Don't Miss!
- Sports
ಮುಂಬೈ ವಿರುದ್ಧ ಸೋಲು; ಪಂತ್ ನಾಯಕತ್ವದ ಬಗ್ಗೆ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದೇನು?
- News
ಯಶಸ್ವಿಯಾಗಿ ಪೂರ್ಣಗೊಂಡ ನೀಟ್ ಪಿಜಿ 2022 ಪರೀಕ್ಷೆ
- Education
CUET 2022 Registration : ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಇಂದು ಕೊನೆಯ ದಿನ
- Automobiles
ಕೆಟಿಎಂ ಡ್ಯೂಕ್ 390 ಪ್ರತಿಸ್ಪರ್ಧಿ 2022ರ ಕಿಮ್ಕೊ ಕೆ ರೈಡರ್ 400 ಬೈಕ್ ಅನಾವರಣ
- Finance
ಟಾಪ್ 10 ಕಂಪನಿಗಳ ಪೈಕಿ 5 ಕಂಪನಿ ಮೌಲ್ಯ 1.78 ಲಕ್ಷ ಕೋಟಿ ಏರಿಕೆ
- Lifestyle
ಮೇ 22ರಿಂದ ರಿಂದ ಮೇ 28ರ ವಾರ ಭವಿಷ್ಯ: ಈ ರಾಶಿಯ ಉದ್ಯೋಗಿಗಳು ಯಾವುದೇ ಕೆಲಸದಲ್ಲೂ ನಿರ್ಲಕ್ಷ್ಯ ಮಾಡಬೇಡಿ
- Technology
ಟ್ರೂಕಾಲರ್ ಮಾದರಿಯ ಹೊಸ ಕಾಲರ್ ಐಡಿ ಫೀಚರ್ಸ್ ಪರಿಚಯಿಸಲು ಟ್ರಾಯ್ ಸಿದ್ಧತೆ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಸ್ತೆಗೆ ಪುನೀತ್ ಹೆಸರು ಮರು ನಾಮಕರಣ, ತಿರುಗಿ ಬಿದ್ದ ಅಂಬರೀಶ್ ಫ್ಯಾನ್ಸ್!
ರಸ್ತೆಯೊಂದಕ್ಕೆ ಪುನೀತ್ ಹೆಸರಿಡುವುದಕ್ಕೆ ಅಂಬರೀಷ್ ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪುನೀತ್ ನಿಧನದ ಬಳಿಕ ಹಲವು ರಸ್ತೆಗಳಿಗೆ ಅವರ ಹೆಸರು ಇಡಲಾಗಿದೆ. ಎಷ್ಟೊ ಕಡೆ ಜನರೇ ಪುನೀತ್ ರಾಜ್ಕುಮಾರ್ ಅವರ ಹೆಸರಲ್ಲಿ ರಸ್ತೆಗಳ ಮಧ್ಯೆ ಬೋರ್ಡ್ ನೆಟ್ಟು ಬಿಟ್ಟಿದ್ದಾರೆ. ಇದರ ಜೊತೆಗೆ ನಾಯಂಡ ಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವಂತೆ ಅಪ್ಪು ಅಭಿಮಾನಿಗಳು ಮನವಿ ಸಲ್ಲಿಸಿದ್ದರು.
ಆದರೆ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳ ಮನವಿಗೆ ರೆಬೆಲ್ ಸ್ಟಾರ್ ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈಗಾಗಲೇ ಹಲವು ರಸ್ತೆಗಳಿಗೆ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಲಾಗಿದೆ. ಅದೇ ರೀತಿ 'ರೆಬೆಲ್ ಸ್ಟಾರ್' ಅಂಬರೀಷ್ ಅವರಿಗೂ ಇಂಥ ಗೌರವಗಳು ಸಲ್ಲಬೇಕು ಎಂದು ಅಂಬಿ ಫ್ಯಾನ್ಸ್ ಬೇಡಿಕೆ ಇಡುತ್ತಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಬಿಬಿಎಂಪಿ ಒಪ್ಪಿಗೆ ಸೂಚಿಸಿದೆ.
ಇತ್ತೀಚೆಗೆ ಈ ಬಗ್ಗೆ ಜಾಹೀರಾತು ನೀಡಿದ್ದ ಬಿಬಿಎಂಪಿ, ಈ ನಿರ್ಧಾರಕ್ಕೆ ಜನವರಿ 29ರ ಒಳಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದು ಹೇಳಿತ್ತು. ಈಗ ಇದಕ್ಕೆ ಅಂಬರೀಷ್ ಅಭಿಮಾನಿಗಳೇ ಆಕ್ಷೇಪಣೆ ಸಲ್ಲಿಕೆ ಮಾಡುತ್ತಿದ್ದಾರೆ. ಇದರಿಂದ ಅಪ್ಪು ಅಭಿಮಾನಿಗಳು ಹಾಗೂ ಅಂಬಿ ಅಭಿಮಾನಿಗಳ ನಡುವೆ ಕೋಲ್ಡ್ ವಾರ್ ಆರಂಭ ಆಗಿವೆ ಎನ್ನುವ ಪ್ರಶ್ನೆ ಮೂಡಿದೆ.
ಈ ಮೂಲಕ ಮತ್ತೇ ಫ್ಯಾನ್ ವಾರ್ ಹೊಗೆ ಆಡುತ್ತಿದೆ. ಇಬ್ಬರ ಅಭಿಮಾನಿಗಳು ಈಗ ತಮ್ಮ ನೆಚ್ಚನ ನಟರ ಹೆಸರನ್ನು ಈ ರಸ್ತೆಗೆ ಇಡಬೇಕು ಎನ್ನುವ ಬಗ್ಗೆ ಹೋರಾಟಕ್ಕಿಳಿದಿದ್ದಾರೆ. ಈಗ ಅಂಬಿ ಅಭಿಮಾನಿಗಳು ಆಕ್ಷೇಪ ಮಾಡಿರುವ ಕಾರಣಕ್ಕೆ, ಈ ರಸ್ತೆಗೆ ಪುನೀತ್ ರಾಜ್ಕುಮರ್ ಹೆಸರು ಇಡುವುದು ಅನುಮಾನ. ಆದರೆ ಅಪ್ಪು ಅಭಿಮಾನಿಗಳು ಮುಮದೆ ಯಾವ ಕ್ರಮಕ್ಕೆ ಮುಂದಾಗುತ್ತಾರೆ ಅಂತ ನೋಡಬೇಕು.
ಸದ್ಯ, ಈ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಸಂದರ್ಭದಲ್ಲೂ ಈ ವಿಚಾರ ದೊಡ್ಡ ಮಟ್ಟದಲ್ಲಿ ಸ್ಫೋಟಗೊಳ್ಳಬಹುದು. ಈ ಬಗ್ಗೆ ಅಂಬರೀಷ್ ಪತ್ನಿ, ಸಂಸದೆ, ಸುಮಲತಾ ಅಂಬರೀಷ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.