ಮದುವೆ ಆಗುತ್ತಿದ್ರೂ ನಾನು 'Mr.ಬ್ಯಾಚುಲರ್' ಅಂತಿದ್ದಾರೆ ಡಾರ್ಲಿಂಗ್ ಕೃಷ್ಣ

ಡಾರ್ಲಿಂಗ್ ಕೃಷ್ಣ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ಬ್ಯುಸಿ ಇರುವ ನಟ. ಅಭಿನಯ, ನಿರ್ದೇಶನ ಮತ್ತು ನಿರ್ಮಾಣ ಎಲ್ಲಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ ಈ ವರ್ಷ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಡಾರ್ಲಿಂಗ್ ಕೃಷ್ಣ ಇದೀಗ ಮತ್ತೊಂದು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೊಸ ವರ್ಷದ ಪ್ರಯುಕ್ತ ಚಿತ್ರದ ಟೈಟಲ್ ಅನೌನ್ಸ ಮಾಡಿ ಚಿತ್ರಪ್ರಿಯರ ಗಮನ ಸೆಳೆದಿದ್ದಾರೆ ಕೃಷ್ಣ. ಹೌದು, ಹೊಸ ಸಿನಿಮಾಗೆ 'Mr ಬ್ಯಾಚುಲರ್' ಎಂದು ಟೈಟಲ್ ಇಡಲಾಗಿದೆ. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಾಯ್ಡು ಬಂದರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸದ್ಯ ಹೊಸ ವರ್ಷದ ಪ್ರಯುಕ್ತ ಟೈಟಲ್ ಬಹಿರಂಗ ಪಡಿಸಿರುವ ಚಿತ್ರತಂಡ ಸದ್ಯದಲ್ಲೇ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ಮುಂದೆ ಬರುವುದಾಗಿ ಹೇಳಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ ಸಿನಿಮಾತಂಡ. ಈ ಸಿನಿಮಾದಲ್ಲಿ ಕೃಷ್ಣಗೆ ನಾಯಕಿಯಾಗಿ ಮಿಲನಾ ನಾಗರಾಜ್ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಅಭಿಮಾನಿಗಳ ಕುತೂಹಲ.

Darling Krishna and Milana Nagaraj Next Movie Titled as Mr Bachelor

ಇನ್ನು ಡಾರ್ಲಿಂಗ್ ಸದ್ಯ ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಶುಗರ್ ಫ್ಯಾಕ್ಟರಿ ಸಿನಿಮಾದ ಚಿತ್ರೀಕರಣ ಸಹ ಪ್ರಾರಂಭ ಮಾಡಿದ್ದಾರೆ. ಈ ನಡುವೆ ಮದುವೆ ತಯಾರಿ ಸಹ ನಡೆಸುತ್ತಿದ್ದಾರೆ. ಇತ್ತೀಚಿಗೆ ಅದ್ದೂರಿಯಾಗಿ ಬ್ಯಾಚುಲರ್ ಪಾರ್ಟಿ ಮಾಡಿ ಮುಗಿಸಿದ್ದಾರೆ ಕೃಷ್ಣ ಮತ್ತು ಮಿಲನಾ.

ಬ್ಯಾಚುಲರ್ ಪಾರ್ಟಿಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೃಷ್ಣ ಮತ್ತು ಮಿಲನಾ ಇಬ್ಬರು ಇದೆ ವರ್ಷ ಫೆಬ್ರವರಿ 14ರಂದು ಹಸೆಮಣೆ ಏರುತ್ತಿದ್ದಾರೆ. ಇಬ್ಬರ ಮದುವೆಗೆ ಒಂದು ತಿಂಗಳು ಮಾತ್ರ ಬಾಕಿ ಇದೆ. ಮದುವೆ ಸಮಾರಂಭ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಮಿಲನಾ ಈ ಹಿಂದೆಯೇ ಬಹಿರಂಗ ಪಡಿಸಿದ್ದರು.

Recommended Video

ಮಾತಾಡೋರು ಇದ್ರೇನೆ ಅವರು ಬದುಕಿದ್ದಾರೆ ಅನೋದು ಗೊತ್ತಾಗೋದು | Filmibeat Knnada

More from Filmibeat

English summary
Kannada Actor Darling Krishna and Milana Nagaraj Next Movie Titled as Mr Bachelor.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X