ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ತೊಟದ ಮನೆಯಲ್ಲಿ ವಿನೋದ್ ರಾಜ್ ಆರೈಕೆಯಲ್ಲಿ ಇದ್ದಾರೆ. ಕಳೆದೆರಡು ತಿಂಗಳಿನಿಂದ ಚಿತ್ರರಂಗದ ಹಿರಿಯ ನಟರು, ಸ್ಟಾರ್ ನಟರು, ಕಲಾವಿದರು, ತಂತ್ರಜ್ಞರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.

ನಟ ಶಿವರಾಜ್ ಕುಮಾರ್ ಭೇಟಿಯಾಗಿ ಬಂದ ಎರಡು ದಿನಗಳ ಬಳಿಕ ಭಾನುವಾರ (ಡಿಸೆಂಬರ್ 3) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೀಲಾವತಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ "ಲೀಲಾವತಿ ಅವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದು ಭರವಸೆ ನೀಡಿದ್ದಾರೆ.

Chief Minister Siddaramaiah visited Senior actress Leelavathi house

ಲೀಲಾವತಿ ಅವರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ: ಸಿದ್ದರಾಮಯ್ಯ

ಹೊರೊಯ ನಟಿಯ ಆರೋಗ್ಯ ಸಮಸ್ಯೆಗಗಳ ಬಗ್ಗೆ ಮಾಹಿತಿ ಪಡೆದ ಕಲಾವಿದರು ಅವರನ್ನು ಭೇಟಿ ಮಾಡುತ್ತಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದ ಮನೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳ ಅಧಿಕೃತ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದು ತಿಳಿಸಿದೆ.

"ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ" ಎಂದು ಲೀಲಾವತಿ ಅವರ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ.

Chief Minister Siddaramaiah visited Senior actress Leelavathi house

ಇದರ ಜೊತೆಗೆ ನಟ ವಿನೋದ್ ರಾಜ್ ಅವರ ಬಗ್ಗೆಯೂ ಮಾತನಾಡಿದ್ದು, "ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು" ಎಂದು ಭರವಸೆ ನೀಡಿದ್ದಾರೆ.

ಶಿವಣ್ಣ, ದರ್ಶನ್, ಅರ್ಜುನ್ ಸರ್ಜಾ ಭೇಟಿ

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರಿಗೆ ಸದ್ಯಕ್ಕೆ ಅವರಿಗೆ ಟ್ಯೂಬ್ ಸಹಾಯದಿಂದ ದ್ರವಾಹಾರವನ್ನು ನೀಡಲಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲೀಲಾವರಿ ಅವರ ನೀವಾಸಕ್ದಕೆ ಭೇಟಿ ನೀಡಿದ್ದರು. ಜೊತೆಗೆ ಮೊನ್ನೆ ಮೊನ್ನೆ ದರ್ಶನ್ ತೂಗುದೀಪ, ಬಹುಭಾಷಾ ನಟ ಅರ್ಜುನ್ ಸರ್ಜಾ, ಅಭಿಷೇಕ್ ಅಂಬರೀಶ್ ಸಹ ಹಿರಿಯ ನಟಿಯ ಆರೋಗ್ಯ ವಿಚಾರಿಸಿದ್ದರು.

ಲೀಲಾವತಿ ಹಾಗೂ ವಿನೋದ್ ರಾಜ್ ಭೇಟಿ ಮಾಡಿದ ಬಳಿಕ ನಟ ಶಿವರಾಜ್‌ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ, "ಈ ವಯಸ್ಸಿನಲ್ಲಿ ಇದನ್ನೆಲ್ಲಾ ತಡೆದುಕೊಳ್ಳುವ ಶಕ್ತಿ ಯಾರಿಗೂ ಇರಲ್ಲ. ಯೋಗಪುರುಷರು ಅಂತಾರೆ. ಅದಕ್ಕೆ ಲೀಲಾವತಿಯವರು ಅಷ್ಟು ಶಕ್ತಿಯಿಂದ ತಡೆದುಕೊಂಡಿದ್ದಾರೆ. ಆಗಿನ ಕಾಲದವರು ಬಹಳ ಸ್ಟ್ರಾಂಗ್ ಆಗಿ ಇರ್ತಾರೆ. ಲೀಲಾವತಿ ಅವರನ್ನು ನಾವು ಯಾಕೆ ಪ್ರೀತಿಸುತ್ತೀವಿ ಅಂದ್ರೆ ಅವತ್ತಿನಿಂದ ಅದೇ ಅನುಬಂಧ ಇದೆ. ಚಿಕ್ಕ ವಯಸ್ಸಿನಿಂದ ಅವರನ್ನು ನೋಡುತ್ತಿದ್ದೇನೆ. ಯಾವಾಗ ಕಂಡರೂ ಅದೇ ಆತ್ಮೀಯತೆ, ಅನುಬಂಧ ಇದೆ. ಅವರನ್ನು ಮರೆಯೋಕೆ ಸಾಧ್ಯವಿಲ್ಲ. ವಿನೋದ್ ಅವರನ್ನು ನೋಡಿದರೆ ಅವ್ರ ತಾಯಿಯನ್ನು ನೋಡಿದಂತೆ ಆಗುತ್ತದೆ" ಎಂದು ಶಿವರಾಜ್‌ಕುಮಾರ್ ಹೇಳಿದ್ದರು.

More from Filmibeat

English summary
CM Siddaramaiah visited Senior actress Leelavathi house.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X