For Quick Alerts
  ALLOW NOTIFICATIONS  
  For Daily Alerts

  'ಟಗರು ಪಲ್ಯ'ದಲ್ಲಿ ನಟಿಸಲಿದ್ದಾರೆ ನಟ ನಾಗಭೂಷಣ್

  |

  ಟಗರು ಸಿನಿಮಾದ ಡಾಲಿ ಪಾತ್ರದ ಮೂಲಕ ಸ್ಟಾರ್ ಆದ ಧನಂಜಯ್ ಬೇಡಿಕೆಯ ನಟನಾಗಿದ್ದು ಕನ್ನಡ ಮಾತ್ರವಲ್ಲದೆ ತೆಲುಗು ಹಾಗೂ ತಮಿಳು ಚಿತ್ರರಂಗವನ್ನೂ ಪ್ರವೇಶಿಸಿದ್ದಾರೆ. ಈ ಕೇವಲ ನಟನಾಗಿ ಮಾತ್ರ ಉಳಿಯದ ಧನಂಜಯ್ ನಿರ್ಮಾಪಕನಾಗಿಯೂ ಕೆಲಸ ಆರಂಭಿಸಿದ್ದಾರೆ. ಡಾಲಿ ಪಿಕ್ಚರ್ಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ ಧನಂಜಯ್ ಮೊದಲಿಗೆ ತಾನೇ ಅಭಿನಯಿಸಿದ 'ಬಡವ ರಾಸ್ಕಲ್' ಹಾಗೂ 'ಹೆಡ್ ಬುಶ್' ಚಿತ್ರಗಳಿಗೆ ಬಂಡವಾಳ ಹೂಡಿದ್ದರು. ಬಳಿಕ ಇತ್ತೀಚೆಗಷ್ಟೇ ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ 'ಟಗರು ಪಲ್ಯ'ವನ್ನು ಘೋಷಿಸಲಾಗಿತ್ತು. ಮೋಷನ್ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ 'ಟಗರು ಪಲ್ಯ' ಇದೀಗ ಸೆಟ್ಟೇರೋಕೆ ಸಿದ್ಧವಾಗಿದೆ.

  ಸಿದ್ದರಾಮಯ್ಯ ಟ್ವೀಟ್‌ನಲ್ಲಿ 'ಕಾಂತಾರ', 'ಕೆಜಿಎಫ್'! ಹೊಂಬಾಳೆಗೆ ಎಚ್ಚರಿಕೆ ಕೊಟ್ಟ ಟಗರು!ಸಿದ್ದರಾಮಯ್ಯ ಟ್ವೀಟ್‌ನಲ್ಲಿ 'ಕಾಂತಾರ', 'ಕೆಜಿಎಫ್'! ಹೊಂಬಾಳೆಗೆ ಎಚ್ಚರಿಕೆ ಕೊಟ್ಟ ಟಗರು!

  'ಟಗರು ಪಲ್ಯ' ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಇವರ ಮೇಲೆ ನಿರೀಕ್ಷೆಯೂ ಇದೆ. 'ಟಗರು ಪಲ್ಯ' ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

  ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ 'ಟಗರು ಪಲ್ಯ'ಕ್ಕಿದೆ. ಚಿತ್ರಕ್ಕೆ ನಾಯಕಿ ಯಾರೆಂಬುದು ಸದ್ಯದಲೇ ರಿವೀಲ್ ಆಗಲಿದ್ದು, ರಂಗಾಯಣ ರಘು,ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

  English summary
  Daali pictures third film Tagaru Palya's shooting starts from December.Read on
  Wednesday, November 23, 2022, 20:12
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X