For Quick Alerts
  ALLOW NOTIFICATIONS  
  For Daily Alerts

  ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ: ರಕ್ಷಿತಾ ಹುಟ್ಟುಹಬ್ಬಕ್ಕೆ ದರ್ಶನ್ ವಿಶ್

  |

  ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ, ಈಗಲೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ನಟಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಸಡಗರ ಈ ಮೊದಲಿನಂತಿಲ್ಲ. ಏಕೆಂದರೆ ಕೊರೊನಾ ಕಾರಣ ಅಭಿಮಾನಿಗಳು ಮನೆಗೆ ಬಂದು ಶುಭ ಹಾರೈಸುವಂತಿಲ್ಲ.

  ಆದರೆ ಸಾಮಾಜಿಕ ಜಾಲತಾಣದ ಮೂಲಕವೇ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಾಶಯ ತಿಳಿಸುತ್ತಿದ್ದಾರೆ. ರಕ್ಷಿತಾ ಹುಟ್ಟುಹಬ್ಬಕ್ಕೆ ಚಿತ್ರರಂಗದ ಆಪ್ತ ಗೆಳೆಯ ದರ್ಶನ್ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಗೆಳತಿ ರಕ್ಷಿತಾಗೆ ದರ್ಶನ್ ವಿಶ್ ಮಾಡಿದ್ದಾರೆ.

  ಡಿ ಬಾಸ್ ದರ್ಶನ್ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್ ಮಾಡಿದ್ದು ಹೀಗೆಡಿ ಬಾಸ್ ದರ್ಶನ್ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್ ಮಾಡಿದ್ದು ಹೀಗೆ

  'ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್' ಎಂದು ಟ್ವೀಟ್ ಮಾಡಿದ್ದಾರೆ. ವಿಶ್ ಜೊತೆಗೆ ರಕ್ಷಿತಾ ಜೊತೆ ಇರುವ ಸುಂದರ ಫೋಟೋವನ್ನು ಹಂಚಿಕೊಂಡಿದ್ದಾರೆ.

  ಸ್ಯಾಂಡಲ್ ವುಡ್ ನ ಸುಂಟರಗಾಳಿ ಜೋಡಿ ಎಂದೇ ಖ್ಯಾತಿ ಗಳಿಸಿದ ದರ್ಶನ್ ಮತ್ತು ರಕ್ಷಿತಾ ಅನೇಕ ವರ್ಷಗಳಿಂದ ಸ್ನೇಹಿತರು. ಸಿನಿಮಾ ಹೊರತು ಪಡಿಸಿ ಇಬ್ಬರ ನಡುವೆ ಉತ್ತಮವಾದ ಸ್ನೇಹ ಬಾಂಧವ್ಯವಿದೆ. ದರ್ಶನ್ ಕೆಲವೇ ಕೆಲವು ಸ್ನೇಹಿತರಲ್ಲಿ ರಕ್ಷಿತಾ ಕೂಡ ಒಬ್ಬರು. ದರ್ಶನ್ ಅವರನ್ನು ಏಕವಚನದಲ್ಲಿ ಮಾತನಾಡಿಸುವ ಸ್ನೇಹಿತೆ ರಕ್ಷಿತಾ. ದರ್ಶನ್ ಜೊತೆಗಿನ ಸ್ನೇಹದ ಬಗ್ಗೆ ರಕ್ಷಿತಾ ಹಲವು ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ.

  Recommended Video

  ಮದಕರಿ ಸಿನಿಮಾಗೂ ಮುಂಚೆ ಗೋಲ್ಡ್ ರಿಂಗ್ ಮೂಲಕ ತೆರೆಮೇಲೆ ಬರಲಿದ್ದಾರೆ ಡಿ ಬಾಸ್ | Filmibeat Kannada

  ಅಂದಹಾಗೆ ಇಬ್ಬರು ಕಲಾಸಿಪಾಳ್ಯ, ಅಯ್ಯ, ಮಂಡ್ಯ ಮತ್ತು ಸುಂಟರಗಾಳಿ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಈ ಹಿಟ್ ಜೋಡಿಗೆ ಫಿದಾ ಆಗದವರೇ ಇಲ್ಲ. ದಶಕದ ಹಿಂದೆ ಅಭಿಮಾನಿಗಳ ನಿದ್ದೆಗೆಡಿಸಿದ್ದ ರಕ್ಷಿತಾ ಮತ್ತು ದರ್ಶನ್ ಸುಂಟರಗಾಳಿ ನಂತರ ಮತ್ತೆ ಒಟ್ಟಿಗೆ ತೆರೆಮೇಲೆ ಕಾಣಿಸಿಕೊಂಡಿಲ್ಲ. ಇಬ್ಬರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಸಹ ಕಾಯುತ್ತಿದ್ದಾರೆ.

  English summary
  Challenging star Darshan birthday wishes to Actress Rakshita Prem's.
  Wednesday, March 31, 2021, 11:37
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X