Just In
Don't Miss!
- Automobiles
ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು
- News
ಗಡಿ ವಿವಾದ; ಮತ್ತೊಂದು ಆಗ್ರಹ ಮುಂದಿಟ್ಟ ಮಹಾರಾಷ್ಟ್ರ ಸಿಎಂ
- Lifestyle
ಕಾಂತಿಯುತ ತ್ವಚೆಗಾಗಿ ಬಾಳೆಹಣ್ಣಿನ ವಿವಿಧ ಫೇಸ್ ಮಾಸ್ಕ್ ಗಳು
- Sports
ಟೀಮ್ ಇಂಡಿಯಾ vs ಇಂಗ್ಲೆಂಡ್: ಚೆನ್ನೈಗೆ ಬಂದಿಳಿದ ಜೋ ರೂಟ್ ಪಡೆ
- Finance
900ಕ್ಕೂ ಹೆಚ್ಚು ಪಾಯಿಂಟ್ ಕುಸಿದ ಸೆನ್ಸೆಕ್ಸ್; 13,967 ಪಾಯಿಂಟ್ ನಲ್ಲಿ ನಿಫ್ಟಿ ದಿನಾಂತ್ಯ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂಜನಾ ಗಲ್ರಾನಿಗೆ ಬಲವಂತದ ಮತಾಂತರ: ಮೌಲ್ವಿ ವಿರುದ್ಧ ದೂರು
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಹಿಂದಷ್ಟೆ ಷರತ್ತು ಬದ್ಧ ಜಾಮೀನು ದೊರೆತಿದೆ.
ನಟಿ ಸಂಜನಾ ರ ಬಂಧನವಾದಾಗ ಅವರ ಬಗ್ಗೆ ಹಲವಾರು ಸುದ್ದಿಗಳು ಹರಿದಾಡಿದವು, ಅದರಲ್ಲಿ ಒಂದೆಂದರೆ, ಸಂಜನಾ ಹಿಂದು ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂಬುದು. ಇದಕ್ಕೆ ಸಂಬಂಧಿಸಿದಂತೆ ದಾಖಲೆಯೊಂದನ್ನು ಪ್ರಶಾಂತ್ ಸಂಬರ್ಗಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.
ಇದೀಗ, ವಕೀಲರೊಬ್ಬರು, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂಜನಾ ರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ರ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸಂಜನಾರ ಕುಟುಂಬದವರು ಹೇಳಿರುವಂತೆ, ಸಂಜನಾ-ಅಜೀಜ್‌ಗೆ ನಿಶ್ಚಿತಾರ್ಥವಷ್ಟೆ ಆಗಿದೆ, ಇನ್ನೂ ಮದುವೆ ಆಗಿಲ್ಲ.