ನಟಿ ಪ್ರತಿಮಾದೇವಿ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ

ಕನ್ನಡದ ಖ್ಯಾತ ಹಿರಿಯ ನಟಿ ಪ್ರತಿಮಾ ದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಂಗಭೂಮಿ ಮತ್ತು ಚಿತ್ರರಂಗದಲ್ಲಿ 4 ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಕನ್ನಡದ ಹಿರಿಯ ನಟಿ ಪ್ರತಿಮಾ ದೇವಿಯವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಸದ್ಗತಿಯನ್ನು, ಕುಟುಂಬದವರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

ಪ್ರತಿಮಾ ದೇವಿ ನಿಧನದಿಂದ ಕನ್ನಡ ಚಿತ್ರರಂಗ ಅಪ್ರತಿಮ ನಟಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದವರು ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

CM Yediyurappa Condolences to Prathima Devi Death

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಸಹ ನಟಿ ಪ್ರತಿಮಾ ದೇವಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 'ಪ್ರತಿಮಾದೇವಿ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಿರಿಯ ತಲೆಮಾರಿನ ಕೊಂಡಿಯೊಂದನ್ನು ಕಳೆದುಕೊಂಡಂತಾಗಿದೆ' ಎಂದು ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದ್ದಾರೆ.

CM Yediyurappa Condolences to Prathima Devi Death

ಪ್ರತಿಮಾ ದೇವಿ ಅವರು ಕನ್ನಡ ಚಿತ್ರರಂಗ ಕಂಡ ಅದ್ಭುತ ಕಲಾವಿದರಲ್ಲಿ ಒಬ್ಬರು. 60ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಪ್ರತಿಮಾದೇವಿ ಕನ್ನಡ ಚಿತ್ರರಂಗ ಕಂಡ ಅತ್ಯಂತ ಸುಂದರ ನಾಯಕಿಯರಲ್ಲಿ ಒಬ್ಬರಾಗಿದ್ದರು. ಜಗನ್ಮೋಹಿನಿ ಚಿತ್ರದ ಅವರ ಪಾತ್ರ ಅವಿಸ್ಮರಣೀಯವಾದದ್ದು. ಅವರು ತಮ್ಮ ಇಡೀ ಕುಟುಂಬವನ್ನೇ ಕಲಾ ಜಗತ್ತಿನ ಸೇವೆಗೆ ಮುಡುಪಿಟ್ಟವರು. ಮಹಾತ್ಮ ಪಿಚ್ಚರ್ಸ್ ಮೂಲಕ ಉತ್ತಮ ಹಾಗೂ ಸದಭಿರುಚಿಯ ಅನೇಕ ಚಿತ್ರಗಳನ್ನು ನಿರ್ಮಿಸಿದ್ದರು. ಚಿತ್ರರಂಗದ ಎಲ್ಲ ವಿಭಾಗಗಳಲ್ಲಿಯೂ ಕೆಲಸ ಮಾಡಿದ್ದರು. ಅವರ ಮಗ ರಾಜೇಂದ್ರ ಸಿಂಗ್ ಬಾಬು ಹಾಗೂ ಮಗಳು ವಿಜಯಲಕ್ಷ್ಮಿಸಿಂಗ್ ಆ ಕಲಾ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಅರವಿಂದ್ ಲಿಂಬಾವಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

88 ವರ್ಷದ ಪ್ರತಿಮಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಿಧನರಾಗಿದ್ದಾರೆ.

CM Yediyurappa Condolences to Prathima Devi Death

ಪ್ರತಿಮಾ ದೇವಿ ಅವರು 1947ರಲ್ಲಿ 'ಕೃಷ್ಣಲೀಲಾ' ಚಿತ್ರದಲ್ಲಿ ನಟಿಸುವ ಮೂಲಕ ವೃತ್ತಿ ಜೀವನ ಆರಂಭಿಸಿದರು. 1951ರಲ್ಲಿ ತೆರೆಕಂಡ 'ಜಗನ್ಮೋಹಿನಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಖ್ಯಾತಿ ಗಳಿಸಿಕೊಂಡರು. ಈ ಚಿತ್ರದಲ್ಲಿ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಶತದಿನ ಪೂರೈಸಿದ ಸಿನಿಮಾ ಎಂಬ ದಾಖಲೆ ಹೊಂದಿದೆ.

ಶ್ರೀ ಶ್ರೀನಿವಾಸ ಕಲ್ಯಾಣ, ಚಂಚಲ ಕುಮಾರಿ, ಮುಟ್ಟಿದ್ದೆಲ್ಲಾ ಚಿನ್ನ, ಶಿವಶರಣೇ ನಂಬಿಯಕ್ಕ, ಮಂಗಳ ಸೂತ್ರ, ಧರ್ಮಸ್ಥಳ ಮಹಾತ್ಮೆ, ಪಾತಳಾ ಮೋಹಿಣಿ, ನಾಗರಹಾವು, ರಾಮ ಶಾಮಾ ಭಾಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಪ್ರತಿಮಾ ದೇವಿ ನಟಿಸಿದ್ದಾರೆ.

More from Filmibeat

English summary
Karnataka chief minister BS Yediyurappa Condolences to senior actress Prathima Devi Death.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X