For Quick Alerts
  ALLOW NOTIFICATIONS  
  For Daily Alerts

  ಕುದುರೆಯಿಂದ ಬಿದ್ದ ಚಿರಂಜೀವಿ ಆಸ್ಪತ್ರೆಗೆ ದಾಖಲು

  By Rajendra
  |

  ಕನ್ನಡ ನಟ ಚಿರಂಜೀವಿ ಸರ್ಜಾ ಅವರು ವರದನಾಯಕ ಚಿತ್ರೀಕರಣ ವೇಳ ಗಾಯಗೊಂಡಿದ್ದಾರೆ. ಮೈಸೂರಿನಲ್ಲಿ ಕುದುರೆ ಮೇಲಿಂದ ಬಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.

  'ವರದನಾಯಕ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದ ಸಾಹಸ ಸನ್ನಿವೇಶದಲ್ಲಿ ಚಿರು ಕುದುರೆಯಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಮರಳಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಅತಿಥಿ ಪಾತ್ರವನ್ನು ಪೋಷಿಸುತ್ತಿದ್ದಾರೆ.

  ನಿಖಿತಾ ಪಾಟೀಲ್, ಸಮೀರಾ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಶೋಭ್‌ರಾಜ್, ಶರತ್ ಲೋಹಿತಾಶ್ವಾ, ಬುಲೆಟ್ ಪ್ರಕಾಶ್, ಶರಣ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಈಶ್ವರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ. (ಏಜೆನ್ಸೀಸ್)

  English summary
  Kannada actor Chiranjeevi Sarja injured during shooting of a fight sequence of his latest film Varadanayaka in Mysore. He was taken to a hospital where he is said to be out of danger.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X