TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡ ಚಂದನ್ ಕುಮಾರ್

ಚಂದನ್ ಕುಮಾರ್.. ಕಿರುತೆರೆ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ ನಾಯಕ ನಟ. ರಿಯಾಲಿಟಿ ಶೋ ಹಾಗೂ ಪ್ರಖ್ಯಾತ ಧಾರಾವಾಹಿಗಳಲ್ಲಿ ನಟಿಸಿ ನಂತರ ಕನ್ನಡ ಸಿನಿಮಾಗಳಲ್ಲಿ ನಾಯಕನಾಗಿ ಅಭಿನಯ ಮಾಡಿದ ಚಂದನ್ ಅಭಿನಯದ ಪ್ರೇಮ ಬರಹ ಚಿತ್ರ ಇತ್ತೀಚಿಗಷ್ಟೇ ಬಿಡುಗಡೆ ಆಗಿತ್ತು.
ಇನ್ನು ಮುಂದೆ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ ಎಂದು ಗೆಸ್ ಮಾಡಿದ್ದ ಅಭಿಮಾನಿಗಳಿಗೆ ಚಂದನ್ ಕುಮಾರ್ ಸರ್ಪ್ರೈಸ್ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಹೊಂದಿರುವ ಚಂದನ್ ನಾಲ್ಕು ವರ್ಷದ ನಂತರ ಮತ್ತೆ ಧಾರಾವಾಹಿ ಮೂಲಕ ಸೀರಿಯಲ್ ಫ್ಯಾನ್ಸ್ ಗಳಿಗೆ ಮತ್ತೆ ಹತ್ತಿರವಾಗುತ್ತಿದ್ದಾರೆ.
'ಬಾಹುಬಲಿ' ಪ್ರಭಾಸ್ ಜೊತೆಯಲ್ಲಿ ಕನ್ನಡ ನಟ ಚಂದನ್!
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗಲು ತಯಾರಾಗಿರುವ 'ಸರ್ವ ಮಂಗಳೇ ಮಾಂಗಲ್ಯೇ' ಧಾರಾವಾಹಿ ಮೂಲಕ ಕಿರುತೆರೆಗೆ ಚಂದನ್ ಕುಮಾರ್ ಮತ್ತೆ ರೀ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಧಾರಾವಾಹಿಯ ಪ್ರೋಮೋ ಬಿಡುಗಡೆ ಆಗಿದೆ.
ಧಾರಾವಾಹಿಯ ಪ್ರಸಾರ ದಿನಾಂಕ ಮತ್ತು ಸಮಯ ಇನ್ನು ನಿಗಧಿ ಆಗಿಲ್ಲ ಆದರೆ ಸೂಷಿಯಲ್ ಮೀಡಿಯಾದಲ್ಲಿ ಕಿರುತೆರೆಯ ಚಂದು ಮತ್ತೆ ಸ್ಮಾಲ್ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸುತ್ತಿದ್ದಾರೆ. ಮುದ್ದು ಲಕ್ಷ್ಮೀ ಧಾರಾವಾಹಿ ನಿರ್ಮಾಣ ಮಾಡಿದ ಹರೀಶ್ ಬಾಬು ಅವರೇ 'ಸರ್ವ ಮಂಗಳೇ ಮಾಂಗಲ್ಯೇ' ಸೀರಿಯಲ್ ಅನ್ನು ನಿರ್ಮಾಣ ಮಾಡುತ್ತಿದ್ದಾರೆ.