Don't Miss!
- Sports
Ind vs NZ 2nd T20I: 2ನೇ ಪಂದ್ಯದ ಸಂಭಾವ್ಯ ಆಡುವ ಬಳಗ, ಸಮಯ, ನೇರಪ್ರಸಾರದ ಮಾಹಿತಿ
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Lifestyle
ವೃತ್ತಿ ಬದುಕಿನಲ್ಲಿ ಯಸಸ್ಸು ಪಡೆಯಲು ಚಾಣಕ್ಯ ಹೇಳಿದ ಸಪ್ತ ಸೂತ್ರಗಳು
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಅಭಿನಯ ಶಾರದೆ' ನಿಧನಕ್ಕೆ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸಂತಾಪ
ಕನ್ನಡದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ನಿಧನಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿರುವ ಸಿಎಂ, ''ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದಿದ್ದಾರೆ. ಯಡಿಯೂರಪ್ಪ ಮಾತ್ರವಲ್ಲ, ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
'ಅಭಿನಯ ಶಾರದೆ' ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ.
ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ'' ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
''ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು.'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯಂತಿ ನಿಧನಕ್ಕೆ ಕಂಬನಿ ಮಿಡಿಸಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಜಯಂತಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ''ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ'' ಎಂದಿದ್ದಾರೆ.
Recommended Video

ಡಾ ಸುಧಾಕರ್ ಸಂತಾಪ
ಇನ್ನು ಆರೋಗ್ಯ ಸಚಿವ ಡಾ ಸುಧಾಕರ್ ಟ್ವೀಟ್ ಮಾಡಿ, ''ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು 'ಒನಕೆ ಓಬವ್ವ' ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಸಂತಾಪ ಸೂಚಿಸಿದ್ದಾರೆ.