ವಿಶ್ವಕಪ್ ವಿಜೇತನ ಜೊತೆ '83' ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ

ಭಾರತದ ಕ್ರಿಕೆಟ್ ತಂಡ ಮೊದಲ ವಿಶ್ವಕಪ್ ಜಯಿಸಿದ ಕತೆಯನ್ನು ಹೊಂದಿರುವ 83 ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.

'83' ಸಿನಿಮಾವನ್ನು ಕರ್ನಾಟಕದಲ್ಲಿ ನಟ ಸುದೀಪ್ ವಿತರಣೆ ಮಾಡಿದ್ದು ಸಿನಿಮಾಕ್ಕೆ ಕರ್ನಾಟಕದಲ್ಲಿಯೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವರೇ '83' ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ.

1983ರಲ್ಲಿ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದ ಕರ್ನಾಟಕದ ಸೈಯ್ಯದ್ ಕಿರ್ಮಾನಿ ಹಾಗೂ ಕುಟುಂಬದೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿನಿಮಾ ವೀಕ್ಷಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರೊಟ್ಟಿಗೆ ಸಚಿವ ಆರ್.ಅಶೋಕ್ ಸೇರಿದಂತೆ ಇನ್ನೂ ಕೆಲವು ಗಣ್ಯರು ಸಹ ಸಿನಿಮಾ ವೀಕ್ಷಿಸಿದ್ದಾರೆ.

CM Basavaraj Bommai Watched 83 Movie With Cricketer Syed Kirmani

ಕೋರಮಂಗಲದ ಫೋರಂ ಮಾಲ್‌ನಲ್ಲಿ ಸಿಎಂ ಬೊಮ್ಮಾಯಿ ಹಾಗೂ ಇತರ ಗಣ್ಯರಿಗೆ ಶೋ ಏರ್ಪಡಿಸಲಾಗಿತ್ತು. ಸಿಎಂ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು ಸೈಯ್ಯದ್ ಕಿರ್ಮಾನಿ. ಸಿಎಂ ಸೇರಿದಂತೆ ಇತರ ಗಣ್ಯರು ಆರಾಮದಾಯಕ ರಿಕ್ಲೇನರ್ ಸೀಟ್‌ಗಳಲ್ಲಿ ಕೂತು ಸಿನಿಮಾ ವೀಕ್ಷಿಸಿದರು. ಸಿನಿಮಾ ಮುಗಿದ ಬಳಿಕ ಸೈಯ್ಯದ್ ಕಿರ್ಮಾನಿ ಅವರ ಕುಟುಂಬದ ಸದಸ್ಯರನ್ನು ಭೇಟಿಯಾದ ಸಿಎಂ ಬೊಮ್ಮಾಯಿ ಅವರೊಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡರು.

CM Basavaraj Bommai Watched 83 Movie With Cricketer Syed Kirmani

'83' ಸಿನಿಮಾವು ಭಾರತ ಕ್ರಿಕೆಟ್ ತಂಡ 1983ರ ವಿಶ್ವಕಪ್ ಗೆದ್ದ ಕತೆಯನ್ನು ಒಳಗೊಂಡಿದ್ದು, ಕಪಿಲ್ ದೇವ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ನಟಿಸಿದ್ದಾರೆ. ಸಿನಿಮಾವನ್ನು ಕಬೀರ್ ಖಾನ್ ನಿರ್ದೇಶನ ಮಾಡಿದ್ದು, ದೀಪಿಕಾ ಪಡುಕೋಣೆ, ಸಾಜಿದ್ ನಾಡಿಯಾವಾಲಾ ಸೇರಿದಂತೆ ಇನ್ನೂ ಕೆಲವರು ಬಂಡವಾಳ ಹೂಡಿದ್ದಾರೆ. ಕರ್ನಾಟಕದಲ್ಲಿ ಈ ಸಿನಿಮಾವನ್ನು ಸುದೀಪ್ ವಿತರಣೆ ಮಾಡುತ್ತಿದ್ದಾರೆ.

More from Filmibeat

English summary
CM Basavaraj Bommai watched 83 movie with former cricketer Syed Kirmani. 83 movie is made on world cup winning team of 1983.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X