twitter
    For Quick Alerts
    ALLOW NOTIFICATIONS  
    For Daily Alerts

    ರೆಬೆಲ್ ಸ್ಟಾರ್ ಅಂಬರೀಶ್ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಕಣ್ಣೀರು

    |

    Recommended Video

    Ambareesh, Kannada Actor Demise : ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಎಚ್ ಡಿ ಕುಮಾರಸ್ವಾಮಿ

    ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅಂಬರೀಶ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದರು. ಅಭಿಮಾನಿಗಳು ಶಾಂತ ರೀತಿಯಲ್ಲಿ ವರ್ತಿಸಬೇಕು ಎಂದು ಸಿ.ಎಂ. ಕುಮಾರಸ್ವಾಮಿ ಮನವಿ ಮಾಡಿದರು.

    ''ಎಲ್ಲರ ಪ್ರೀತಿ ಪಾತ್ರಕ್ಕೆ ಒಳಗಾದ.. ನನಗೆ ಅತ್ಯಂತ ಆತ್ಮೀಯರಾಗಿದ್ದ.. ಚಿತ್ರರಂಗದ ದಿಗ್ಗಜ ಅಂಬರೀಶ್ ನಿಧನರಾಗಿದ್ದಾರೆ. ಇವತ್ತು ನನ್ನ ಪಾಲಿಗೆ ಅತ್ಯಂತ ಕೆಟ್ಟ ದಿನ. ಅಭಿಮಾನಿಗಳ ನೋವು ನನಗೆ ಅರ್ಥ ಆಗುತ್ತದೆ. ನಾಳೆ ಬೆಳಗ್ಗೆ 7.30-8 ಗಂಟೆ ಹೊತ್ತಿಗೆ ಕಂಠೀರವ ಸ್ಟೇಡಿಯಮ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಭಿಮಾನಿಗಳು ದಯವಿಟ್ಟು ಸಹಕರಿಸಬೇಕು'' ಎಂದರು ಎಚ್.ಡಿ.ಕುಮಾರಸ್ವಾಮಿ.

    cm-hd-kumaraswamy-condolences-over-kannada-actor-former-minister-ambareesh-death

    ಮಂಡ್ಯದ ಗಂಡು, ಕರುನಾಡ ಕರ್ಣ, ಸ್ಯಾಂಡಲ್ ವುಡ್ ನ ಜಲೀಲ ಅಂಬರೀಶ್ ಇನ್ನಿಲ್ಲ.!ಮಂಡ್ಯದ ಗಂಡು, ಕರುನಾಡ ಕರ್ಣ, ಸ್ಯಾಂಡಲ್ ವುಡ್ ನ ಜಲೀಲ ಅಂಬರೀಶ್ ಇನ್ನಿಲ್ಲ.!

    ''ಮಂಡ್ಯ ಜಿಲ್ಲೆಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಬೇಕು ಎಂಬುದು ಅಂಬರೀಶ್ ಪುತ್ರ ಅಭಿಷೇಕ್ ಮನವಿ. ಆದ್ರೆ, ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ಆಗುವ ಕಾರಣ ಅನಾನುಕೂಲ ಆಗಬಾರದು ಎಂದು ಮಂಡ್ಯದಿಂದ ಅಭಿಮಾನಿಗಳು ಬರಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ'' ಅಂತ ಕುಮಾರಸ್ವಾಮಿ ತಿಳಿಸಿದರು.

    ಮಂಡ್ಯ ಅಪಘಾತ ನೋಡಿ ಜೀವ ಬಿಟ್ಟರಾ ಅಂಬರೀಶಣ್ಣಾ.?ಮಂಡ್ಯ ಅಪಘಾತ ನೋಡಿ ಜೀವ ಬಿಟ್ಟರಾ ಅಂಬರೀಶಣ್ಣಾ.?

    ''ಅಂಬರೀಶ್ ಹೆಸರಿನಲ್ಲಿ ವಿಶೇಷ ಸ್ಮಾರಕ ಬೆಂಗಳೂರಿನ ಸ್ಥಾಪನೆ ಮಾಡುತ್ತೇವೆ. ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂಬರೀಶ್ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆ ಮಾಡುವಾಗ ಎಲ್ಲರ ಸಹಕಾರ ಅಗತ್ಯ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಪ್ರಾರ್ಥಿಸೋಣ'' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

    English summary
    CM HD Kumaraswamy condolences over Kannada Actor Former Minister Ambareesh death.
    Sunday, November 25, 2018, 0:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X