ಮದುವೆ ತಯಾರಿಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ

ಈ ಬಾರಿಯ ಮೈಸೂರು ದಸರದಲ್ಲಿ ಭಾರಿ ಸದ್ದು ಮಾಡಿದ್ದ ರ್ಯಾಪರ್ ಮತ್ತು ಬಿಗ್ ಬಾಸ್ ವಿನ್ನರ್ ಚಂದನ್ ಮತ್ತು ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಈಗ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ದಸರ ವೇದಿಕೆಯಲ್ಲಿ ನಿವೇದಿತಾಗೆ ಲವ್ ಪ್ರಪೋಸ್ ಮಾಡಿ ವಿವಾದದಲ್ಲಿ ಸಿಲುಕಿದ್ದ ಈ ಜೋಡಿ ಈಗ ಹಸೆಮಣೆ ಏರಲು ಸಜ್ಜಾಗುತ್ತಿದೆ.

ಅಂದ್ಹಾಗೆ ಇಬ್ಬರ ಮದುವೆ ಸಮಾರಂಭ ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿದೆಯಂತೆ. ಏಪ್ರಿಲ್ ಕೊನೆಯ ವಾರದಲ್ಲಿ ಇಬ್ಬರ ಮದುವೆ ಅದ್ದೂರಿಯಾಗಿ ಮಾಡಲು ಕುಟುಂಬದವರು ನಿರ್ಧರಿಸಿದ್ದಾರಂತೆ. ಈಗಾಗಲೆ ಮದುವೆ ತಯಾರಿಗಳು ಭರ್ಜರಿಯಾಗಿ ನಡೆಯುತ್ತಿದೆಯುತ್ತಿದೆ ಎಂದು ಹೇಳಲಾಗುತ್ತಿದೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ಮದುವೆ ದಿನಾಂಕ ಇನ್ನು ನಿಗದಿಯಾಗಿಲ್ಲ ಇಬ್ಬರು ಕುಟುಂಬದವರು ನಿರ್ಧರಿಸಿ ಮದುವೆ ಡೇಟ್ ಫೈನಲ್ ಮಾಡುವುದಾಗಿ ಹೇಳಿದ್ದರು.

ಈಗ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಿಯಾಲಿಟಿ ಶೋನಲ್ಲಿ ಪರಿಚಯವಾಗಿ ನಂತರ ಸ್ನೇಹಿತರಾಗಿದ್ದ ಚಂದನ್ ಮತ್ತು ನಿವೇದಿತಾ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆ ವರೆಗೂ ಬಂದಿದೆ. ಏಪ್ರಿಲ್ ಕೊನೆಯ ವಾರದಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

Chandan Shetty And Niveditha Gowda Is Busy In Marriage Preparation

ದಸರ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದ ಈ ಜೋಡಿ ನಂತರ ಅಕ್ಟೋಬರ್ 21ಕ್ಕೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಅದ್ದೂರಿ ನಿಶ್ಚಿತಾರ್ಥ ಸಮಾರಂಭಕ್ಕೆ ಕಟುಂಬದವರು ಮತ್ತು ಸ್ನೇಹಿತರು ಮಾತ್ರ ಭಾಗಿಯಾಗಿದ್ದರು. ಮದುವೆ ಎಲ್ಲಿ ನಡೆಯುತ್ತೆ, ಯಾರಿಗೆಲ್ಲ ಆಹ್ವಾನ ಹೋಗುತ್ತೆ ಎನ್ನುವುದು ಇನ್ನು ಬಹಿರಂಗವಾಗಿಲ್ಲ.

More from Filmibeat

English summary
Kannada Rap Singer Chandan Shetty and Niveditha Gowda is busy in marriage preparation.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X