ಸಂಗೊಳ್ಳಿ ರಾಯಣ್ಣ ಬಗ್ಗೆ ದರ್ಶನ್ ಹೇಳಿದ್ದೇನು?
ಇನ್ನು ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ನಿಖಿತಾ ತುಕ್ರಲ್ ಹಾಗೂ ಕಿತ್ತೂರು ಚೆನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಜಯಪ್ರದಾ ಇಬ್ಬರೂ ಈ ಚಿತ್ರ ಹಾಗೂ ತಮ್ಮತಮ್ಮ ಪಾತ್ರದ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಹಿರಿಯ ನಟಿ ಉಮಾಶ್ರೀ, ನಟ ಬ್ಯಾಂಕ್ ಜನಾರ್ಧನ್, ಶೋಭರಾಜ್ ಹಾಗೂ ಉಳಿದ ನಟನಟಿಯರೆಲ್ಲರೂ ಚಿತ್ರದಲ್ಲಿನ ತಮ್ಮ ಪಾತ್ರ ಹಾಗೂ ಅಭಿನಯದ ಅನುಭವ ಹಂಚಿಕೊಂಡಿದ್ದಾರೆ. ನಿರ್ದೇಶಕ ನಾಗಣ್ಣ ಚಿತ್ರದ ಬಗ್ಗೆ ಸಾಕಷ್ಟು ಪ್ರೀತಿ ಹಾಗೂ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ಭಾರಿ ಬಜೆಟ್ಟಿನ ಈ 'ಸಂಗೊಳ್ಳಿ ರಾಯಣ್ಣ' ಚಿತ್ರವನ್ನು ಅಕ್ಟೋಬರ್ 12 ರಂದು ತೆರೆಗೆ ತರಲು ನಿರ್ಧಾರ ಮಾಡಲಾಗಿದ್ದು ಚಿತ್ರವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೇ, ಮುಂಬೈ, ಪುಣೆ, ಗೋವಾಗಳಲ್ಲಿಯೂ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ ನಿರ್ಮಾಪಕ ಅಪ್ಟಪುಗೋಳ್. ಇನ್ನು ಅವರ ಗೆಳೆಯರು ಇದನ್ನು ಬ್ರಿಟನ್, ಅಮೆರಿಕಾ ಹಾಗೂ ಆಸ್ಟ್ರೇಲಿಯಾಗಳಲ್ಲೂ ಕೂಡ ಬಿಡುಗಡೆ ಮಾಡಲಿದ್ದಾರಂತೆ. ಆದರೆ ಎಲ್ಲೆಲ್ಲಿ ಎಷ್ಟೆಷ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆ ಎಂಬ ಮಾಹಿತಿ ಸದ್ಯಕ್ಕಿಲ್ಲ.
ಇಷ್ಟೇ ಅಲ್ಲ, ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಿದ ನಂತರ ತಮಿಳು, ತೆಲುಗು ಹಾಗೂ ಹಿಂದಿಗೆ ಡಬ್ ಮಾಡುವ ಯೋಚನೆ ನಿರ್ಮಾಪಕರಿಗಿದೆ. ಆ ವಿಷಯ ಇನ್ನೂ ಮಾತುಕತೆ ಹಂತದಲ್ಲಿದ್ದು ಅಂತಿಮ ಫಲಿತಾಂಶ ಇನ್ನಷ್ಟೇ ಹೊರಬರಬೇಕಾಗಿದೆ. ಅಂದಹಾಗೆ ಚಿತ್ರವನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡಲಿರುವ ವಿತರಕ ಎಚ್.ಡಿ. ಗಂಗರಾಜು, ಚಿತ್ರದ ಬಜೆಟ್ ಹೆಚ್ಚಾಗಿರುವುದರಿಂದ ಅನಿವಾರ್ಯವಾಗಿ ಟಿಕೆಟ್ ದರದಲ್ಲಿ ಹತ್ತು ರು. ಏರಿಕೆ ಮಾಡಲಾಗುವುದು ಎಂದಿದ್ದಾರೆ.
ಇನ್ನು ಒಂದು ಪ್ರಮುಖ ಮಾಹಿತಿಯೆಂದರೆ, ಈ ಚಿತ್ರವನ್ನು ಸಿಕ್ಕಾಪಟ್ಟೆ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡದಿರಲು ನಿರ್ಧರಿಸಿದ್ದಾರೆ ನಿರ್ಮಾಪಕರು ಹಾಗೂ ವಿತರಕರು. ಅಂದಹಾಗೆ, ನಾಗಣ್ಣ ನಿರ್ದೇಶನದ ಈ ಚಿತ್ರಕ್ಕೆ ಯಶೋವರ್ಧನ್ ಸಂಗೀತ ನೀಡಿದ್ದಾರೆ. ರಮೇಶ್ ಬಾಬು ಛಾಯಾಗ್ರಹಣ ಹಾಗೂ ಗೋವರ್ಧನ್ ಸಂಕಲನ ಚಿತ್ರಕ್ಕಿದೆ. ಅಂದುಕೊಂಡಂತೆ ನಡೆದರೆ ಬರುವ ತಿಂಗಳು, ಅಕ್ಟೋಬರ್ 12 ರಂದು 'ಸಂಗೊಳ್ಳಿ ರಾಯಣ್ಣ' ತೆರೆಗೆ ಬರಲಿದೆ. (ಒನ್ ಇಂಡಿಯಾ ಕನ್ನಡ)


Click it and Unblock the Notifications











