For Quick Alerts
  ALLOW NOTIFICATIONS  
  For Daily Alerts

  ಯುವ ದಸರಾ ಉದ್ಘಾಟನೆ: ಮಿಂಚು ಹರಿಸಿದ ಡಾಲಿ ಧನಂಜಯ್

  |

  ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಗಿಜಿಗುಡುವ ಯುವ ಸಮೂಹದ ಜೋಶ್ ನಡುವೆ ಶ್ವೇತ ವರ್ಣದ ಪಂಚೆ, ಷರ್ಟ್‌ನಲ್ಲಿ ಆಗಮಿಸಿದ್ದ ಚಲನಚಿತ್ರ ನಟ ಡಾಲಿ ಧನಂಜಯ್ ಳ್ಳು ಬಾರಿಸುವ ಮೂಲಕ 9 ದಿನಗಳ ಸಾಂಸ್ಕೃತಿಕ ಜಾತ್ರೆ ಯುವ ಸಂಭ್ರಮಕ್ಕೆ ಶುಕ್ರವಾರ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸಹ ಇದ್ದರು.

  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಯುವ ಸಮುದಾಯವನ್ನು ಗುರಿಯಾಗಿರಿಸಿ ಮಾಡಲಾಗುವ ಈ ಕಾರ್ಯಕ್ರಮಕ್ಕೆ ಅದ್ಧೂರಿ ಆರಂಭ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿ, ಸುಮಾರು 152 ಕಾಲೇಜಿನ ವಿದ್ಯಾರ್ಥಿಗಳು ಹಲವು ದಿನಗಳ ಕಾಲ ನಾನಾ ನೃತ್ಯಗಳನ್ನು ಅಭ್ಯಾಸ ಮಾಡಿ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಮುಂದೆ ಪ್ರದರ್ಶನ ನೀಡುತ್ತಿದ್ದಾರೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದವರು ಯುವ ದಸರಾದಂತಹ ಇನ್ನೂ ದೊಡ್ಡ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲಿದ್ದಾರೆ. ದಸರಾ ನೆಪದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ಕಲಾ ಜೀವನ ಕಟ್ಟಿಕೊಳ್ಳಲು ಉತ್ತಮ ವೇದಿಕೆ ದೊರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

  ಪ್ರತಿದಿನ ಇಂಥಹಾ ಹಬ್ಬಗಳು ನಡೆಯಲಿ: ಡಾಲಿ

  ಪ್ರತಿದಿನ ಇಂಥಹಾ ಹಬ್ಬಗಳು ನಡೆಯಲಿ: ಡಾಲಿ

  ಕಾರ್ಯಕ್ರಮದ ಕೇಂದ್ರ ಬಿಂದುವಾದ ಡಾಲಿ ಧನಂಜಯ್, ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೆ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.

  ಹಳೆಯ ನೆನಪುಗಳಿಗೆ ಜಾರಿದ ಡಾಲಿ

  ಹಳೆಯ ನೆನಪುಗಳಿಗೆ ಜಾರಿದ ಡಾಲಿ

  ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

  ಡೈಲಾಗ್ ಹೇಳಿ ರಂಜಿಸಿದ ಡಾಲಿ

  ಡೈಲಾಗ್ ಹೇಳಿ ರಂಜಿಸಿದ ಡಾಲಿ

  ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ 'ಟಗರು', 'ಬಡವ ರಾಸ್ಕಲ್', 'ಮಾನ್ಸೂನ್ ರಾಗ' ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.

  ಹಲವು ಪ್ರಮುಖರು ಹಾಜರಿದ್ದರು

  ಹಲವು ಪ್ರಮುಖರು ಹಾಜರಿದ್ದರು

  ದಸರಾ ವಿಶೇಷ ಸಂಸ್ಕೃತಿಯಾಗಿಯೇ ಬೆಳೆದು ಬಂದಿರುವ ಯುವ ಸಂಭ್ರಮದ ಪ್ರಾರಂಭೋತ್ಸವಕ್ಕೆ ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್, ಮೈಲ್ಯಾಕ್ ಅಧ್ಯಕ್ಷ ಆರ್. ರಘು, ಉಪ ಮೇಯರ್ ಜಿ.ರೂಪಾ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹದೇವಯ್ಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯ ರಮೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಯುವ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಕೈಜೋಡಿಸಿದರು.

  English summary
  Actor Dali Dhananjay, In charge minister ST Somashekhar inaugurated Yuva Dasara in Mysore on September 16.
  Saturday, September 17, 2022, 11:19
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X