For Quick Alerts
  ALLOW NOTIFICATIONS  
  For Daily Alerts

  ಹನಿಮೂನ್ ಪ್ರವಾಸಕ್ಕೆ ತೆರಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ

  |

  ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಜೋಡಿ ಕೂಡ ಒಂದು. ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯ ದಿನ ಹಸೆಮಣೆ ಏರಿದ ಈ ಜೋಡಿ ಈಗ ಹನಿಮೂನ್ ಪ್ರವಾಸಕ್ಕೆ ತೆರಳಿದ್ದಾರೆ. ಕೃಷ್ಣ ಮತ್ತು ಮಿಲನಾ ಹನಿಮೂನ್ ಪ್ರವಾಸದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

  ಹನಿಮೂನ್ ಮೂಡ್ ನಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ | Filmibeat Kannada

  ಅಂದಹಾಗೆ ಇವರು ಹನಿಮೂನ್ ಪ್ರವಾಸಕ್ಕೆ ಆಯ್ಕೆ ಮಾಡಿಕೊಂಡ ಸ್ಥಳ ಮಾಲ್ಡೀವ್ಸ್. ಸೆಲೆಬ್ರಿಟಿಗಳ ನೆಚ್ಚಿನ ತಾಣ ಎಂದೇ ಖ್ಯಾತಿಗಳಿಸಿರುವ ಮಾಲ್ಡೀವ್ಸ್ ಗೆ ಸ್ಯಾಂಡಲ್ ವುಡ್ ನ ಡಾರ್ಲಿಂಗ್ ಜೋಡಿ ಕೂಡ ಎಂಟ್ರಿ ಕೊಟ್ಟಿದೆ. ಹನಿಮೂನ್ ಪ್ರವಾಸವನ್ನು ಎಂಜಾಯ್ ಮಾಡುತ್ತಿರುವ ಮಿಲನಾ ಮತ್ತು ಕೃಷ್ಣ ಒಂದಿಷ್ಟು ಸುಂದರ ಫೋಟೋಗಳನ್ನು ಹರಿಬಿಟ್ಟಿದ್ದಾರೆ.

  ಎಂಟು ವರ್ಷದ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಮಿಲನಾ-ಕೃಷ್ಣಎಂಟು ವರ್ಷದ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಮಿಲನಾ-ಕೃಷ್ಣ

  ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ನವಜೋಡಿಗಳ ಸುಂದರ ಫೋಟಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಕಾಮೆಂಟ್ ಹರಿದುಬರುತ್ತಿದೆ.

  ಅದ್ದೂರಿಯಾಗಿ ವಿವಾಹವಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮದುವೆಗೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಸಹ ಸಾಕ್ಷಿಯಾದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದಂಪತಿ ಸೇರಿದಂತೆ ಅನೇಕರು ಕೃಷ್ಣ ಮಿಲನಾ ಮದುವೆಗೆ ಹಾಜರಾಗಿ ಆಶೀರ್ವಾದ ಮಾಡಿದ್ದಾರೆ.

  ಈ ಜೋಡಿ ಸದ್ಯ ಲವ್ ಮಾಕ್ ಟೇಲ್-2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಲವ್ ಮಾಕ್ ಟೇಲ್-2 ಇನ್ನು ಉಳಿದ ಭಾಗದ ಚಿತ್ರೀಕರಣವನ್ನು ಸದ್ಯದಲ್ಲೇ ಪ್ರಾರಂಭಮಾಡಲಿದೆ. ಇತ್ತೀಚಿಗಷ್ಟೆ ಅಂದರೆ ಕೃಷ್ಣ ಮದುವೆ ದಿನವೇ ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡನ್ನು ರಿಲೀಸ್ ಮಾಡಲಾಗಿದೆ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಹಿಟ್ ಆಗಿರುವುದರಿಂದ ಪಾರ್ಟ್-2 ಹೇಗಿರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.

  English summary
  Actor Darling Krishna and Milana Nagaraj share honeymoon photos from maldives.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X