ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ: ಸಿಎಂ ಯಡಿಯೂರಪ್ಪ

ರಾಜನ್ ನಾಗೇಂದ್ರ ಖ್ಯಾತಿಯ ಸಂಗೀತ ಸಂಯೋಜಕ ರಾಜನ್ ನಿನ್ನೆ (ಅಕ್ಟೋಬರ್ 12) ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರು. 85 ವರ್ಷದ ರಾಜನ್ ಅವರು ಅನೇಕ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ರಾಜನ್ ಮತ್ತು ನಾಗೇಂದ್ರ ಅವರು 1950 ರಿಂದ1990ರ ವರೆಗೂ ಮೆಲೋಡಿ ಕಿಂಗ್ ಎನಿಸಿಕೊಂಡಿದ್ದ ಖ್ಯಾತ ಸಂಗೀತ ಸಂಯೋಜಕರು. ಇವರಿಬ್ಬರು ಸುಮಾರು 375ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಜೋಡಿ ಕನ್ನಡದಲ್ಲಿಯೇ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.

ರಾಜನ್ ಅಗಲಿಕೆಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕರ್ನಾಟಕ ಸಿಎಂ ಯಡಿಯೂರಪ್ಪ ರಾಜನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

CM Yediyurappa Mourns Veteran Music Director Rajan Death

'ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ 'ರಾಜನ್‌-ನಾಗೇಂದ್ರ' ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ' ಎಂದಿದ್ದಾರೆ.

'ಚಿತ್ರರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ಶ್ರೀ ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ' ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ನಾಲ್ಕು ದಶಕಗಳ ತಮ್ಮ ವೃತ್ತಿ ಜೀವನದಲ್ಲಿ ರಾಜನ್-ನಾಗೇಂದ್ರ ಜೋಡಿ ಅಸಂಖ್ಯಾತ ಹಿಟ್ ಹಾಗೂ ನೂರಾರು ಸುಮಧುರ ಹಾಡುಗಳನ್ನು ರಚಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ, ತುಳು, ಹಿಂದಿ ಮತ್ತು ಸಿಂಹಳ ಭಾಷೆಗಳಲ್ಲಿ ಸಂಗೀತ ನೀಡಿದ್ದಾರೆ.

ಮೈಸೂರಿನ ಶಿವರಾಂಪೇಟೆಯ ಮಧ್ಯಮ ವರ್ಗದ ಸಂಗೀತ ಕುಟುಂಬದಲ್ಲಿ ರಾಜನ್ ಮತ್ತು ನಾಗೇಂದ್ರ ಜನಿಸಿದರು. ಅವರ ತಂದೆ ರಾಜಪ್ಪ ಹಾರ್ಮೋನಿಯಂ ಮತ್ತು ಕೊಳಲು ವಾದಕರಾಗಿದ್ದರು. ಮೂಕ ಚಲನಚಿತ್ರಗಳಿಗೆ ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದರು.

Recommended Video

ನಾನು ತುಂಬಾ ಸಿಂಪಲ್ ಅಂತ ಮತ್ತೆ ಪ್ರೂವ್ ಮಾಡಿದ Shivanna | Filmibeat Kannada

ನ್ಯಾಯವೇ ದೇವರು, ಗಂಧದ ಗುಡಿ, ದೇವರ ಗುಡಿ, ಭಾಗ್ಯವಂತರು, ಎರಡು ಕನಸು, ನಾ ನಿನ್ನಾ ಮರೆಯಲಾರೆ, ನಾ ನಿನ್ನ ಬಿಡಲಾರೆ, ಹೊಂಬಿಸಿಲು, ಬಯಲು ದಾರಿ, ಪಾವನಾ ಗಂಗಾ, ಗಿರಿ ಕನ್ಯೆ ಅಂತಹ ಚಿತ್ರಗಳಿಗೆ ರಾಜನ್-ನಾಗೇಂದ್ರ ಸಂಗೀತ ನೀಡಿದ್ದರು. ರಾಜನ್ ಸಹೋದರ, ನಾಗೇಂದ್ರ ಅವರು ನವೆಂಬರ್ 4, 2000 ಇಸವಿಯಲ್ಲಿ ನಿಧನರಾಗಿದ್ದಾರೆ.

More from Filmibeat

English summary
Veteran Music director Rajan passes away at the age of 85. CM Yediyurappa mourns to Music Director Rajan death.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X