»   » 'ಚಂದನವನದ ವರ್ಷದ ಹಾದಿ' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬನ್ನಿ

'ಚಂದನವನದ ವರ್ಷದ ಹಾದಿ' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬನ್ನಿ

Posted By:
Subscribe to Filmibeat Kannada

ಕರ್ನಾಟಕ ಚಲನಚಿತ್ರ ಅಕಾಡೆಮಿ ನವೆಂಬರ್ 28 ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪಿ-2 ಸಭಾಂಗಣದಲ್ಲಿ 'ಚಂದನವನದ ವರ್ಷದ ಹಾದಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಅಕಾಡೆಮಿಯ ಅಂತರ್ಜಾಲ ಚಾಲನೆ ಸಮಾರಂಭವನ್ನು ಏರ್ಪಡಿಸಲಾಗಿದೆ.

ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಎಸ್. ಚನ್ನಪ್ಪಗೌಡ ಅವರು ಪುಸ್ತಕ ಬಿಡುಗಡೆ ಮಾಡಿ ಅಕಾಡೆಮಿಯ ಅಂತರ್ಜಾಲಕ್ಕೆ ಚಾಲನೆ ನೀಡಲಿದ್ದಾರೆ.[ಕನ್ನಡ ಚಿತ್ರರಂಗದ ಏಳಿಗೆ ಬಗ್ಗೆ ಗಿರೀಶ್ ಕಾಸರವಳ್ಳಿ ಮಾತು]

'Chandanavanada Varshada Haadi' book released by KFI

ಅಕಾಡೆಮಿಯ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರು ಸಮಾರಂಭ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.['ಚಿತ್ರಪಥ' ಪುಸ್ತಕ ಬಿಡುಗಡೆಗೆ ತಪ್ಪದೇ ಬನ್ನಿ]

ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ಅಕಾಡೆಯ ಅಧ್ಯಕ್ಷ ಟಿ.ಎಸ್. ನಾಗಾಭರಣ, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ತಾರಾ ಅನುರಾಧಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್. ಆರ್. ವಿಶುಕುಮಾರ್, ಚಂದನವನದ ಸಂಪಾದಕ ಮಂಡಳಿಯ ಸದಸ್ಯರಾದ ಶ್ಯಾಮಸುಂದರ ಕುಲಕರ್ಣಿ, ಚ.ಹ. ರಘುನಾಥ್, ಎನ್.ವಿಶಾಖ ಹಾಗೂ ಚೇತನ್ ನಾಡಿಗೇರ್ ಅವರು ಭಾಗವಹಿಸಲಿದ್ದಾರೆ. ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ಅವರು ತಿಳಿಸಿದ್ದಾರೆ.

English summary
Karnataka Chalanachitra Academy is releasing book namely, 'Chandanavanada Varshada Haadi' on November 28th. Venue - Karnataka cricket P2 Hall, Bengaluru at 12.30 PM.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada