For Quick Alerts
  ALLOW NOTIFICATIONS  
  For Daily Alerts

  ಡಾ.ರಾಜ್ ಕುಮಾರ್ ಜನ್ಮದಿನಾಚರಣೆ: ಸಿಎಂ ಯಡಿಯೂರಪ್ಪ ಶುಭ ಕೋರಿದ್ದು ಹೀಗೆ

  |

  ಡಾ.ರಾಜ್ ಅಭಿಮಾನಿಗಳಿಗೆ ಇಂದು ಹಬ್ಬದ ಸಂಭ್ರಮ. ಅಭಿಮಾನಿಗಳ ಆರಾಧ್ಯದೈವ ವರನಟ, ನಟಸಾರ್ವಭೌಮ ಡಾ.ರಾಜ್ ಕುಮಾರ್ 91ನೇ ಜನ್ಮದಿನಾಚರಣೆ ಸಂಭ್ರಮ. ಪ್ರತೀವರ್ಷ ರಾಜ್ ಕುಮಾರ್ ಹುಟ್ಟುಹಬ್ಬವನ್ನು ರಾಜ್ಯದಾದ್ಯಂತ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು.

  ಅಭಿಮಾನಿಗಳು ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ ಈ ವರ್ಷ ರಾಜ್ ಉತ್ಸವ ನಡೆಯುತ್ತಿಲ್ಲ. ಕೊರೊನಾ ಹಾವಳಿಯ ಪರಿಣಾಮ ಹುಟ್ಟುಹಬ್ಬವನ್ನು ಅದ್ದೂರಿಯಾರಿ ಆಚರಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅಭಿಮಾನಿಗಳು ಮನೆಯಲ್ಲಿಯೇ ಡಾ.ರಾಜ್ ಸ್ಮರಣೆ ಮಾಡುತ್ತಿದ್ದಾರೆ.

  Quiz: ಡಾ. ರಾಜ್ ಕುಮಾರ್ ಕುರಿತ 10 ಪ್ರಶ್ನೆಗಳಿಗೆ ನಿಮ್ಮ ಉತ್ತರವೇನು?Quiz: ಡಾ. ರಾಜ್ ಕುಮಾರ್ ಕುರಿತ 10 ಪ್ರಶ್ನೆಗಳಿಗೆ ನಿಮ್ಮ ಉತ್ತರವೇನು?

  ಈಗಾಗಲೆ ಸಾಕಷ್ಟು ಗಣ್ಯರು ರಾಜ್ ಕುಮಾರ್ ಜನ್ಮದಿನಾಚರಣೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಕೋರುತ್ತಿದ್ದಾರೆ. ರಾಜ್ಯದ ಸಿಎಂ ಯಡಿಯೂರಪ್ಪ ಸಹ ಡಾ.ರಾಜ್ ಜನ್ಮದಿನಾಚರಣೆಗೆ ವಿಶ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಕೋರಿರುವ ಸಿಎಂ ತಾಯಿ ಭುವನೇಶ್ವರಿಯ ಸೇವೆಗೆ ಕರೆ ಬಂದಾಗಲೆಲ್ಲ ಎದ್ದು ಬಂದ ಮಹಾನುಭಾವ ರಾಜಣ್ಣನವರು. ಎಂದು ಹೇಳಿದ್ದಾರೆ.

  "ನಟ ಸಾರ್ವಭೌಮ-ಕರ್ನಾಟಕ ರತ್ನ ಡಾ.ರಾಜ್ ಕುಮಾರ ಜನ್ಮದಿನದಂದು ಕರ್ನಾಟಕಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸೋಣ. ತಾಯಿ ಭುವನೇಶ್ವರಿಯ ಸೇವೆಗೆ ಕರೆ ಬಂದಾಗಲೆಲ್ಲ ಎದ್ದು ಬಂದ ಮಹಾನುಭಾವ ರಾಜಣ್ಣನವರು. ಮೂರು ತಲೆಮಾರಿನ ಕನ್ನಡಿಗರಿಗೆ ಮೌಲ್ಯ ತುಂಬಿದ ಮನರಂಜನೆ ನೀಡಿದ ಅವರನ್ನು ಆದರದಿಂದ ನೆನೆಯೋಣ" ಎಂದು ಹೇಳಿದ್ದಾರೆ.

  English summary
  CM Yediyurappa birthday wishes to Dr.Rajkumar. Dr.Rajkumar 91st birthday celebration at home amid corona lockdown.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X