»   » ಜೇನ್ನೊಣ ಕಚ್ಚಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ 2 ಲಕ್ಷ ಪರಿಹಾರ

ಜೇನ್ನೊಣ ಕಚ್ಚಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ 2 ಲಕ್ಷ ಪರಿಹಾರ

Posted By: Super
Subscribe to Filmibeat Kannada

ಬೆಂಗಳೂರು : ಚನ್ನಪಟ್ಟಣ ಪೊಲೀಸ್‌ ತರಬೇತಿ ಶಾಲೆಯಲ್ಲಿ ಹುಚ್ಚ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ಜೇನ್ನೊಣ ಕಚ್ಚಿ ಸಾವನ್ನಪ್ಪಿದ್ದ ಸಹಾಯಕ ಕ್ಯಾಮರಾಮನ್‌ ಕುಂದಾಪುರದ ಕರುಣಾಕರ ಶೆಟ್ಟಿ ಅವರ ಕುಟುಂಬಕ್ಕೆ ಮೇ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ 2 ಲಕ್ಷ ರುಪಾಯಿಗಳ ಪರಿಹಾರದ ಚೆಕ್‌ ನೀಡಲಾಯಿತು.

ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರನಟ ಶಿವರಾಜ್‌ ಕುಮಾರ್‌ ಈ ಪರಿಹಾರದ ಚೆಕ್‌ ನೀಡಿದರು. ಇದಕ್ಕೂ ಮುನ್ನ ಶಿವರಾಜ್‌ಕುಮಾರ್‌ ಕನ್ನಡ ಬಾವುಟ ಹಾರಿಸುವ ಮೂಲಕ ಮೇ ದಿನಾಚರಣೆಯನ್ನು ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷ ಹಾಗೂ ಚಿತ್ರನಟ ಅಶೋಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

English summary
2 lakhs compensation given to the deceased cameraman

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada