ರಶ್ಮಿಕಾ ಮಂದಣ್ಣ ನಟನೆಯ ಚಿತ್ರ ಡಿಸೆಂಬರ್ ನಲ್ಲಿ ರಿಲೀಸ್ ಆಗ್ತಿಲ್ಲ

By Naveen

ನಟಿ ರಶ್ಮಿಕಾ ಮಂದಣ್ಣ ಅವರ ಮೂರು ಸಿನಿಮಾಗಳು ಇದೇ ಡಿಸೆಂಬರ್ ನಲ್ಲಿ ಬಿಡುಗಡೆಯಾಗಬೇಕಿತ್ತು. 'ಅಂಜನಿಪುತ್ರ' ಮತ್ತು 'ಚಮಕ್' ಸಿನಿಮಾದ ಜೊತೆಗೆ ರಶ್ಮಿಕಾ ಅವರ ತೆಲುಗು ಸಿನಿಮಾ 'ಚಲೋ' ಕೂಡ ಇದೇ ತಿಂಗಳು ತೆರೆಗೆ ಬರಲು ಸಿದ್ಧವಾಗಿತ್ತು. ಆದರೆ ಈಗ ಆ ಚಿತ್ರದ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿದೆ.

ಅಂದುಕೊಂಡಂತೆ ಆಗಿದ್ದರೆ 'ಚಲೋ' ಸಿನಿಮಾ ಡಿಸೆಂಬರ್ 29ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಈಗ ಆ ಸಿನಿಮಾ ಫೆಬ್ರವರಿಗೆ ಬಿಡುಗಡೆಯಾಗುತ್ತಿದೆ. ಫೆಬ್ರವರಿ 2ಕ್ಕೆ ಚಿತ್ರದ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇರುವ ಕಾರಣ ಚಿತ್ರದ ರಿಲೀಸ್ ತಡ ಆಗಿದೆಯಂತೆ.

'Chalo' movie will be releasing on 2 February 2018

ಅಂದಹಾಗೆ, 'ಚಲೊ' ಸಿನಿಮಾದಲ್ಲಿ ನಾಗ ಶೌರ್ಯ ನಾಯಕನಾಗಿದ್ದಾರೆ. ಈಗಾಗಲೇ ಚಿತ್ರದ ಹಾಡು ರಿಲೀಸ್ ಆಗಿ ದೊಡ್ಡ ಪ್ರತಿಕ್ರಿಯೆ ಪಡೆದುಕೊಂಡಿದೆ. 'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ತನ್ನ ಮುದ್ದು ಮುಖದ ಮೂಲಕ ಎಲ್ಲರ ಗಮನ ಸೆಳೆದಿದ್ದ ರಶ್ಮಿಕಾ ತೆಲುಗು ಚಿತ್ರದಲ್ಲಿಯೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. 'ಚಲೊ' ಸಿನಿಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಕಾಲಿಟ್ಟಿರುವ ರಶ್ಮಿಕಾ ಅಲ್ಲಿಯೂ ಮೋಡಿ ಮಾಡುವುದಕ್ಕೆ ಸಜ್ಜಾಗಿದ್ದಾರೆ.

More from Filmibeat

English summary
Kannada actress Rashmika Mandanna's 'Chalo' telugu movie gets a new release date. The movie will be releasing on 2 February 2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X