For Quick Alerts
  ALLOW NOTIFICATIONS  
  For Daily Alerts

  ಸಿಂಪಲ್ ಆಗಿ ನೆರವೇರಿತು ಚಿರಂಜೀವಿ ಸರ್ಜಾ - ಮೇಘನಾ ರಾಜ್ ನಿಶ್ಚಿತಾರ್ಥ

  By Naveen
  |

  ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ನಿಶ್ಚಿತಾರ್ಥ ಇಂದು ನೆರವೇರಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆ.ಪಿ.ನಗರದ ಮೇಘನಾ ರಾಜ್ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಸರಳವಾಗಿ ನಡೆಯಿತು.

  ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಚಿರು ಹಾಗೂ ಮೇಘನಾ ಕುಟುಂಬಸ್ಥರು ಭಾಗಿಯಾಗಿದ್ದರು. ನಟ ಅರ್ಜುನ್ ಸರ್ಜಾ ಅವರ ಪತ್ನಿ ಆಶಾ ರಾಣಿ ಹಾಗೂ ಪುತ್ರಿ ಐಶ್ವರ್ಯ ಅರ್ಜುನ್, ಜೊತೆಗೆ ಚಿರಂಜೀವಿ ಸರ್ಜಾ ಸಹೋದರ ಧ್ರುವ ಸರ್ಜಾ ಹಾಗೂ ಸುಂದರ್ ರಾಜ್ ದಂಪತಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ತೊಡಗಿದ್ದರು.

  ತಾಂಬೂಲ ಬದಲಾವಣೆ, ಸೀರೆ ನೀಡುವ ಶಾಸ್ತ್ರ ಸೇರಿದಂತೆ ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥ ನಡೆಯಿತು. ಕೆಂಪು ಸೀರೆಯಲ್ಲಿ ಮೇಘನಾ ರಾಜ್ ಮಿಂಚಿದರೆ, ವೈಟ್ ಶರ್ಟ್ ನಲ್ಲಿ ಚಿರು ಸಖತ್ ಆಗಿ ಕಾಣಿಸಿಕೊಂಡಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ತೀರಾ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಚಿರು - ಮೇಘನಾ ಉಂಗುರ ಬದಲಿಸಿಕೊಂಡರು.

  ಅನಂತ ಶಾಸ್ತ್ರಿಗಳ ನೇತೃತ್ವದಲ್ಲಿ ಇಡೀ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಇದರ ಜೊತೆಗೆ ಇಂದು ಸಂಜೆ 7 ಗಂಟೆಗೆ ಲೀಲಾ ಪ್ಯಾಲೇಸ್ ನಲ್ಲಿಯೂ ಅದ್ದೂರಿ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿದ್ದು, ಅಲ್ಲಿಗೆ ನಟ ದರ್ಶನ್, ಸುದೀಪ್, ಜಗ್ಗೇಶ್, ಅಂಬರೀಶ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

  English summary
  Kannada Actor Chiranjeevi Sarja got engaged to Kannada Actress Meghana Raj today (october22d) in Bengaluru.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X