ಪುನೀತ್ ದಂಪತಿ ಭೇಟಿ ಮಾಡಿದ ಚಂದನ್ ಶೆಟ್ಟಿ-ನಿವೇದಿತಾ ಗೌಡ

'ಬಿಗ್ ಬಾಸ್ ಕನ್ನಡ 5ನೇ ಆವೃತ್ತಿ ವಿನ್ನರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸದ್ಯದಲ್ಲೇ ವೈವಾಹಿಕ ಜೀವನ ಆರಂಭಿಸಲಿದ್ದು, ತಮ್ಮ ವಿವಾಹ ಮಹೋತ್ಸವಕ್ಕೆ ಗಣ್ಯರನ್ನು ಆಹ್ವಾನಿಸುತ್ತಿದ್ದಾರೆ.

ಸಿನಿಮಾ ತಾರೆಯರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡುತ್ತಿದ್ದು, ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ರಾಜರಾಜೇಶ್ವರಿನಗರದ ನಿವಾಸದಲ್ಲಿ ಭೇಟಿ ಮಾಡಿದ್ದರು. ನಂತರ ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ವಿನ್ನರ್ ಶೈನ್ ಶೆಟ್ಟಿಗೆ ಆಮಂತ್ರಣ ನೀಡಿದ್ದರು.

ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೂ ಭೇಟಿ ನೀಡಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮದುವೆಗೆ ಆಮಂತ್ರಣ ನೀಡಿದ್ದಾರೆ. ಪುನೀತ್ ಮತ್ತು ಅಶ್ವಿನಿ ಅವರನ್ನು ಭೇಟಿ ಮಾಡಿ ಮದುವೆಯ ಕರೆಯೋಲೆ ನೀಡಿದ್ದಾರೆ. ಈ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Chandan Shetty Invited Puneeth Rajkumar To His Wedding

ಅಂದ್ಹಾಗೆ, ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಮದುವೆ ಫೆಬ್ರವರಿ 25 ಮತ್ತು 26 ರಂದು ನಡೆಯಲಿದೆ. ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ಬಿಗ್ ಬಾಸ್ ಜೋಡಿಯ ವಿವಾಹ ಕಾರ್ಯಕ್ರಮ ನೆರವೇರಲಿದೆ.

More from Filmibeat

English summary
Bigg Boss season-5 winner Chandan Shetty invited powerstar puneeth rajkumar to the wedding. chandan shetty tie the knot to niveditha gowda on february 26th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X