'ಟಾಕ್ಸಿಕ್' ಸೆಟ್ಟಿಗೆ ತೆರಳಿ ಯಶ್‌ಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ಡಾಲಿ

ಇದೇ ತಿಂಗಳು ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆಯಲ್ಲಿ ತಯಾರಿಯಲ್ಲಿ ಇರುವ ಡಾಲಿ ಧನಂಜಯ್ ಚಿತ್ರರಂಗದ ಸೆಲೆಬ್ರಿಟಿಗಳು ಇರುವಲ್ಲಿಗೆ ತೆರಳಿ ಮದುವೆಗೆ ಆಹ್ವಾನ ಪತ್ರಿಕೆಯನ್ನು ನೀಡುತ್ತಿದ್ದಾರೆ. ಕಳೆದ ಸಾಕಷ್ಟು ದಿನಗಳಿಂದ ವೆಡ್ಡಿಂಗ್ ಇನ್ವಿಟೇಷನ್ ಹಂಚುವ ಪ್ರಕ್ರಿಯೆಯಲ್ಲಿಯೇ ಇದ್ದಾರೆ. ಈಗ ರಾಕಿ ಭಾಯ್‌ಗೂ ಆಹ್ವಾನ ಪತ್ರಿಕೆಯನ್ನು ನೀಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈ ಹಾಗೂ ಗೋವಾ ಶೂಟಿಂಗ್ ಮುಗಿಸಿದ ಬಳಿಕ 'ಟಾಕ್ಸಿಕ್' ಟೀಮ್ ಬೆಂಗಳೂರಿಗೆ ಶಿಫ್ಟ್ ಆಗಿದೆ. ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬಿರುಸಿನಿಂದ 'ಟಾಕ್ಸಿಕ್' ಶೂಟಿಂಗ್ ನಡೆಯುತ್ತಿದೆ. ಹೀಗಾಗಿ ಡಾಲಿ ಧನಂಜಯ್ ಶೂಟಿಂಗ್ ಸೆಟ್ಟಿಗೆ ತೆರಳಿ ಅಲ್ಲಿ ರಾಕಿ ಭಾಯ್‌ಗೆ ಆಮಂತ್ರಣವನ್ನು ನೀಡಿ ಬಂದಿದ್ದಾರೆ.

Daali Dhananjay gave wedding invitation to Yash in Toxic set in Bengaluru

ಡಾಲಿ ಧನಂಜಯ್ ತಮ್ಮ ಮದುವೆಗೆ ಯಶ್‌ಗೆ ಆಮಂತ್ರಣ ಪತ್ರಿಕೆ ನೀಡಿದ ಫೋಟೊಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಧನಂಜಯ್ ಮದುವೆ ಆಮಂತ್ರಣ ಪತ್ರಿಕೆಯನ್ನು ಹಿಡಿದು ರಾಕಿಂಗ್ ಸ್ಟಾರ್ ಯಶ್ ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಇಬ್ಬರ ಅಭಿಮಾನಿಗಳು ಈ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿದ್ದಾರೆ.

ಡಾಲಿ ಧನಂಜಯ್ ಈಗಾಗಲೇ ಕನ್ನಡ ಚಿತ್ರರಂಗದ ನಟ,ನಟಿಯರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಸೇರಿದಂತೆ ಎಲ್ಲರಿಗೂ ಆಮಂತ್ರಣ ಪತ್ರಿಕೆಯನ್ನು ನೀಡುತ್ತಾ ಬಂದಿದ್ದಾರೆ. ಶಿವರಾಜ್‌ಕುಮಾರ್, ಕಿಚ್ಚ ಸುದೀಪ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ಕ್ರೇಜಿಸ್ಟಾರ್ ರವಿಚಂದ್ರನ್, ನವರಸ ನಾಯಕ ಜಗ್ಗೇಶ್, ದುನಿಯಾ ವಿಜಯ್, ರಮೇಶ್ ಅರವಿಂದ್, ಮೋಹಕತಾರೆ ರಮ್ಯಾ, ಸಪ್ತಮಿ ಗೌಡ, ನಿಖಿಲ್ ಕುಮಾರ್, ರಾಕ್‌ಲೈನ್ ವೆಂಕಟೇಶ್, ನೆನಪಿರಲಿ ಪ್ರೇಮ್, ಅಮೂಲ್ಯ ದಂಪತಿ, ಸೇರಿದಂತೆ ಬಹುತೇಕ ಮಂದಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಅನ್ನು ಭೇಟಿ ಮಾಡಿ ಮದುವೆಯ ಕರೆಯೋಲೆ ನೀಡಿದ್ದಾರೆ.

ಇನ್ನು ಡಾಲಿ ಧನಂಜಯ್ ಧನ್ಯತಾ ಅವರನ್ನು ವಿವಾಹವಾಗುತ್ತಿದ್ದಾರೆ. 2025, ಫೆಬ್ರವರಿ 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಇಲ್ಲಿನ ಅಂಬಾವಿಲಾಸ ಅರಮನೆಯ ಮುಂಭಾಗವಿರುವ ವಸ್ತು ಪ್ರದರ್ಶನ ಮೈದಾನದಲ್ಲಿ ವಿವಾಹ ಜರುಗಲಿದೆ. ಫೆಬ್ರವರಿ 15ರಂದು ಆರತಕ್ಷತೆ ನಡೆದರೆ, ಇನ್ನು ಫೆಬ್ರವರಿ 16ರಂದು ವಿವಾಹ ನಡೆಯಲಿದೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ವಿವಾಹದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಅಂದ್ಹಾಗೆ ಡಾಲಿ ಧನಂಜಯ್ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ವೃತ್ತಿಯಲ್ಲಿ ವೈದ್ಯೆಯಾಗಿರುವ ಧನ್ಯತಾ ಅವರನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಇಬ್ಬರೂ ಎರಡೂ ಮನೆಯವರನ್ನು ಒಪ್ಪಿಸಿ ವಿವಾಹವಾಗುತ್ತಿದ್ದಾರೆ. ತಮ್ಮ ಭಾವಿ ಪತ್ನಿಯನ್ನು ತಮ್ಮ ಅಭಿಮಾನಿಗಳಿಗೆ ವಿಭಿನ್ನವಾಗಿ ವಿಡಿಯೋ ಮೂಲಕ ಪರಿಚಯಿಸಿದ್ದರು. ಆಹ್ವಾನ ಪತ್ರಿಕೆ ಹಂಚುವುದರ ಜೊತೆಗೆ ಮದುವೆ ತಯಾರಿಯಲ್ಲಿಯೂ ಧನಂಜಯ್ ಬ್ಯುಸಿಯಾಗಿದ್ದಾರೆ.

ಡಾಲಿ ಧನಂಜಯ್ ಭಾವಿ ಪತ್ನಿ ಧನ್ಯತಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತ ಧನಂಜಯ್ ಇಂಜಿನಿಯರಿಂಗ್ ಶಿಕ್ಷಣ ಪಡೆದಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ಧನ್ಯತಾ ಅವರ ಮೂಲತ: ಚಿತ್ರದುರ್ಗದವರು. ಆದರೆ, ಬೆಳೆದಿದ್ದು ಅರಸಿಕೆರೆಯಲ್ಲಿ. ಧನಂಜಯ್ ಹಾಗೂ ಧನ್ಯತಾ ಇಬ್ಬರೂ ಮೈಸೂರಿನಲ್ಲಿಯೇ ಶಿಕ್ಷಣ ಪಡೆದಿದ್ದರು. ಹಲವು ದಿನಗಳಿಂದ ಪರಿಚಯವಿದ್ದರೂ ಇನ್‌ಸ್ಟಾಗ್ರಾಂ ಮೂಲಕ ಈ ಸಂಬಂಧ ಮತ್ತಷ್ಟು ಗಾಢವಾಗಿದೆ ಎನ್ನುತ್ತವೆ ಆಪ್ತಮೂಲಗಳು. ಒಬ್ಬರನ್ನೊಬ್ಬರು ಪ್ರೀತಿಸಿ, ಕೊನೆಯಲ್ಲಿ ಮನೆಯವರನ್ನು ಒಪ್ಪಿಸಿ ಅದ್ದೂರಿಯಾಗಿ ಇಬ್ಬರೂ ಈಗ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ.

More from Filmibeat

English summary
Daali Dhananjay gave wedding invitation to Yash in Toxic set in Bengaluru;
Read more about: dhananjay yash wedding
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X