Just In
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಾರ್ಲಿಂಗ್ ಕೃಷ್ಣಗೆ ಜೋಡಿಯಾದ ರಚಿತಾ ರಾಮ್; ಯಾವ ಸಿನಿಮಾ?
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಮದುವೆ ಆಗುತ್ತಿದ್ರೂ ನಾನು 'Mr.ಬ್ಯಾಚುಲರ್' ಅಂತಿದ್ದಾರೆ ಡಾರ್ಲಿಂಗ್ ಕೃಷ್ಣ
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.
ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ.
ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.