For Quick Alerts
  ALLOW NOTIFICATIONS  
  For Daily Alerts

  ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಪ್ರಾರಂಭ : ಬಸವರಾಜ ಬೊಮ್ಮಾಯಿ

  By ಫಿಲ್ಮಿಬೀಟ್ ಡೆಸ್ಕ್
  |

  ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಇದೇ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

  ನಟಸಾರ್ವಭೌಮ ಡಾ ರಾಜ್ ಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

  ಯಾರೂ ಮನವಿ ಅಥವಾ ಬೇಡಿಕೆ ಸಲ್ಲಿಸದಿದ್ದರೂ ಪ್ರಸಕ್ತ 2022-23 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ತಾವು 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿರುವುದಾಗಿ ತಿಳಿಸಿದರು.

  Recommended Video

  Puneeth Rajkumar | ಶೀಘ್ರದಲ್ಲೇ ತಲೆ ಎತ್ತಲಿದೆ ಅಪ್ಪು ಕನಸಿನ ಶಾಲೆ

  ಕಾಡುಗಳ್ಳ ವೀರಪ್ಪನ್ ಅವರಿಂದ ಬಂಧಮುಕ್ತರಾದ ನಂತರ ಡಾ ರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕಹಿ ಘಟನೆಗಳನ್ನು ಸ್ಮರಿಸದೆಯೇ ಕೆಟ್ಟ ವಿಚಾರಗಳನ್ನು ಪ್ರಸ್ತಾಪಿಸದೇ ಕೇವಲ ಒಳ್ಳೆಯ ವಿಷಯಗಳನ್ನೇ ಮಾತನಾಡಿದ ಡಾ ರಾಜ್ ಕುಮಾರ್ ಅವರ ಉದಾತ್ತ ಮನೋಭಾವವನ್ನು ಕೊಂಡಾಡಿದರು.

  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀವಿತಾವಧಿ ಸಾಧನೆಗಾಗಿ ಸುಪ್ರಸಿದ್ಧ ನಟಿ ಲಕ್ಷ್ಮೀ ಅವರಿಗೆ ಡಾ ರಾಜಕುಮಾರ್ ಪ್ರಶಸ್ತಿ ಹಾಗೂ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಡಾ ರಾಜ್ ಕುಮಾರ್ ಅವರ ಹೆಸರಿನ ಪ್ರಶಸ್ತಿ ತಮಗೆ ಲಭಿಸುತ್ತಿರುವುದು ರಾಜ್ ಅವರ ಆಶೀರ್ವಾದ ಲಭಿಸಿದಂತೆ ಎಂದು ನಟಿ ಲಕ್ಷ್ಮೀ ಅವರು ಭಾವುಕರಾಗಿ ನುಡಿದರು.

  ಕೆಲಸ ಕಲಿಯಲು ಪುಟ್ಟಣ್ಣ ಕಣಗಾಲ್ ಅವರಲ್ಲಿ ತಾವು ಅವಕಾಶ ಕೋರಿದ ದಿನಗಳನ್ನು ಸ್ಮರಿಸಿದ ನಟ-ನಿರ್ದೇಶಕ ಎಸ್ ನಾರಾಯಣ್ ಅವರು ಪುಟ್ಟಣ್ಣ ಅವರ ಹೆಸರಿನ ಪ್ರಶಸ್ತಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯ ಹಾಗೂ ಈ ದಿನ ತಮ್ಮ ಪಾಲಿನ ಸುದಿನ ಎಂದು ಬಣ್ಣಿಸಿದರು.

  ಕನ್ನಡ ಚಲನಚಿತ್ರ ರಂಗಕ್ಕೆ ಹಲವು ಸದಭಿರುಚಿಯ ಚಿತ್ರಗಳ ಕೊಡುಗೆ ನೀಡಿದ ನಿರ್ಮಾಪಕ ಹಾಗೂ ವಿಷ್ಣುವರ್ಧನ್ ಪ್ರಶಸ್ತಿಗೆ ಭಾಜನರಾಗಿದ್ದ ಜಿ ಎನ್ ಲಕ್ಷ್ಮೀಪತಿ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಪತಿ ಅವರ ಪುತ್ರ ರಾಮಪ್ರಸಾದ್ ಅವರು ತಮ್ಮ ತಂದೆಯ ಪರವಾಗಿ ಮುಖ್ಯಮಂತ್ರಿಯವರಿಂದ ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಿದರು.

  ಡಾ ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ವಿಷ್ಣುವರ್ಧನ್ ಪ್ರಶಸ್ತಿ ವಿಜೇತರಿಗೆ ತಲಾ ಐದು ಲಕ್ಷ ರೂಪಾಯಿ ನಗದು, ಐವತ್ತು ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕ, ಸ್ಮರಣಿಕೆ ಮತ್ತು ಫಲ ತಾಂಬೂಲ ನೀಡಿ ಮುಖ್ಯಮಂತ್ರಿ ಗೌರವಿಸಿದ್ದು ಗಮನಾರ್ಹ. ಉತ್ತಮ ನಟ, ಉತ್ತಮ ನಟಿ ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಗಳ ಹಾಗೂ ಇತರೆ ತಾಂತ್ರಿಕ ವರ್ಗದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

  ಡಾ ರಾಜ್ ಕುಮಾರ್ ಅವರ ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರು ತಮ್ಮ ತಂದೆ ರಾಜ್ ಕುಮಾರ್ ಹಾಗೂ ಕಿರಿಯ ಸಹೋದರ ಪುನೀತ್ ರಾಜ್ ಕುಮಾರ್ ಅವರ ಸರಳತೆ ಮತ್ತು ಮಾನವೀಯತೆಯ ಗುಣಗಳನ್ನು ಅನಾವರಣ ಗೊಳಿಸಿದರು.

  ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ ಆರ್ ಜೈರಾಜ್, ಹೆಸರಾಂತ ನಿರ್ಮಾಪಕ ಎಸ್ ಎ ಚಿನ್ನೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ ಅವರೂ ಸೇರಿದಂತೆ ಹಲವು ಗಣ್ಯರು ವೇದಿಕೆಯನ್ನು ಅಲಂಕರಿಸಿದ್ದರು. ಸಮಾರಂಭಕ್ಕೆ ಮುನ್ನ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ ಪ್ರೇಕ್ಷಕರ ಮನತಣಿಸಿತು.

  English summary
  CM Basavaraj Bommai said Chitra Nagari contruction in Mysore will start this year only. Also he remembered time spent with Dr Rajkumar.
  Monday, April 25, 2022, 10:03
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X