»   » ಕಾವೇರಿ ಹೋರಾಟಕ್ಕೆ ಧುಮುಕಿದ ಕ್ರೇಜಿಸ್ಟಾರ್

ಕಾವೇರಿ ಹೋರಾಟಕ್ಕೆ ಧುಮುಕಿದ ಕ್ರೇಜಿಸ್ಟಾರ್

Posted By:
Subscribe to Filmibeat Kannada
Crazy Star Ravichandran
ತಮಿಳುನಾಡಿಗೆ ಪ್ರತಿನಿತ್ಯ 9,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂಬ ಕಾವೇರಿ ನದಿ ಪ್ರಾಧಿಕಾರ ಸೂಚನೆಯನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾವೇರಿ ನೀರಿನ ವಿವಾದ ಭುಗಿಲೆದ್ದಿದೆ.

ಕನ್ನಡ ಚಿತ್ರೋದ್ಯಮ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದೆ. ಅಕ್ಟೋಬರ್ 6ರಂದು ಕನ್ನಡ ಚಿತ್ರೋದ್ಯಮ ಬಂದ್ ಗೆ ಕರೆನೀಡಿದೆ. (ಸಂಪೂರ್ಣ ವರದಿ ಓದಿ)

ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಕಾವೇರಿ ಹೋರಾಟಕ್ಕೆ ಧುಮುಕಿದ್ದಾರೆ. ನಮಗೇ ಕುಡಿಯಲು ನೀರಿಲ್ಲ. ಇನ್ನು ತಮಿಳುನಾಡಿಗೆ ಬಿಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಮೊದಲು ನಮಗೆ ನೀರು ಬೇಕು. ಆಮೇಲೆ ಬೇರೆಯವರ ಬಗ್ಗೆ ವಿಚಾರ ಮಾಡೋಣ ಎಂದಿದ್ದಾರೆ. ಕಾವೇರಿ ಹೋರಾಟದಲ್ಲಿ ತಾವು ಸಕ್ರಿಯವಾಗಿ ಭಾಗವಹಿಸಲಿದ್ದು ಕನ್ನಡ ಚಿತ್ರೋದ್ಯಮದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.

ಅವರು ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡುತ್ತಾ, ತಮಗೆ ರಾಜಕೀಯ ಗೊತ್ತಿಲ್ಲ ಎಂದರು.

ಕನ್ನಡ ಚಿತ್ರೋದ್ಯಮ ಹಾಗೂ ಕನ್ನಡಿಗರಿಗೆ ಅನ್ಯಾಯವಾದಾಗಲೆಲ್ಲಾ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಬೀದಿಗಿಳಿದು ಪ್ರತಿಭಟಿಸುತ್ತಿರುವುದು ಗೊತ್ತೇ ಇದೆ. (ಒನ್ಇಂಡಿಯಾ ಕನ್ನಡ)

English summary
Kannada films Dream Marchant Crazy Star Ravichandran supports ongoing agitation against the centre’s directive to State to release 9,000 cusec of water to Tamil Nadu. The actor also gives his full support to Karnataka Bandh on 6th October, call given by various organisations including KFCC.
Please Wait while comments are loading...