ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರೇಮ್; ಲವ್ಲಿ ಸ್ಟಾರ್‌ಗೆ ಶುಭಕೋರಿದ ಚಾಲೆಂಜಿಂಗ್ ಸ್ಟಾರ್

ಸ್ಯಾಂಡಲ್ ವುಡ್ ನ ಲವ್ಲಿ ಸ್ಟಾರ್ ಪ್ರೇಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 46ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರೇಮ್ ಗೆ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ಶುಭಕೋರುತ್ತಿದ್ದಾರೆ.

ಪ್ರತಿವರ್ಷ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಪ್ರೇಮ್, ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸರಳವಾಗಿ ಕುಟುಂಬದ ಜೊತೆಯೇ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಅಂದಹಾಗೆ ಪ್ರೇಮ್ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.

ಪ್ರೇಮ್ ಜೊತೆ ಇರುವ ಫೋಟೋವನ್ನು ಹಂಚಿಕೊಂಡು ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. 'ಹುಟ್ಟು ಹಬ್ಬದ ಶುಭಾಶಯಗಳು ಸ್ಟೈಲಿಶ್ ಸ್ಟಾರ್ ಪ್ರೇಮ್. ನಿಮ್ಮ ಎಲ್ಲಾ ಕನಸುಗಳು ನನಸಾಗಲಿ. ಒಳ್ಳೆಯದಾಗಲಿ. ಪ್ರೇಮಂ ಪೂಜ್ಯಂ ಮತ್ತು ನಿಮ್ಮ ಎಲ್ಲಾ ಮುಂದಿನ ಪ್ರಾಜೆಕ್ಟ್ ಗಳಿಗೆ ಶುಭಾಶಯಗಳು' ಎಂದು ಹೇಳಿದ್ದಾರೆ.

Challenging star Darshan birthday wishes to Actor Prem

ಪ್ರೇಮ್ ನಟನೆಯ ಚೌಕ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದರು. ಆ ಸಿನಿಮಾದ ಪ್ರಮೋಷನ್ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದಾರೆ. ಬಳಿಕ ದರ್ಶನ್ ನಟನೆಯ ಯಜಮಾನ ಸಿನಿಮಾದಲ್ಲಿ ಪ್ರೇಮ್ ಒಂದು ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಇಬ್ಬರು ಉತ್ತಮ ಸ್ನೇಹಿತರಾಗಿದ್ದು, ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ.

ಇನ್ನು ಪ್ರೇಮ್ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ, ಲೈಫ್ ಜೊತೆ ಒಂದು ಸೆಲ್ಫಿ ಸಿನಿಮಾ ಬಳಿಕ ಮತ್ತೆ ತೆರೆಮೇಲೆ ಬಂದಿಲ್ಲ. ಪ್ರೇಮ್ ಅಭಿಮಾನಿಗಳ ಮುಂದೆ ಬರದೆ ಸುಮಾರು 3 ವರ್ಷಗಳಾಗಿದೆ. ಸದ್ಯ ಪ್ರೇಮಂ ಪೂಜ್ಯಂ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

2004ರಲ್ಲಿ ಪ್ರಾಣ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟ ಪ್ರೇಮ್ ಗೆ ನೆನಪಿರಲಿ ಸಿನಿಮಾ ದೊಡ್ಡ ಮಟ್ಟದ ಸಕ್ಸಸ್ ತಂದು ಕೊಟ್ಟಿದೆ. ಬಳಿಕ ಜೊತೆ ಜೊತೆಯಲಿ, ಪಲ್ಲಕ್ಕಿ ಹೀಗೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುವ ಪ್ರೇಮ್ ಅನೇಕ ಅದ್ಭತ ಸಿನಿಮಾಗಳನ್ನು ನೀಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 19 ವರ್ಷಗಳನ್ನು ಕಳೆದಿರುವ ಪ್ರೇಮ್ ಮತ್ತಷ್ಟು ಉತ್ತಮ ಸಿನಿಮಾಗಳನ್ನು ನೀಡಲಿ ಎನ್ನುವುದೇ ಅಭಿಮಾನಿಗಳ ಆಶಯ.

More from Filmibeat

English summary
Challenging star Darshan birthday wishes to Actor Prem.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X