುವ ಮುನ್ನಾ ಸ್ಯಾನಿಟೈಸರ್ ಬಳಕೆ, ಚಿತ್ರಮಂದಿರಗಳ ಸ್ವಚ್ಛತೆ ಇನ್ನುಳಿದ ಸ್ವಚ್ಛತಾ ಸಂಬಂಧಿ ವಿಷಯಗಳ ಬಗ್ಗೆ ಹೊಸ ಸೂಚನೆಗಳನ್ನು ಗೃಹ ಸಚಿವಾಲಯ ನೀಡುವ ಸಂಭವ ಇದೆ.

    ಅಕ್ಟೋಬರ್ 15 ರಂದು ಚಿತ್ರಮಂದಿರಗಳು ತೆರೆದಿದ್ದವು

    ಅಕ್ಟೋಬರ್ 15 ರಂದು ಚಿತ್ರಮಂದಿರಗಳು ತೆರೆದಿದ್ದವು

    ಕೊರೊನಾ ಲಾಕ್‌ಡೌನ್‌ನಿಂದಾಗಿ ಸುಮಾರು ಎಂಟು ತಿಂಗಳ ಕಾಲ ಚಿತ್ರಮಂದಿರಗಳು ಬಂದ್ ಆಗಿದ್ದವು. 2020, ಅಕ್ಟೋಬರ್ 15 ರಿಂದ ಚಿತ್ರಮಂದಿರಗಳು ಪುನಃ ಪ್ರಾರಂಭಗೊಂಡವಾದರೂ ಕೇವಲ 50% ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ನೋಡಲು ಅವಕಾಶ ನೀಡಲಾಗಿತ್ತು.

    ತಮಿಳುನಾಡು ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು

    ತಮಿಳುನಾಡು ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು

    ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡುವಂತೆ ಆಂಧ್ರ-ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಕೆಲವು ವಾರಗಳ ಹಿಂದೆ ಮನವಿ ಮಾಡಿದ್ದವು. ತಮಿಳುನಾಡು ಸರ್ಕಾರವು ನ್ಯಾಯಾಲಯದ ಮೆಟ್ಟಿಲು ಸಹ ಏರಿತ್ತು. ಆದರೆ ಈಗ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.

    Recommended Video

    ಅದ್ದೂರಿಯಾಗಿತ್ತು Dubai ನಲ್ಲಿ Kiccha ನಿಗೆ ನೀಡಿದ ಸ್ವಾಗತ | Filmibeat Kannada
    ಹಲವು ಸ್ಟಾರ್ ನಟರ ಸಿನಿಮಾಗಳು ಸರತಿಯಲ್ಲಿವೆ

    ಹಲವು ಸ್ಟಾರ್ ನಟರ ಸಿನಿಮಾಗಳು ಸರತಿಯಲ್ಲಿವೆ

    ಫೆಬ್ರವರಿ ತಿಂಗಳಿನಿಂದಲೇ ಹಲವು ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ. ಕನ್ನಡದಲ್ಲಿಯೂ ಹಲವು ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಹೀಗಿದ್ದಾಗಲೇ ಚಿತ್ರಮಂದಿರಗಳ ಮೇಲೆ ವಿಧಿಸಲಾಗಿದ್ದ 50% ಸೀಟು ಬಳಕೆ ನಿಯಮ ಹಿಂದೆ ಪಡೆದಿರುವುದು ಸಿಹಿ ಸುದ್ದಿಯಾಗಿ ಒದಗಿ ಬಂದಿದೆ.

    English summary
    Central government allows theaters to operate at higher seating capacity. Home ministry said will release new SOP for theaters.
    Thursday, January 28, 2021, 9:29
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X