For Quick Alerts
  ALLOW NOTIFICATIONS  
  For Daily Alerts

  'ಕೋಲುಮಂಡೆ' ಹಾಡಿನ ವಿವಾದ: ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲು

  |

  ಕನ್ನಡ Rapper ಚಂದನ್ ಶೆಟ್ಟಿ ಅವರು ಕೋಲುಮಂಡೆ ಹಾಡಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಾದೇಶ್ವರನ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಚಂದನ್ ಶೆಟ್ಟಿ ವಿರುದ್ಧ ದೂರು ಸಹ ದಾಖಲಾಗಿದೆ.

  ಮಲೇಷಿಯಾದಲ್ಲಿ Brahma ಚಿತ್ರದ ರೊಮ್ಯಾಂಟಿಕ್ ಹಾಡು ತಯಾರಾಗಿದ್ದು ಹೀಗೆ | Romantic Scenes | Filmibeat Kannada

  ಚಂದನ್ ಶೆಟ್ಟಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೇಜಸ್ ಎಂಬುವರು ದೂರು ನೀಡಿದ್ದಾರೆ. ಗಾಯಕನ ವಿರುದ್ಧ ಎನ್‌ಸಿಆರ್ ದಾಖಲು ಮಾಡಿರುವ ಪೊಲೀಸರು, ಪ್ರಕರಣ ಸಂಬಂಧ ವಿವರಣೆ ನಡೆಸುತ್ತಿದ್ದಾರೆ.

  ವಿವಾದಕ್ಕೆ ಕಿಡಿ ಹಚ್ಚಿದ 'ಕೋಲುಮಂಡೆ': ಚಂದನ್ ಶೆಟ್ಟಿ ವಿರುದ್ಧ ಸಿಡಿದೆದ್ದ ಮಹದೇಶ್ವರನ ಭಕ್ತರು

  ಚಂದನ್ ಶೆಟ್ಟಿ 'ಕೋಲುಮಂಡೆ ಜಂಗಮದೇವ ಎಂಬ ಜಾನಪದ ಹಾಡನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ, ಇತಿಹಾಸ ತಿರುಚಿ ಚಿತ್ರಿಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಆ ಮೂಲಕ ಶರಣೆ ಸಂಕಮ್ಮರನ್ನು ಅವಮಾನಿಸಲಾಗಿದೆ' ಎಂದು ಚಂದನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

  ಚಂದನ್ ಶೆಟ್ಟಿ ಹಾಡಿರುವ ಕೋಲುಮಂಡೆ ಹಾಡನ್ನು ಯೂಟ್ಯೂಬ್ ಸೇರಿದಂತೆ ಎಲ್ಲ ಕಡೆಯೂ ತೆಗೆಯಬೇಕು. ಇಲ್ಲವಾದಲ್ಲಿ ಚಂದನ್ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಅವರ ಕಾರ್ಯಕ್ರಮ ಬಹಿಷ್ಕರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

  ವಿವಾದ ದೊಡ್ಡದಾಗುತ್ತಿದ್ದಂತೆ ಚಂದನ್ ಶೆಟ್ಟಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿದೆ. ಆದರೆ ಇವತ್ತು (ಆಗಸ್ಟ್ 26) ಚಂದನ್ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರೊಬ್ಬರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

  English summary
  Complaint Against Kannada Rapper Chandan Shetty for hurting religious sentiments in Kolumande song.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X