»   » ಪಾರ್ವತಮ್ಮ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

ಪಾರ್ವತಮ್ಮ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

Posted By:
Subscribe to Filmibeat Kannada

ಹಿರಿಯ ನಿರ್ಮಾಪಕಿ, ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಪಾರ್ವತಮ್ಮ ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದು, ಸೋಮವಾರ (ಮೇ 15) ಎಂ.ಎಸ್ ರಾಮಯ್ಯ ಆಸ್ಪತ್ರೆ ದಾಖಲಾಗಿದ್ದರು. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಸಿಎಂಗೆ ಪಾರ್ವತಮ್ಮ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

CM Siddaramaiah Visit to MS Ramaiah Hospital

ಸದ್ಯ, ಪಾರ್ವತಮ್ಮ ರಾಜ್ ಕುಮಾರ್ ಅವರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ, ಯಾವುದೇ ಆತಂಕ ಪಡುವಂತಿಲ್ಲವೆಂದು ವೈದ್ಯರು ಮತ್ತು ಕುಟುಂಬದವರು ತಿಳಿಸಿದ್ದಾರೆ.

CM Siddaramaiah Visit to MS Ramaiah Hospital

ಇನ್ನು ಈಗಾಗಲೇ ಪಾರ್ವತಮ್ಮ ಅವರನ್ನ ವಿವಿಧ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ವರದಿ ಬಂದ ನಂತರ ಡಿಸ್ಜಾರ್ಜ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಮಾರ್ಚ್ 7 ರಂದು ಪಾರ್ವತಮ್ಮ ಅವರು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.

English summary
Kannada Producer Parvathamma Rajkumar hospitalized And CM Siddaramaiah Visit to MS Ramaiah Hospital

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X