ಬೆಂಗಳೂರು ಚಲನಚಿತ್ರೋತ್ಸವ: ಈ ಬಾರಿ ದೇಶ ವಿದೇಶಗಳ 200ಕ್ಕೂ ಹೆಚ್ಚು ಸಿನಿಮಾಗಳ ಪ್ರದರ್ಶನ

ಕರ್ನಾಟಕ ಚಲನಚಿತ್ರ ಅಕಾಡೆಮಿಯು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು (BIFFes) ಆಯೋಜಿಸುತ್ತಿದೆ. ಚಲನಚಿತ್ರೋತ್ಸವದ 15 ನೇ ಆವೃತ್ತಿಯು ಫೆಬ್ರವರಿ 29 ರಿಂದ 7 ಮಾರ್ಚ್ ವರೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಲಾಗಿದೆ. ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ವಿದ್ಯಾಶಂಕರ್, ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಇದ್ದರು.

CM Siddaramaiah launch Bengaluru International film festival (BIFFes) logo

200 ಕ್ಕೂ ಹೆಚ್ಚು ಚಲನಚಿತ್ರಗಳ ಪ್ರದರ್ಶನ

ಈ ಹಿಂದೆ ಚಿತ್ರೋತ್ಸವದಲ್ಲಿ 14 ಪರದೆಗಳಲ್ಲಿ 50 ಕ್ಕೂ ಹೆಚ್ಚು ದೇಶಗಳ 200 ಕ್ಕೂ ಹೆಚ್ಚು ಚಲನಚಿತ್ರಗಳ ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದೆ. ಈ ಬಾರಿ ಚಲನ ಚಿತ್ರೋತ್ಸವದಲ್ಲಿ ಹಿಂದಿನಂತೆಯೇ 200 ಸಿನಿಮಾಗಳು ಪ್ರದರ್ಶನವಾಗಲಿದೆ ಎಂದು ಮುಖ್ಯಮಂತ್ರಿಗಲ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ 15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ, ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದೆ.

CM Siddaramaiah launch Bengaluru International film festival (BIFFes) logo

ಮಾರ್ಚ್ 7 ರ ಗುರುವಾರ ಸಂಜೆ ಸಮಾರೋಪ ಸಮಾರಂಭ ನಡೆಸಲಾಗುತ್ತದೆ. ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಸಲಾಗುತ್ತದೆ. ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಲನಚಿತ್ರ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಒಪ್ಪಿಕೊಂಡಿದೆ.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ಗೆ ಗೌರವ ಸಲ್ಲಿಕೆ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ನಟಿ ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಗಿದೆ.

ಸಿನಿಮಾಗಳನ್ನು ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್‌ನ 11 ಪರದೆಗಳು, ಚಾಮರಾಜ ಪೇಟೆಯಲ್ಲಿರುವ ರಾಜ್ ಕುಮಾರ್ ಕಲಾ ಭವನ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಚಿತ್ರಸಮಾಜದಲ್ಲಿ ಮಾರ್ಚ್ 1 ರಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ. ಸಿನಿಮಾ ಆಸಕ್ತರು www.biffes.org ಗೆ ಭೇಟಿ ನೀಡಿ ನೊಂದಣಿ ಮಾಡಿಸಬಹುದು.

More from Filmibeat

English summary
Bengaluru International film festival held from February 29th – 7th March.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X