ಹಿರಿಯ ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಜಯಂತಿ ಅವರ ಆರೋಗ್ಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಮೈಸೂರು ಪ್ರವಾಸಕ್ಕೂ ಮುನ್ನಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಜಯಂತಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಇನ್ನು ಜಯಂತಿ ಅವರೊಂದಿಗೆ ಮುಖ್ಯಮಂತ್ರಿ ಅವರು ಮಾತನಾಡಿದ್ದು, ಅದರ ಫೋಟೋ ಬಹಿರಂಗವಾಗಿದೆ. ನಂತರ ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಅವರೊಡನೆ ಮಾತನಾಡಿದ ಸಿದ್ದರಾಮಯ್ಯ ಅವರು, ಶೀಘ್ರ ಗುಣಮುಖರಾಗುವಂತೆ ಎಚ್ಚರವಹಿಸಿ ಎಂದು ಹೇಳಿದರು.

ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ಸತೀಶ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಜಯಂತಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವುದರಿಂದ ವೆಂಟಿಲೇಟರ್ ತೆಗೆಯಲಾಗಿದೆ.
ಜಯಂತಿ ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಅನೇಕ ಗಣ್ಯರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಮತ್ತೊಂದೆಡೆ ಹಿರಿಯ ನಟಿ ಜಯಂತಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ನಿರ್ಮಾಪಕ ಭಾ.ಮಾ.ಹರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಮೃತ್ಯುಂಜಯ ಹೋಮ ಮಾಡಿಸಿದ್ದಾರೆ.


Click it and Unblock the Notifications











