ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲು

ನಟ, ನಿರ್ಮಾಪಕ, ನಿರ್ದೇಶಕ ರಕ್ಷಿತ್ ಶೆಟ್ಟಿ ವಿರುದ್ಧ ಕಾಪಿ ರೈಟ್ಸ್ ಆರೋಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ 'ಗಾಳಿಮಾತು' ಹಾಗೂ 'ನ್ಯಾಯ ಎಲ್ಲಿದೆ' ಎಂಬ ಹಾಡುಗಳನ್ನು ಅನುಮತಿ ಇಲ್ಲದೇ ಕದ್ದಿರುವ ಆರೋಪ ಕೇಳಿಬಂದಿದೆ.

ಈ ಹಿಂದೆ 'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ಇದೇ ರೀತಿಯ ಕಾಪಿ ರೈಟ್ಸ್ ಸಮಸ್ಯೆ ಎದುರಾಗಿತ್ತು. 'ಶಾಂತಿ ಕ್ರಾಂತಿ' ಚಿತ್ರದ ಟ್ಯೂನ್ ಬಳಸಿಕೊಂಡಿದ್ದಕ್ಕೆ ಲಹರಿ ವೇಲು ಕೋರ್ಟ್ ಮೆಟ್ಟಿಲೇರಿದ್ದರು. ವಿವಾದ ಭಾರೀ ಸದ್ದು ಮಾಡಿತ್ತು. ಕೊನೆಗೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿತ್ತು. ಇದೀಗ 'ಬ್ಯಾಚುಲರ್ ಪಾರ್ಟಿ' ಸಿನಿಮಾ ವಿಚಾರದಲ್ಲಿ ರಕ್ಷಿತ್ ಶೆಟ್ಟಿಗೆ ಇದೇ ಸಂಕಷ್ಟ ಎದುರಾಗಿದೆ.

Complaint against Rakshit shetty for using song without permission in Bachelor Party

ಅಭಿಜಿತ್ ಮಹೇಶ್ ನಿರ್ದೇಶನದ ಕಾಮಿಡಿ ಎಂಟರ್‌ಟೈನರ್ 'ಬ್ಯಾಚುಲರ್ ಪಾರ್ಟಿ' ಇದೇ ವರ್ಷ ಜನವರಿ 26ಕ್ಕೆ ತೆರಕಂಡಿತ್ತು. ದಿಗಂತ್, ಅಚ್ಯುತ್‌ ಕುಮಾರ್ ಹಾಗೂ ಲೂಸ್ ಮಾದ ಯೋಗಿ ಚಿತ್ರದಲ್ಲಿ ತಾರಾಗಣದಲ್ಲಿದ್ದರು. ಚಿತ್ರಕ್ಕೆ ಅರ್ಜುನ್ ರಾಮು ಸಂಗೀತ ಸಂಯೋಜನೆ ಮಾಡಿದ್ದರು. ರಕ್ಷಿತ್ ಶೆಟ್ಟಿ ತಮ್ಮ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಿಸಿದ್ದರು.

ಕಾಪಿರೈಟ್ ಉಲ್ಲಂಘನೆ ಆರೋಪದಡಿ ರಕ್ಷಿತ್ ಶೆಟ್ಟಿ ಹಾಗೂ ಪರಂವಃ ಸ್ಟುಡಿಯೋಸ್ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರು ಆಧರಿಸಿ ಈಗಾಗಲೇ ಪೊಲೀಸರು ಎಫ್‌ಐಆರ್ ಹಾಕಿದ್ದಾರೆ. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ಇದೀಗ ಕಾನೂನು ಹೋರಾಟ ನಡೆಸುತ್ತಿದ್ದಾರೆ. 'ಗಾಳಿ ಮಾತು' ಚಿತ್ರದ ಒಮ್ಮೆ 'ನಿನ್ನನ್ನು ಕಣ್ತುಂಬ' ಹಾಗೂ 'ನ್ಯಾಯ ಎಲ್ಲಿದೆ' ಚಿತ್ರದ ಟೈಟಲ್ ಸಾಂಗ್ ಬಳಸಿಕೊಂಡಿರುವ ಬಗ್ಗೆ ಚಕಾರ ಎತ್ತಿದ್ದಾರೆ.

'ಬ್ಯಾಚುಲರ್ ಪಾರ್ಟಿ' ಸಿನಿಮಾ ಚಿತ್ರಮಂದಿರಗಳಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಬಳಿಕ ಅಮೇಜಾನ್ ಪ್ರೈಂ ವೀಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಇತ್ತೀಚೆಗೆ ನವೀನ್ ಕುಮಾರ್ ಪ್ರೈಂ ವೀಡಿಯೋದಲ್ಲಿ ಸಿನಿಮಾ ವೀಕ್ಷಿಸಿದಾಗ ತಮ್ಮ ಅನುಮತಿ ಇಲ್ಲದೇ ಚಿತ್ರತಂಡ ಹಾಡುಗಳನ್ನು ಬಳಸಿಕೊಂಡಿರುವುದು ಗೊತ್ತಾಗಿದೆ. ಹಾಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ರೀತಿ ಹಾಡುಗಳನ್ನು ಬಳಸಿಕೊಳ್ಳುವ ಸಂಬಂಧ ಈ ಹಿಂದೆ ನವೀನ್ ಕುಮಾರ್ ಜೊತೆ ಚಿತ್ರತಂಡ ಮಾತುಕತೆ ನಡೆಸಿತ್ತು. ಆದರೆ ಕಾರಣಾಂತರಗಳಿಂದ ಆ ಮಾತುಕತೆ ಮುರಿದು ಬಿದ್ದಿತ್ತು. ಬಳಿಕ ಸದ್ದಿಲ್ಲದೇ ಚಿತ್ರದಲ್ಲಿ ಅದೇ ಹಾಡುಗಳನ್ನು ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ. ಪ್ರೈಂ ವೀಡಿಯೋದಲ್ಲಿ ನವೀನ್ ಕುಮಾರ್ ಇಡೀ ಸಿನಿಮಾ ನೋಡಿದಾಗಲೇ ಅದು ಅವರ ಗಮನಕ್ಕೆ ಬಂದಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

More from Filmibeat

English summary
Police complaint lodged against Rakshit shetty song from the Bachelor Party.
Read more about: rakshit shetty case sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X