ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು.!
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸುದ್ದಿ ಮಾಡಿದ 'ದಿ ವಿಲನ್' ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದಾರೆ.
'ದಿ ವಿಲನ್' ಚಿತ್ರದಲ್ಲಿರುವ ದೃಶ್ಯವೊಂದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ನಾಗೇಶ್ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ್ದಾರೆ.

'ದಿ ವಿಲನ್' ಚಿತ್ರದ ದೃಶ್ಯವೊಂದರಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆ ಸುತ್ತುಕೊಂಡಿರುತ್ತಾರೆ. ಇದು ಕನ್ನಡ ಬಾವುಟಕ್ಕೆ ಮಾಡಿರುವ ಅವಮಾನ ಎಂದು ಆರೋಪಿಸಿ ಸುದೀಪ್ ಮತ್ತು ಪ್ರೇಮ್ ವಿರುದ್ಧ ನಾಗೇಶ್ ಕಂಪ್ಲೇಂಟ್ ಮಾಡಿದ್ದಾರೆ.
ಈ ಬಗ್ಗೆ ಪ್ರೇಮ್ ಮತ್ತು ಸುದೀಪ್ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಆಗ್ರಹಿಸಿದ್ದಾರೆ. ಒಂದು ವೇಳೆ ಕ್ಷಮೆ ಕೇಳದೇ ಇದ್ದರೆ, ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲ್ಲ ಅಂತ ತಿಳಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ 'ದಿ ವಿಲನ್' ಸಿನಿಮಾ ಅಕ್ಟೋಬರ್ 18 ರಂದು ದಸರಾ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿತ್ತು. ಅಂದಿನಿಂದ ಒಂದಲ್ಲಾ ಒಂದು ವಿವಾದದಿಂದ 'ದಿ ವಿಲನ್' ಸದ್ದು ಮಾಡುತ್ತಿದೆ.


Click it and Unblock the Notifications











